ಬೆಂಗಳೂರು : ಕರ್ನಾಟಕ 19ನೇ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹಲೋತ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ಅಧಿಕಾರ ಮತ್ತು ಪ್ರಮಾಣವಚನ ಬೋಧಿಸಿದ್ದಾರೆ. ಥಾವರ್‌ಚಂದ್ ಗೆಹಲೋತ್ ಅವರು ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಈ ಹಿಂದೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದರು. ಹಲವು ವರ್ಷಗಳ ರಾಜಕೀಯ ಅನುಭವವನ್ನು ಹೊಂದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿರ್ಗಮಿತ ರಾಜ್ಯಪಾಲ ವಾಜುಭಾಯಿ ವಾಲಾ, ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರು ಸಮಾರಂಭದಲ್ಲಿ ಭಾಗಿಯಾಗಿದ್ದರು.