ಬೆಂಗಳೂರು: ನಮ್ಮ ದೇಶದಲ್ಲಿ ಪ್ರತಿ ಜನರಿಗೂ ಮಾತನಾಡುವುದಕ್ಕೆ ಸ್ವಾತಂತ್ರ್ಯ ಇದೆ. ತಮ್ಮ ಅಭಿಪ್ರಾಯವನ್ನು ತಿಳಿಸುವುದಕ್ಕೂ ಸ್ವಾತಂತ್ರ್ಯ ಇದೆ. ಆದರೆ ಒಬ್ಬ ಅಧಿಕಾರಿ ಮೇಲೆ ಇನ್ನೊಬ್ಬ ಅಧಿಕಾರಿ ಆರೋಪ ಮಾಡಿ ಸುದ್ದಿಗೋಷ್ಠಿ ನಡೆಸುವಂತಿಲ್ಲ, ಇಲಾಖೆಗೆ ಸಂಬಂಧಿಸಿದ ವಿಚಾರಗಳನ್ನು ಅಧಿಕಾರಿಗಳು ಮಾಧ್ಯಮಗಳ ಮುಂದೆ ಬಾಯ್ಬಿಡುವಂತಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಾಕೀತು ಮಾಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಸಚಿವ ಆರ್. ಅಶೋಕ್, ಇನ್ಮುಂದೆ ಯಾವುದೇ ಅಧಿಕಾರಿಗಳು ಪರಸ್ಪರ ಜಗಳ ಮಾಡಿಕೊಂಡು ಮಾಧ್ಯಮಗಳ ಮುಂದೆ ಬಂದು ಹೇಳಿಕೆ ನೀಡುವಂತಿಲ್ಲ. ಯಾವುದೇ ವಿಚಾರಗಳ ಬಗ್ಗೆ ಸುದ್ದಿಗೋಷ್ಠಿ ನಡೆಸುವಂತಿಲ್ಲ.
ಇದನ್ನೂ ಓದಿ: BSY ಆಪ್ತರಿಗೆ ಸಂಪುಟ ದರ್ಜೆ ಸ್ಥಾನಮಾನ : ಜೀವರಾಜ್, ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿ
ಸರ್ಕಾರಕ್ಕೆ ಮುಜುಗರವುಂಟಾಗುವ ಕೆಲಸವನ್ನು ಅಧಿಕಾರಿಗಳು ಮಾಡಬಾರದು. ಇಲಾಖೆಗಳಿಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಲು, ಮಾಹಿತಿ ತಿಳಿಸಲು ಆಯಾ ಇಲಾಖೆ ಸಚಿವರುಗಳಿದ್ದಾರೆ ಎಂದು ಖಡಕ್ ಆಗಿ ಎಚ್ಚರಿಸಿದ್ದಾರೆ.
ಮೈಸೂರಿನಲ್ಲಿ ನಡೆದ ಮಹಿಳಾ ಅಧಿಕಾರಿಗಳ ನಡುವಿನ ಜಟಾಪಟಿ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಧಿಕಾರಿಗಳ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದ್ದು, ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸುವ ಮುನ್ನ ಅನುಮತಿ ಪಡೆದಿರಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ, ಅವರದ್ದುತಾಲಿಬಾನ್ ಸಂಸ್ಕೃತಿ : ಕಟೀಲ್