cm basavaraj bommai : ಸಂಪುಟ ವಿಸ್ತರಣೆ ಸಂಬಂಧ ದೆಹಲಿ ಭೇಟಿ ನೀಡುತ್ತಿಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು :cm basavaraj bommai : ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡುತ್ತಿದ್ದಾರೆ ಎಂಬ ಸುದ್ದಿ ಹೊರ ಬಿದ್ದ ಬಳಿಕ ರಾಜ್ಯದಲ್ಲಿ ಮತ್ತೆ ಸಂಪುಟ ವಿಸ್ತರಣೆಯಾಗುತ್ತಾ ಅಥವಾ ಪುನರ್​ ರಚನೆಯಾಗುತ್ತಾ ಎಂಬ ಸುದ್ದಿಗಳು ರಾಜಕೀಯ ವಲಯಗಳಲ್ಲಿ ತೀವ್ರವಾಗಿ ಹರಿದಾಡುತ್ತಿವೆ. ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಚಾರವಾಗಿ ಸ್ಪಷ್ಟನೆಯನ್ನು ನೀಡಿದರು.


ಸಿಎಂ ಬಸವರಾಜ ಬೊಮ್ಮಾಯಿ ಯಶವಂತಪುರ ಬಳಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಂಪುಟ ವಿಸ್ತರಣೆಗಾಗಿ ನಾನು ದೆಹಲಿ ಪ್ರವಾಸ ಮಾಡುತ್ತಿಲ್ಲ. ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ಅಧ್ಯಕ್ಷರು ಹಾಗೂ ಯಾವುದೇ ನಾಯಕರ ಜೊತೆಯಲ್ಲಿ ಚರ್ಚೆ ನಡೆಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.


ಇಂದು ಸಂಜೆ ನಾನು ದೆಹಲಿ ಕಡೆಗೆ ಪ್ರಯಾಣ ಬೆಳೆಸುತ್ತಿದ್ದೇನೆ. ನಾಳೆ ಸುಪ್ರೀಂಕೋರ್ಟ್ನ ಕಾರ್ಯಕ್ರಮದಲ್ಲಿ ಭಾಗಿಯಾಗುವವನಿದ್ದೇನೆ. ದೆಹಲಿ ಭೇಟಿಗೂ ಸಂಪುಟ ವಿಸ್ತರಣೆಗೂ ಯಾವುದೇ ರೀತಿಯ ಸಂಬಂಧವಿಲ್ಲ. ಶೀಘ್ರದಲ್ಲೇ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅವಕಾಶ ನೀಡಿದರೆ ಈ ಬಗ್ಗೆ ಚರ್ಚೆ ಮಾಡುವೆ ಎಂದು ಹೇಳಿದರು.


ಸಂಪುಟ ವಿಸ್ತರಣೆಯ ಸಂಬಂಧ ದೆಹಲಿಯಲ್ಲಿ ಮಂತ್ರಿಗಳನ್ನು ಭೇಟಿ ಮಾಡುತ್ತಿಲ್ಲ. ಖಾಲಿ ಇರುವ ಸ್ಥಾನಗಳನ್ನು ತುಂಬಬೇಕು ಎಂಬುದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ವರಿಷ್ಠರ ಜೊತೆ ಚರ್ಚೆ ನಡೆಸಲು ಅವಕಾಶ ಸಿಕ್ಕರೆ ಆಗ ಮಾತನಾಡುತ್ತೇನೆ ಎಂದು ಹೇಳಿದರು.

ಇದನ್ನು ಓದಿ : Aravind Kaushik Arrest : ಸ್ಯಾಂಡಲ್‌ವುಡ್ ನಿರ್ದೇಶಕ ಅರವಿಂದ ಕೌಶಿಕ್‌ ಅರೆಸ್ಟ್‌

ಇದನ್ನೂ ಓದಿ : kichcha sudeep vs ajay devgn : ಕಿಚ್ಚ ಸುದೀಪ- ಅಜಯ್​ ದೇವಗನ್​ ನಡುವೆ ಭಾಷಾ ವಾರ್​ ಶುರುವಾಗಿದ್ದು ಹೇಗೆ? ಇಲ್ಲಿದೆ ಕಂಪ್ಲೀಟ್​ ಡೀಟೆಲ್ಸ್​

there is no plan to discussion of cabinet expansion with high command says cm basavaraj bommai

Comments are closed.