ವಿನಯ್ ಕುಲಕರ್ಣಿಯನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಕೆ.ಎಸ್.ಈಶ್ವರಪ್ಪ

ಮಂಗಳೂರು : ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ವಿನಯ್ ಕುಲಕರ್ಣಿಯವರನ್ನು ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತನಾಗಿ ತನಿಖೆಯನ್ನು ನಡೆಸಲಿ ಎಂದಿದ್ದಾರೆ.

ಅಲ್ಲದೆ ಸಿಬಿಐ ತನಿಖೆಯಲ್ಲಿ ವಿನಯ್ ಕುಲಕರ್ಣಿ ಅವರು ನಿರಪರಾಧಿಯಾಗಿ ಹೊರಬಂದರೆ ನಾನು ತುಂಬಾ ಖುಷಿ ಪಡುತ್ತೇನೆ ಎಂದಿದ್ದಾರೆ.

Comments are closed.