ಬೆಂಗಳೂರು : siddaramaiah press meet:ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಸಂಬಂಧ ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಆರೋಪಿಗಳನ್ನು ಬಂಧಿಸಲು ವಿಳಂಬ ನೀತಿಯನ್ನು ತೋರುವ ಮೂಲಕ ತನಿಖೆಯ ಹಾದಿಯನ್ನು ತಪ್ಪಿಸುವ ಕಾರ್ಯ ನಡೆದಿದೆ. ಇದು ಸಾಲದು ಎಂಬಂತೆ ತನಿಖಾ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪಾಲ್ರನ್ನೇ ಎತ್ತಂಗಡಿ ಮಾಡುವ ಮೂಲಕ ಈ ಪ್ರಕರಣದ ತನಿಖೆಯನ್ನು ಇನ್ನಷ್ಟು ತಡ ಮಾಡಿದ್ದಾರೆ .ಈ ಹಗರಣದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರವೇ ನಡೆದಿದೆ. ಆದರೆ ಅದನ್ನು ಈ ಬಿಜೆಪಿ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯನ್ನು ಹಾಡಿ ಹೊಗಳಿದ್ದಾರೆ. ಬೊಮ್ಮಾಯಿ ಸರ್ಕಾರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಇಷ್ಟು ಸಾಲದು ಎಂಬಂತೆ ಬೊಮ್ಮಾಯಿ ಸರ್ಕಾರ ಕಾಮನ್ ಮ್ಯಾನ್ ಸರ್ಕಾರ ಅಂತೆಲ್ಲ ವ್ಯಾಖ್ಯಾನ ನೀಡಿದ್ದಾರೆ. ಅಸಲಿಗೆ ಇದೊಂದು ಕಮಿಷನ್ ಸರ್ಕಾರ. ಈ ಬಗ್ಗೆ ರಾಜ್ಯದ ಜನತೆಗೆ ಗೊತ್ತಾಗಿದೆ. ಈ ಕಮಿಷನ್ ಸರ್ಕಾರದ ಅಕ್ರಮಗಳಿಗೆ ಕೇಂದ್ರ ಸರ್ಕಾರ ಕೂಡ ಸಹಾಯ ನೀಡುತ್ತಿದೆ ಎಂದು ಹರಿಹಾಯ್ದರು.
ಇಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮಧ್ಯವರ್ತಿಗಳನ್ನೇ ಕಿಂಗ್ಪಿನ್ ಎಂದು ಬಿಂಬಿಸಲಾಗುತ್ತಿದೆ. ನಿಜವಾದ ಕಿಂಗ್ ಪಿನ್ಗಳನ್ನು ಮರೆ ಮಾಡಲಾಗಿದೆ. ಇದೆ ಬಿಜೆಪಿಯು ಈ ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ 10 ಪರ್ಸೆಂಟ್ ಕಮಿಷನ್ ಆರೋಪ ಮಾಡಿತ್ತು. ಆದರೆ ಇದೀಗ ಇದೇ ಬಿಜೆಪಿ ಸರ್ಕಾರವು 40 ಪರ್ಸೆಂಟ್ ಕಮಿಷನ್ ಎಂಬ ಆರೋಪ ಎದುರಿಸುತ್ತಿದೆ ಎಂದು ಹೇಳಿದರು.
ಇದನ್ನು ಓದಿ : Asha Bhat : ನಾಯಕಿಯಿಂದ ಗಾಯಕಿ ಪಟ್ಟಕ್ಕೆ: ಇದು ರಾಬರ್ಟ್ ಬೆಡಗಿಯ ಹೊಸ ಕಹಾನಿ
ಇದನ್ನೂ ಓದಿ : Pooja Hegde : ಕಾಪು ಮಾರಿಗುಡಿಗೆ ರಾಧೇ ಶ್ಯಾಮ್ ಬೆಡಗಿ ಪೂಜಾ ಹೆಗ್ಡೆ : ಸೋಲಿನಿಂದ ಕಂಗೆಟ್ಟ ನಟಿಗೆ ದೇವರ ಅಭಯ
siddaramaiah press meet over psi recruitment scam bjp commission