ಉಡುಪಿ : Shobha Karandlaje’s outrage : ರಾಜ್ಯದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಅನೇಕ ಚರ್ಚೆಗಳ ಬಗ್ಗೆ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಖಡಕ್ ಉತ್ತರವನ್ನು ನೀಡಿದ್ದಾರೆ. ಶೋಭಾ ಕರಂದ್ಲಾಜೆ ಹೆಸರನ್ನು ಬದಲಾಯಿಸಿ ಶೋಭಾ ಗೌಡ ಎಂದು ಮಾಡಿಕೊಂಡಿದ್ದಾರೆ ಎಂಬ ವದಂತಿ ವಿಚಾರವಾಗಿ ಉಡುಪಿಯಲ್ಲಿ ಸ್ಪಷ್ಟೀಕರಣ ನೀಡಿದ ಅವರು, ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ . ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡ್ತಿದ್ದಾರೆ. ರಾಜಕಾರಣಿಗಳನ್ನು ಕೆಲವರು ಜೋಕರ್ ಅಂತಾ ಭಾವಿಸುತ್ತಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ರಾಜ್ಯದಲ್ಲಿ ಯಾಕೆ ಈ ಚರ್ಚೆ ಶುರುವಾಯ್ತು ಅನ್ನೋದು ನನಗೆ ಗೊತ್ತಿಲ್ಲ. ಆದರೆ ನನ್ನದೊಂದು ವಿನಂತಿ, ದಯವಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಅಪಪ್ರಚಾರ ಮಾಡುವುದನ್ನು ಮೊದಲು ನಿಲ್ಲಿಸಿ. ಹೆಸರು ಬದಲಾಯಿಸಿಕೊಳ್ಳೋಕೆ ನನಗೇನು ತಲೆಕೆಟ್ಟಿದ್ಯಾ..? ಎಂದು ಪ್ರಶ್ನೆ ಮಾಡಿದ್ದಾರೆ .
ಗಂಗೊಳ್ಳಿಯಲ್ಲಿ ಮೀನುಗಾರಿಕಾ ಜೆಟ್ಟಿ ಕುಸಿದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ಕಳಪೆ ಕಾಮಗಾರಿ ನಡೆದಿದ್ದರೆ ತಕ್ಷಣ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಟ್ಟಿ ನಿರ್ಮಾಣ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಈ ನಿರ್ಮಾಣ ಸಂಸ್ಥೆಗೆ ಮುಂದೆ ಯಾವುದೇ ಕೆಲಸ ಮಾಡಲು ಅವಕಾಶ ನೀಡಬಾರದು. ಈ ಕಾಮಗಾರಿ ಬಗ್ಗೆ ತನಿಖೆ ಮಾಡಿ, ಠೇವಣಿ ಇಟ್ಟಿದ್ದರೆ ಮುಟ್ಟುಗೋಲು ಹಾಕಿ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಇನ್ನು ಇದೇ ವೇಳೆ ಶೋಭಾ ಕರಂದ್ಲಾಜೆ ಫೋಟೋ ತೆಗೆದವರಿಗೆ 5000 ಸಾವಿರ ರೂಪಾಯಿ ಬಹುಮಾನ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ನಾಯಕ ಮಿಥುನ್ ರೈಗೆ ತಿರುಗೇಟು ನೀಡಿದ ಅವರು, ಬರಲಿ ಎಲ್ಲರೂ ಸೆಲ್ಫಿ ತೆಗೆಯಲು ಬರಲಿ, ಆ ಮಿಥುನ್ ರೈ ಮೊದಲು ಬರಲಿ. ಅವನೊಬ್ಬ ಚಿಲ್ಲರೆ ಮನುಷ್ಯ, ಅವನ ಹೇಳಿಕೆಗಳಿಗೆ ತಿರುಗೇಟು ನೀಡಿ ನಾನೇಕೆ ಅವನನ್ನು ದೊಡ್ಡ ಮನುಷ್ಯನನ್ನಾಗಿ ಮಾಡಲಿ ಎಂದು ಟಾಂಗ್ ನೀಡಿದ್ದಾರೆ.
ಇದನ್ನು ಓದಿ : CM Ibrahim :‘ಹಾಳೂರಿಗೆ ಉಳಿದೋನೇ ಗೌಡ’:ಖರ್ಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಗ್ಗೆ ಸಿಎಂ ಇಬ್ರಾಹಿಂ ವ್ಯಂಗ್ಯ
ಇದನ್ನೂ ಓದಿ : CM Bommai hits back : ‘ಆರ್ಎಸ್ಎಸ್ ಬ್ಯಾನ್ ಮಾಡಿ ಎನ್ನುವವರು ಮೂರ್ಖರು’ : ಸಿಎಂ ಬೊಮ್ಮಾಯಿ ತಿರುಗೇಟು
Union Minister Shobha Karandlaje’s outrage against Congress leader Mithun Rai