MYSORE : ಮೈಸೂರು ಪಾಲಿಕೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ : ಸುನಂದಾ ಪಾಲನೇತ್ರ ಹೊಸ ಮೇಯರ್‌

ಮೈಸೂರು : ಇತಿಹಾಸದಲ್ಲಿಯೇ ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಸ್ಥಾನವನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬಿಜೆಪಿಯ ಸುನಂದಾ ಪಾಲನೇತ್ರ ನೂತನ ಮೇಯರ್‌ ಆಗಿ ಆಯ್ಕೆಯಾಗಿದ್ದು, ಜೆಡಿಎಸ್‌ ಹಾಗೂ ಕಾಂಗ್ರೆಸ್‌ಗೆ ತೀವ್ರ ಮುಖಭಂಗ ಉಂಟಾಗಿದೆ.

ಮೈಸೂರು ಮಹಾನಗರ ಪಾಲಿಕೆಯ 75 ಸ್ಥಾನಗಳಲ್ಲಿ ಬಿಜೆಪಿ 25, ಕಾಂಗ್ರೆಸ್ 20, ಜೆಡಿಎಸ್ 21 ಹಾಗೂ ಇತರೆ 6 ಮಂದಿ ಸದಸ್ಯರಿದ್ದಾರೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡು ಮೇಯರ್‌ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದಾದ ಬೆನ್ನಲ್ಲೇ ಇಂದು ಮೈಸೂರು ಪಾಲಿಕೆಯ ಚುನಾವಣೆ ನಡೆದಿದೆ.

ಮೈಸೂರು ಪಾಲಿಕೆ ಚುನಾವಣೆ ಸಾಕಷ್ಟು ಕುತೂಹಲವನ್ನು ಮೂಡಿಸಿದ ಚುನಾವಣೆಯಲ್ಲಿ, ಬಿಜೆಪಿಯ ಅಭ್ಯರ್ಥಿ ಸುನಂದಾ ಪಾಲನೇತ್ರ 26 ಮತಗಳನ್ನು ಪಡೆದ್ರೆ ಕಾಂಗ್ರೆಸ್ ನ ಶಾಂತಕುಮಾರಿ 22 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಬಿಜೆಪಿಯ ಸುನಂದಾ ಪಾಲನೇತ್ರ ಅವರು ಮೈಸೂರು ಪಾಲಿಕೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ.

ಇದನ್ನೂ ಓದಿ : ಮೈಸೂರು ಜಿಲ್ಲಾಧಿಕಾರಿಯಾಗಿ ಡಾ.ಗೌತಮ್ ಬಗಾದಿ ಅಧಿಕಾರ ಸ್ವೀಕಾರ : ಬಗಾದಿ ಅವರ ಪತ್ನಿ ಮಂಡ್ಯ ಜಿಲ್ಲಾಧಿಕಾರಿ

ಇದನ್ನೂ ಓದಿ : ಮೈಸೂರು ವಿವಿ ಅತ್ಯಾಚಾರ ಪ್ರಕರಣಕ್ಕೆ ಬಿಗ್‌ ಟ್ವೀಸ್ಟ್‌ : ಪೊಲೀಸರ ಮುಂದೆ ಸ್ಪೋಟಕ ಹೇಳಿಕೆ ಕೊಟ್ಟ ಸಂತ್ರಸ್ತೆ

Comments are closed.