ಬೆಂಗಳೂರು : union minister amit shah :ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಈಗಿನಿಂದಲೇ ಸಕಲ ತಯಾರಿ ಮಾಡಿಕೊಳ್ತಿದೆ. ಮುಂದಿನ ಬಾರಿಯೂ ಅಧಿಕಾರ ಗದ್ದುಗೆಯನ್ನು ಉಳಿಸಿಕೊಳ್ಳಲೇಬೇಕು ಎನ್ನುವುದು ಬಿಜೆಪಿಯ ಹಠವಾಗಿದೆ . ಈ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಕೂಡ ರಣತಂತ್ರಗಳನ್ನು ರೂಪಿಸುತ್ತಿದೆ. ಈಗಾಗಲೇ ಬಿಜೆಪಿ ಚಾಣಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ತಯಾರಿಗೆ ರಣಕಹಳೆ ಮೊಳಗಿಸಿದ್ದಾರೆ .
ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅಮಿತ್ ಶಾರನ್ನು ಸಿಎಂ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು. ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಅನೇಕರು ಸಾಥ್ ನೀಡಿದರು.
ಇನ್ನೂ ಒಂದು ವಿಶೇಷ ಅಂದರೆ ಕೇಂದ್ರ ಗೃಹ ಸಚಿವ ಅಮಿತ್ಶಾರನ್ನು ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಳ್ಳುವುದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಮಾಜಿ ಸಿಎಂ ಯಡಿಯೂರಪ್ಪನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿ 1 ದಿನದ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಭೇಟಿಗೂ ಮುನ್ನ ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಜೊತೆಯಲ್ಲಿ 15 ನಿಮಿಷಗಳ ಕಾಲ ಚರ್ಚೆ ನಡೆಸಿರುವುದು ರಾಜಕೀಯ ದೃಷ್ಟಿಯಿಂದ ಮಹತ್ವದೆನಿಸಿದೆ.
ಇಂದು ಮಧ್ಯಾಹ್ನ ಸಿಎಂ ನಿವಾಸದಲ್ಲಿ ಕೇಂದ್ರ ಸಚಿವ ಅಮಿತ್ ಶಾರಿಗೆ ಭೋಜನ ಕೂಟ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಈ ಔತಣ ಕೂಟಕ್ಕೆ ಯಡಿಯೂರಪ್ಪರನ್ನು ಆಹ್ವಾನಿಸುವ ನೆಪದಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿ ಬಳಿಕ ನೇರವಾಗಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ ಸಿಎಂ ಬೊಮ್ಮಾಯಿ ಅಮಿತ್ ಶಾರನ್ನು ಬರಮಾಡಿಕೊಂಡರು.
ಇಂದು ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ನಾಯಕರು ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಅಮಿತ್ ಶಾ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಯಕರ ತಯಾರಿ ಯಾವ ರೀತಿಯಲ್ಲಿ ಇರಬೇಕು, ಯಾವುದೇ ವಿವಾದಗಳಿಂದ ಸರ್ಕಾರವು ಯಾವ ರೀತಿಯಲ್ಲಿ ಅಂತರ ಕಾಯ್ದುಕೊಳ್ಳಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ .
ಇದನ್ನು ಓದಿ : Amit Shah ಆಗಮನದ ಹೊತ್ತಲ್ಲೇ ಅಶ್ವತ್ಥ ನಾರಾಯಣ್ ಗೆ ಶಾಕ್ : ಭ್ರಷ್ಟಾಚಾರದ ಆರೋಪ ಕೆಂಡಾಮಂಡಲ
ಇದನ್ನೂ ಓದಿ : BJP Secret Meeting : ಸಿಎಂ ಬೊಮ್ಮಾಯಿ ಬದಲಾವಣೆ ? ಕುತೂಹಲ ಮೂಡಿಸಿದೆ ಬಿಜೆಪಿ ತ್ರಿಮೂರ್ತಿಗಳ ಸಭೆ
union minister amit shah arrives in bengaluru