ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿರೋದು ಒಂದೆಡೆ ಆತಂಕ ಸೃಷ್ಟಿಸಿದರೆ ಮತ್ತೊಂದೆಡೆ ವಿದೇಶಿ ಪ್ರಜೆಗಳು ಕಾಣೆಯಾಗುತ್ತಿರೋದು ಕೂಡ ಮತ್ತೊಂದು ಕಳವಳಕ್ಕೆ ಕಾರಣವಾಗಿದೆ. ಶಿವಮೊಗ್ಗದಲ್ಲಿ ಈ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವಿಮಾನ ನಿಲ್ದಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕುಟುಕಿದ್ದಾರೆ.
ಏರ್ಪೋರ್ಟ್ನಲ್ಲಿ ಭ್ರಷ್ಟಾಚಾರ ನಡೆಯುತ್ತಿರೋದಕ್ಕೆ ಪ್ರಯಾಣಿಕರು ಮಿಸ್ಸಿಂಗ್ ಆಗುತ್ತಿದ್ದಾರೆ. ಈ ಸರ್ಕಾರದ ಮೇಲೆ ಮೊದಲೇ ಯಾವ ನಿರೀಕ್ಷೆ ಇಲ್ಲ.ಬಿಜೆಪಿ ಸರ್ಕಾರವು ಆಡಳಿತ ನಡೆಸೋದರಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಇದೊಂದು 40 ಪರ್ಸೆಂಟ್ ಸರ್ಕಾರ. ಈ ವಿಚಾರದಲ್ಲಿ ನ್ಯಾಯಾಂಗ ತನಿಖೆ ಆಗಬೇಕೆಂದು ಮೋದಿಗೆ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿದ್ದೇವೆ . ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ಬರಬೇಕು. ಆದರೆ ಬಿಜೆಪಿಯವರಿಗೆ ಧಮ್ ಇಲ್ಲ ಅದಿಕ್ಕೆ ತನಿಖೆ ಮಾಡುತ್ತಿಲ್ಲ. ತನಿಖೆ ಮಾಡಿದರೆ ಬಿಜೆಪಿಯವರು ಬೆತ್ತಲಾಗುತ್ತಾರೆ ಎಂದು ಹೇಳಿದ್ರು.
ಸಿಎಂ ಬದಲಾವಣೆ ಬಗ್ಗೆ ಸಚಿವ ಈಶ್ವರಪ್ಪರೇ ದನಿ ಎತ್ತಿದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ. ಅವರಿಗೆ ತಮ್ಮ ಮುಖ್ಯಮಂತ್ರಿ ಮೇಲೆ ನಂಬಿಕೆ ಇಲ್ಲ. ಅದಕ್ಕಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ. ಈಶ್ವರಪ್ಪ ಒಮ್ಮೊಮ್ಮೆ ಬಾಯಿ ತಪ್ಪಿ ಸತ್ಯ ಮಾತನಾಡಿಬಿಡ್ತಾರೆ ಅಂತಾ ವ್ಯಂಗ್ಯವಾಡಿದ್ರು.
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಪ್ರಧಾನಿ ಮೋದಿ ಭೇಟಿ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುತ್ತಿದೆ. ಆದರೆ ಸ್ಥಳೀಯ ಜೆಡಿಎಸ್ ನಾಯಕರು ಕಾಂಗ್ರೆಸ್ಗೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಪಕ್ಕಾ ಎಂತಲೂ ವಿಶ್ವಾಸ ವ್ಯಕ್ತಪಡಿಸಿದರು.
Siddaramaiah’s outrage against BJP government
ಇದನ್ನು ಓದಿ : H VISHWANATH:ಸ್ವಪಕ್ಷೀಯರ ವಿರುದ್ಧವೇ ಮತ್ತೊಮ್ಮೆ ಗುಡುಗಿದ ಹೆಚ್. ವಿಶ್ವನಾಥ್ : ಯಡಿಯೂರಪ್ಪ, ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ
ಇದನ್ನು ಓದಿ : Omicron Meeting : ಓಮಿಕ್ರಾನ್ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ

