Nalin Kumar Katelu : ಯೂಟರ್ನ್‌ ಹೊಡೆದ ನಳಿನ್‌ ಕುಮಾರ್‌ ಕಟೀಲು : ರಾಜೀನಾಮೆ ನೀಡಿಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು : (Nalin Kumar Katelu) ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೇ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾಗಿದದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ತಿಳಿಸಿದ್ದಾರೆ.

ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ, 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : Nalin Kumar Katelu resigns : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್‌ ಕುಮಾರ್‌ ಕಟೀಲು ರಾಜೀನಾಮೆ

ಇದನ್ನೂ ಓದಿ : Rahul Gandhi : ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಟ್ಟಾಗಲಿವೆ : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದು ಹರಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

U-turn hit Nalin Kumar Katelu: BJP state president says he has not resigned.

Comments are closed.