Vidhan sabha MLA Training‌ : ನೂತನ ಶಾಸಕರಿಗೆ ಇಂದಿನಿಂದ ತರಬೇತಿ ಶಿಬಿರ

ಬೆಂಗಳೂರು : (Vidhan sabha MLA Training) ರಾಜ್ಯದಲ್ಲಿ ಹೊಸದಾಗಿ ವಿಧಾನಸಭೆ ಪ್ರವೇಶ ಪಡೆದ ಶಾಸಕರಿಗೆ ತರಬೇತಿ (Vidhan sabha MLA Training‌) ನೀಡಲಾಗುತ್ತಿದೆ. ಇಂದಿನಿಂದ ಜೂನ್‌ 26 ರಿಂದ ಜೂನ್‌ 28ರ ವರೆಗೂಬೆಂಗಳೂರಿನ ನೆಲಮಂಗಲದ ಸಮೀಪ ಇರುವ ಧರ್ಮಸ್ಥಳ ಕ್ಷೇಮವನದಲ್ಲಿ ತರಬೇತಿ ಶಿಬಿರ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಕರ್ನಾಟಕ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರು ಭಾಗವಹಿಸಲಿದ್ದಾರೆ.

ನೂತನ ಸದ್ಯಸರಿಗೆ ತರಬೇತಿ ನೀಡುವ ಕಾರ್ಯಕ್ರಮಕ್ಕೆ ಮಧ್ಯಾಹ್ನ 12 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಹಾಗೆಯೇ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೂತನ ವಿಧಾನಸಭೆ ಸಭಾಪತಿ ಯು.ಟಿ ಖಾದರ್‌ ವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ, ಕಾನೂನು ಸಚಿವ ಹೆಚ್‌.ಕೆ.ಪಾಟೀಲ್‌ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್‌, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್‌ ಜಮೀರ್‌ ಅಹ್ಮದ್‌ ಖಾನ್‌ ಭಾಗಿಯಾಗಲಿದ್ದಾರೆ. ಇನ್ನು ಈ ಕಾರ್ಯಕ್ರಮ ಮೆರಗು ಹೆಚ್ಚಿಸಲು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ, ಜಮಾತೆ ಇಸ್ಲಾಮಿ ಹಿಂದ್‌ನ ಮಹಮದ್‌ ಕುಂ ಸೇರಿದಂತೆ ವಿವಿಧ ಗುರುಗಳಿಂದ ಸ್ಫೂರ್ತಿದಾಯಕ ಭಾಷಣ ಕೂಡ ಇರುತ್ತದೆ.

ಈ ಬಾರಿ ವಿಧಾನಸಭೆಗೆ ಮೊದಲ ಬಾರಿ ಆಯ್ಕೆಯಾಗಿರುವ ಸುಮಾರು 70 ಶಾಸಕರು ತರಬೇತಿ ಪಡೆಯಲಿದ್ದಾರೆ. ಈಗಾಗಲೇ ತರಬೇತಿ ಕೇಂದ್ರದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಕೂಡ ಮಾಡಿಕೊಂಡಿದ್ದಾರೆ. ಇಂದಿನಿಂದ ಆರಂಭವಾಗುವ ತರಬೇತಿ ಕಾರ್ಯಕ್ರಮವು ಬೆಳಿಗ್ಗೆ 6 ರಿಂದ ಬೆಳಗ್ಗೆ 9 ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲಿದ್ದಾರೆ. ಇನ್ನು ಬೆಳಗ್ಗೆ 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ.

ಇದನ್ನೂ ಓದಿ : Nalin Kumar Katelu : ಯೂಟರ್ನ್‌ ಹೊಡೆದ ನಳಿನ್‌ ಕುಮಾರ್‌ ಕಟೀಲು : ರಾಜೀನಾಮೆ ನೀಡಿಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಇದನ್ನೂ ಓದಿ : Nalin Kumar Katelu resigns : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್‌ ಕುಮಾರ್‌ ಕಟೀಲು ರಾಜೀನಾಮೆ

ಅಷ್ಟೇ ಅಲ್ಲದೇ ಮೂರು ದಿನಗಳ ಕಾಲ ಪ್ರತಿದಿನ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌ ಯಡಿಯೂರಪ್ಪ, ಹೆಚ್‌.ಡಿ ಕುಮಾರಸ್ವಾಮಿ ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾಸ ಏರ್ಪಡಿಸಲಾಗಿದೆ. ಒಟ್ಟಾರೆ ವಿಧಾನಸಭೆಯಲ್ಲಿ ಶಾಸಕರ ಹಕ್ಕುಗಳು ಮತ್ತು ಕರ್ತವ್ಯಗಳು, ಶಾಸನಗಳ ರಚನೆ ಮತ್ತು ಸದಸ್ಯರ ಭಾಗವಹಿಸುವಿಕೆ, ಶೂನ್ಯವೇಳೆ, ಪ್ರಶ್ನೋತ್ತರ, ಜನಮೆಚ್ಚಿಸುವ ಶಾಸಕನಾಗುವುದರ ಬಗ್ಗೆ, ಸಮಿತಿಗಳು ಹಾಗೂ ಸದಸ್ಯರ ಭಾಗವಹಿಸುವಿಕೆ ಸೇರಿದಂತೆ ವಿಧಾನಮಂಡಲ ಕಾರ್ಯಕಲಾಪಗಳು ಮತ್ತು ಶಾಸಕರ ಜವಾಬ್ದಾರಿಗಳ ಕುರಿತು ಹಿರಿಯ ಸದಸ್ಯರು ತರಬೇತಿ ಶಿಬಿರದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

Vidhan sabha MLA Training : Training camp for new MLAs from today

Comments are closed.