Siddaramayya hospitalised: ಶಸ್ತ್ರಚಿಕಿತ್ಸೆ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು: (Siddaramayya hospitalised) ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಸ್ತ್ರಚಿಕಿತ್ಸೆ ಹಿನ್ನಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವುದಾಗಿ ಮಾಹಿತಿ ತಿಳಿದುಬಂದಿದೆ.

ಈ ಹಿಂದೆ ಮೂಲವ್ಯಾದಿ ಸಮಸ್ಯೆ ಸಿದ್ದರಾಮಯ್ಯ (Siddaramayya hospitalised)ನವರಿಗೆ ಕಾಡಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಚಿಕಿತ್ಸೆ ಪಡೆದ ಜಾಗದಲ್ಲಿ ಸಣ್ಣ ಗುಳ್ಳೆ ಕಾಣಿಸಿಕೊಂಡಿದ್ದು, ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆ ಮಾಡಿಕೊಳ್ಳ ಬೇಕಾಗಿ ವೈದ್ಯರು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಎಚ್‌ಎಎಲ್‌ ರಸ್ತೆಯ ಮಣಿಪಾಲ್‌ ಆಸ್ಪತ್ರೆಗೆ ಸಿದ್ದರಾಮಯ್ಯನವರು ದಾಖಲಾಗಿದ್ದು, ಬೆಳಗ್ಗೆ 11 ಗಂಟೆ ಸುಮಾರಿಗೆ ಸಿದ್ದರಾಮಯ್ಯನವರಿಗೆ ಮೂಲವ್ಯಾದಿ ಆಪರೇಷನ್ ಮಾಡಲಾಗುವುದು. ಶಸ್ತ್ರಚಿಕಿತ್ಸೆಯ ಬಳಿಕ ಸಂಜೆ ಡಿಸ್ಚಾರ್ಜ್‌ ಆಗಲಿದ್ದಾರೆ. ಶಸ್ತ್ರ ಚಿಕಿತ್ಸೆ ನಡೆದ ಹಿನ್ನಲೆಯಲ್ಲಿ ನಾಲ್ಕು ದಿನಗಳ ಕಾಲ ಸಿದ್ದರಾಮಯ್ಯನವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದು, ಈ ವೇಳೆಯಲ್ಲಿ ಸಾರ್ವಜನಿಕರ ಭೇಟಿಗೆ ಅವಕಾಶವಿರುವುದಿಲ್ಲ.

ಕ್ಷೇತ್ರ ಹುಡುಕಾಟದಲ್ಲಿ ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ವರುಣಾ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಒತ್ತಾಯ ಕೇಳಿಬಂದಿದೆ. ಎಲ್ಲಿ ಸ್ಪರ್ಧಿಸಬೇಕು ಎಂಬ ಬಗ್ಗೆ ಸಿದ್ದು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಕೋಲಾರ, ಚಾಮರಾಜಪೇಟೆ ಹಾಗೂ ವರುಣಾ ಕ್ಷೇತ್ರದಲ್ಲಿಯೂ ಕೂಡ ಸ್ಪರ್ಧೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ.

ಇದನ್ನೂ ಓದಿ : leopard attack: ಚಿರತೆ ದಾಳಿಗೆ ಯುವತಿ ಬಲಿ: 7.5 ಲಕ್ಷ ರೂ. ಪರಿಹಾರ ಘೋಷಣೆ

ಇದನ್ನೂ ಓದಿ : Life threat to Pramod Muthalik: ಪ್ರಮೋದ್‌ ಮುತಾಲಿಕ್‌ ಗೆ ಜೀವ ಬೆದರಿಕೆ : ದೂರು ದಾಖಲು

ಇದನ್ನೂ ಓದಿ : Leopard in Bangalore: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಚಿರತೆ ಓಡಾಡುವ ದೃಶ್ಯ ಸಿಸಿಟಿಯಲ್ಲಿ ಸೆರೆ

ಇದನ್ನೂ ಓದಿ : MODI ROAD SHOW : ದಾಖಲೆ ಬರೆದ ಪ್ರಧಾನಿ ಮೋದಿ ಮೆಗಾ ರೋಡ್ ಶೋ.. 50 ಕಿ.ಮೀ 16 ಕ್ಷೇತ್ರ ಕವರ್

(Siddaramayya hospitalised) Opposition leader Siddaramaiah was admitted to the hospital this morning, sources said. It is known that he has been admitted to Manipal Hospital due to surgery.

Comments are closed.