siddaramaiah press meet : ನಿಮ್ಮದು ಕಾಮನ್​ ಮ್ಯಾನ್​ ಸರ್ಕಾರವಲ್ಲ, ಕಮಿಷನ್​ ಸರ್ಕಾರ : ಸಿದ್ದರಾಮಯ್ಯ ಕಿಡಿ

ಬೆಂಗಳೂರು : siddaramaiah press meet:ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದ ಸಂಬಂಧ ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.


ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ ಆರೋಪಿಗಳನ್ನು ಬಂಧಿಸಲು ವಿಳಂಬ ನೀತಿಯನ್ನು ತೋರುವ ಮೂಲಕ ತನಿಖೆಯ ಹಾದಿಯನ್ನು ತಪ್ಪಿಸುವ ಕಾರ್ಯ ನಡೆದಿದೆ. ಇದು ಸಾಲದು ಎಂಬಂತೆ ತನಿಖಾ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್​ ಪಾಲ್​ರನ್ನೇ ಎತ್ತಂಗಡಿ ಮಾಡುವ ಮೂಲಕ ಈ ಪ್ರಕರಣದ ತನಿಖೆಯನ್ನು ಇನ್ನಷ್ಟು ತಡ ಮಾಡಿದ್ದಾರೆ .ಈ ಹಗರಣದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರವೇ ನಡೆದಿದೆ. ಆದರೆ ಅದನ್ನು ಈ ಬಿಜೆಪಿ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.


ಕೇಂದ್ರ ಗೃಹ ಸಚಿವ ಅಮಿತ್​ ಶಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಬೆಂಗಳೂರಿಗೆ ಆಗಮಿಸಿದ್ದ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯನ್ನು ಹಾಡಿ ಹೊಗಳಿದ್ದಾರೆ. ಬೊಮ್ಮಾಯಿ ಸರ್ಕಾರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಇಷ್ಟು ಸಾಲದು ಎಂಬಂತೆ ಬೊಮ್ಮಾಯಿ ಸರ್ಕಾರ ಕಾಮನ್​ ಮ್ಯಾನ್​ ಸರ್ಕಾರ ಅಂತೆಲ್ಲ ವ್ಯಾಖ್ಯಾನ ನೀಡಿದ್ದಾರೆ. ಅಸಲಿಗೆ ಇದೊಂದು ಕಮಿಷನ್​ ಸರ್ಕಾರ. ಈ ಬಗ್ಗೆ ರಾಜ್ಯದ ಜನತೆಗೆ ಗೊತ್ತಾಗಿದೆ. ಈ ಕಮಿಷನ್​ ಸರ್ಕಾರದ ಅಕ್ರಮಗಳಿಗೆ ಕೇಂದ್ರ ಸರ್ಕಾರ ಕೂಡ ಸಹಾಯ ನೀಡುತ್ತಿದೆ ಎಂದು ಹರಿಹಾಯ್ದರು.


ಇಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮಧ್ಯವರ್ತಿಗಳನ್ನೇ ಕಿಂಗ್​ಪಿನ್​ ಎಂದು ಬಿಂಬಿಸಲಾಗುತ್ತಿದೆ. ನಿಜವಾದ ಕಿಂಗ್​ ಪಿನ್​ಗಳನ್ನು ಮರೆ ಮಾಡಲಾಗಿದೆ. ಇದೆ ಬಿಜೆಪಿಯು ಈ ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ 10 ಪರ್ಸೆಂಟ್​ ಕಮಿಷನ್​ ಆರೋಪ ಮಾಡಿತ್ತು. ಆದರೆ ಇದೀಗ ಇದೇ ಬಿಜೆಪಿ ಸರ್ಕಾರವು 40 ಪರ್ಸೆಂಟ್​ ಕಮಿಷನ್​​ ಎಂಬ ಆರೋಪ ಎದುರಿಸುತ್ತಿದೆ ಎಂದು ಹೇಳಿದರು.

ಇದನ್ನು ಓದಿ : Asha Bhat : ನಾಯಕಿಯಿಂದ ಗಾಯಕಿ ಪಟ್ಟಕ್ಕೆ: ಇದು ರಾಬರ್ಟ್ ಬೆಡಗಿಯ ಹೊಸ ಕಹಾನಿ

ಇದನ್ನೂ ಓದಿ : Pooja Hegde : ಕಾಪು ಮಾರಿಗುಡಿಗೆ ರಾಧೇ ಶ್ಯಾಮ್ ಬೆಡಗಿ ಪೂಜಾ ಹೆಗ್ಡೆ : ಸೋಲಿನಿಂದ ಕಂಗೆಟ್ಟ ನಟಿಗೆ ದೇವರ ಅಭಯ

siddaramaiah press meet over psi recruitment scam bjp commission

Comments are closed.