ಒಂದು ತಿಂಗಳಲ್ಲಿ ಕಾಂಗ್ರೆಸ್ ಗೆ ರಾಜೀನಾಮೆ ಕೊಡ್ತಾರೆ ಸಿದ್ದರಾಮಯ್ಯ

ಮಸ್ಕಿ : ಮುಂದಿನ ಒಂದು ತಿಂಗಳ ಒಳಗಾಗಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡ್ತಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳ ಉಂಟಾಗಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಇದೀಗ ಕಾಂಗ್ರೆಸ್ ಪಕ್ಷವನ್ನು ಬಿಡ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಮಸ್ಕಿಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಹಿಂದೆ ಸಿದ್ದರಾಮಯ್ಯ ತನ್ನ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್‌ನಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು ಕಾಂಗ್ರೆಸ್ ಪಕ್ಷ ಬಿಡಲಿದ್ದಾರೆ. ಇದೇ ಕಾರಣಕ್ಕಾಗಿಯೇ ಅವರು 90 ಜೊತೆ ಬಟ್ಟೆ ಹೊಲಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಉಪಚುನಾವಣೆಯಲ್ಲಿ ಬಿಜೆಪಿ ಈಗಾಗಲೇ ಪಾಂಚಜನ್ಯ ಕಹಳೆ ಮೊಳಗಿಸಿದ್ದು, ಈ ಬಾರಿಯೂ ಬಿಜೆಪಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.

Comments are closed.