The Kashmir Files : ದಿ‌ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ : ಸಿಎಂ ಬಸವರಾಜ್‌ ಬೊಮ್ಮಾಯಿ

ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಸಂಚಲನ ಮೂಡಿಸಿದ ದಿ‌ ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾಗೆ ಕರ್ನಾಟಕದಲ್ಲಿ ಭರ್ಜರಿ ಒಫನಿಂಗ್ ಸಿಕ್ಕಿದೆ. ‌ಕೆಲವೇ ಕೆಲವು ಥಿಯೇಟರ್ ನಲ್ಲಿ ಪ್ರದರ್ಶನ ಕಾಣ್ತಿರೋ ಸಿನಿಮಾಗೆ ಸಖತ್ ರೆಸ್ಪಾನ್ಸ್ ಸಿಕ್ಕಿದ್ದು ಎಲ್ಲಾ ಕಡೆ ಹೌಸ್ ಫುಲ್ ಪ್ರದರ್ಶನ ಕಾಣ್ತಿದೆ. ಈ ಮಧ್ಯೆ ತಮ್ಮ ಬಿಡುವಿಲ್ಲದ ಕಾರ್ಯಬಾಹುಳ್ಯದ ಮಧ್ಯೆಯೂ ಸಿನಿಮಾ ನೋಡಿದ ಸಿಎಂ ಬಸವರಾಜ್ ಬೊಮ್ಮಾಯಿ ಚಿತ್ರಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ನೈಜ ಘಟನೆ ಆಧಾರಿತ ಸಿನಿಮಾ ಎಂಬ ಕಾರಣಕ್ಕೆ ತೀವ್ರ ಮೆಚ್ಚುಗೆ ಹಾಗೂ ಭಾವನಾತ್ಮಕ ಅಭಿಪ್ರಾಯಗಳನ್ನು ಪಡೆದುಕೊಳ್ತಿರೋ ದಿ ಕಾಶ್ಮೀರಿ ಫೈಲ್ಸ್ (The Kashmir Files) ಸಿನಿಮಾವನ್ನು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವೀಕ್ಷಿಸಿದ್ದಾರೆ. ಒರಾಯನ್ ಮಾಲ್ ನಲ್ಲಿ ಸಿನಿಮಾ ವೀಕ್ಷಿಸಿದ ಸಿಎಂಗೆ ಸಚಿವ ಮುನಿರತ್ನ ಸಾಥ್ ನೀಡಿದ್ದಾರೆ. ಇದಕ್ಕೂ ಮುನ್ನ ಪಂಚ ರಾಜ್ಯ ಚುನಾವಣೆಯ ಗೆಲುವಿಗೆ ಶ್ರಮಿಸಿದ ಬಿಜೆಪಿಯ ನಾಯಕರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಪಕ್ಷದ ಸೂಚನೆ ಮೇರೆಗೆ ಸಿನಿಮಾ ವೀಕ್ಷಿಸಲು ತೆರಳುತ್ತಿರುವುದಾಗಿ ಹೇಳಿಕೊಂಡಿದ್ದರು.

ಸಿನಿಮಾ ವೀಕ್ಷಿಸಿದ ಬಳಿಕ ಸಿನಿಮಾ‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಚಿತ್ರತಂಡಕ್ಕೆ ಸ್ಪೆಶಲ್ ಗಿಫ್ಟ್ ನೀಡಿದ್ದಾರೆ.‌ಸಿನಿಮಾ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ಶೇಕಡಾ 100 ರಷ್ಟು ಟ್ಯಾಕ್ಸ್ ವಿನಾಯ್ತಿ ಘೋಷಿಸಿದ್ದಾರೆ. ಸಿನಿಮಾ ನೋಡಿದ ಬಳಿಕ ದಿ ಕಾಶ್ಮೀರಿ ಫೈಲ್ಸ್ (The Kashmir Files) A blood curdling, poignant and honest narrative of the exodus of Kashmir pandith from there homeland ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಸಿನಿಮಾ ತಂಡವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಾಗೂ ಕನ್ನಡಿಗರು ಸಿನಿಮಾ‌ ನೋಡುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತೆರಿಗೆ ವಿನಾಯ್ತಿ ಘೋಷಿಸಿರುವುದಾಗಿ ಸಿಎಂ ಹೇಳಿದ್ದಾರೆ.

1990 ರ ದಶಕದಲ್ಲಿ ಕಾಶ್ಮೀರ ಪಂಡಿತರ ಮೇಲೆ‌ ನಡೆದ ದೌರ್ಜನ್ಯ ಹಾಗೂ ಹತ್ಯೆಯನ್ನು ಆಧರಿಸಿ ಕಾಶ್ಮೀರ ಫೈಲ್ಸ್ (The Kashmir Files) ಸಿನಿಮಾ ನಿರ್ಮಾಣಗೊಂಡಿದ್ದು, ಸಿನಿಮಾದಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಪ್ರಕಾಶ್ ಬೆಳವಾಡಿ, ಮಿಥುನ್ ಚಕ್ರವರ್ತಿ ಸೇರಿದಂತೆ ಹಲವರು ನಟಿಸಿದ್ದಾರೆ. ಸಾಕಷ್ಟು ವಿವಾದಗಳಿಂದಲೂ ಸುದ್ದಿಯಾದ ಈ ಸಿನಿಮಾಕ್ಕೆ ಮಧ್ಯಪ್ರದೇಶ ಸರ್ಕಾರವೂ ತೆರಿಗೆ ವಿನಾಯ್ತಿ ನೀಡಿದೆ. ಅಲ್ಲದೇ ಈ ಸಿನಿಮಾವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಕೂಡಾ ವೀಕ್ಷಿಸಿದ್ದು, ಚಿತ್ರತಂಡವನ್ನು ಭೇಟಿ ಮಾಡಿ ಅಭಿನಂದಿಸಿದ್ದಾರೆ.

ಇದನ್ನೂ ಓದಿ : ಪುನೀತ್‌ ರಾಜ್‌ ಕುಮಾರ್‌ಗೆ ಗೌರವ ಡಾಕ್ಟರೇಟ್ ಘೋಷಿಸಿದ ಮೈಸೂರು ವಿವಿ

ಇದನ್ನೂ ಓದಿ : X ಬಗ್ಗೆ ಬೇಡ Y ಬಗ್ಗೆ ಮಾತಾಡೋಣ : ನಟಿ ರಶ್ಮಿಕಾ ಮಂದಣ್ಣ ಹೊಸ ವರಸೆ

Tax exemption for The Kashmir Files: CM Basavaraj Bommai

Comments are closed.