siddaramaiah dk shivakumar : ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲೆತ್ನಿಸಿದ ಡಿಕೆಶಿ, ಸಿದ್ದರಾಮಯ್ಯ ಖಾಕಿ ವಶಕ್ಕೆ

ಬೆಂಗಳೂರು : siddaramaiah dk shivakumar : ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ರಾಜಕೀಯ ಕೆಸರೆರೆಚಾಟಕ್ಕೆ ವೇದಿಕೆ ಕಲ್ಪಿಸಿದಂತಾಗಿದೆ. ಸಂತೋಷ್​ ಪಾಟೀಲ್​ ಯಾರೆಂಬುದೇ ನನಗೆ ತಿಳಿದಿಲ್ಲ ಎನ್ನುವುದು ಸಚಿವ ಈಶ್ವರಪ್ಪ ವಾದವಾಗಿದ್ದರೆ 40 ಪರ್ಸೆಂಟ್​ ಕಮಿಷನ್​ ಕೇಳಿದ ಈಶ್ವರಪ್ಪರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್​ ಪಟ್ಟು ಹಿಡಿದಿದೆ. ಈ ಸಂಬಂಧ ಇಂದು ಪ್ರತಿಭಟನಾ ರ್ಯಾಲಿ ನಡೆಸಿದ ಕಾಂಗ್ರೆಸ್​ ನಾಯಕರು ಸಿಎಂ ಬಸವರಾಜ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.


ರೇಸ್​ ಕೋರ್ಸ್​ ರಸ್ತೆಯ ಕಾಂಗ್ರೆಸ್​ ಭವನದಿಂದ ರ್ಯಾಲಿ ನಡೆಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಸೇರಿದಂತೆ ವಿವಿಧ ಕಾಂಗ್ರೆಸ್​ ನಾಯಕರು ಹಾಗೂ ಕಾರ್ಯಕರ್ತರನ್ನು ರೇಸ್​ ಕೋರ್ಸ್ ರಸ್ತೆಯಲ್ಲಿ ಪೊಲೀಸರು ತಡೆದಿದ್ದಾರೆ. ಕಾಲ್ನಡಿಗೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಕಾಂಗ್ರೆಸ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್​ ನಾಯಕರು ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಯತ್ನಿಸುವುದು ಮೊದಲೇ ತಿಳಿದಿದ್ದ ಹಿನ್ನೆಲೆಯಲ್ಲಿ ಪೊಲೀಸರು ಕುಮಾರ ಕೃಪಾ ರಸ್ತೆಯಲ್ಲಿ ಬ್ಯಾರಿಕೇಡ್​ಗಳನ್ನು ಅಳವಡಿಸಿದ್ದು ಮಾತ್ರವಲ್ಲದೇ ರೇಸ್​ ಕೋರ್ಸ್​ ರಸ್ತೆ ತುಂಬಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.


ಪ್ರತಿಭಟನಾ ರ್ಯಾಲಿಯ ವೇಳೆ ಮಾತನಾಡಿದವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಡಾ. ಬಿ.ಆರ್​ ಅಂಬೇಡ್ಕರ್​ ದೇಶದಲ್ಲಿ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.


ಇದೇ ವೇಳೆ ಮಾತನಾಡಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್, ಕೆ. ಎಸ್​ ಈಶ್ವರಪ್ಪರನ್ನು ಭ್ರಷ್ಟಾಚಾರದ ಪ್ರಕರಣದಲ್ಲಿ ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿ : Santhosh Patil Suicide Case: ಸಂತೋಷ್‌ ಪಾಟೀಲ್‌ ಆತ್ಮಹತ್ಯೆ : ಸಚಿವ ಕೆ.ಎಸ್.‌ ಈಶ್ವರಪ್ಪ ವಿರುದ್ದ ಉಡುಪಿಯಲ್ಲಿ ಪ್ರಕರಣ ದಾಖಲು

ಇದನ್ನೂ ಓದಿ : IGP Devajyoti Ray : ಸಂತೋಷ್‌ ಆತ್ಮಹತ್ಯೆ ಪ್ರಕರಣ, ಎಲ್ಲಾ ಆಯಾಮದಲ್ಲಿಯೂ ತನಿಖೆ : ಪಶ್ಚಿಮ ವಲಯ ಐಜಿಪಿ

siddaramaiah dk-shivakumar try to gherav basavaraj bommai house urgng to dismissed of ks eshwarappa

Comments are closed.