ಸಸ್ಪೆನ್ಸ್ ಮುಂದುವರಿದಿದೆ ! ಕೇರಳ ಸಿಎಂ ಕುರ್ಚಿಗೆ ಮೂವರ ಫೈಟ್; ಈ ಮೂವರಲ್ಲಿ ಒಬ್ಬರಿಗೆ ಕುರ್ಚಿ
ಹಿರಿಯ ಕಾಂಗ್ರೆಸ್ ನಾಯಕರ ನಡುವೆ ಸಿಎಂ ಹುದ್ದೆಗೆ ತೀವ್ರ ಪೈಪೋಟಿ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಎಐಸಿಸಿ (AICC) ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ವರದಿ ಸಲ್ಲಿಸಿದ್ದಾರೆ.
ಕೇರಳ : ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ತಮಿಳುನಾಡಿನಲ್ಲಿ ದಳಪತಿ ವಿಜಯ್ ಮತ್ತು ಪಶ್ಚಿಮ ಬಂಗಾಳದಲ್ಲಿ ಸೋವಿಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆದರೆ, ಕೇರಳದಲ್ಲಿ ಮಾತ್ರ ಯುಡಿಎಫ್ ಮೈತ್ರಿಕೂಟದೊಳಗೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಹಲವು ಸುತ್ತಿನ ಮಾತುಕತೆಗಳ ನಂತರವೂ ಸ್ಥಳೀಯ ನಾಯಕರು ಒಮ್ಮತಕ್ಕೆ ಬಾರದ ಕಾರಣ, ಈಗ ಚೆಂಡು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಂಗಳಕ್ಕೆ ತಲುಪಿದೆ.
ಕೇರಳದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ಮೂವರು ಘಟಾನುಘಟಿ ನಾಯಕರ ಹೆಸರುಗಳು ಕೇಳಿಬರುತ್ತಿವೆ. ಪ್ರಸ್ತುತ ವಿರೋಧ ಪಕ್ಷದ ನಾಯಕ ಸತೀಶನ್,ಕೆಪಿಸಿಸಿ ಅಧ್ಯಕ್ಷ ಸುಧಾಕರನ್, ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರ ಹೆಸರು ಬಲವಾಗಿ ಕೇಳಿಬರುತ್ತಿದ್ದು, ಕೆ.ಸಿ. ವೇಣುಗೋಪಾಲ ಹೆಸರು ಮುಂಚೂಣಿಯಲ್ಲಿದೆ. ಹಿರಿಯ ಕಾಂಗ್ರೆಸ್ ನಾಯಕರ ನಡುವೆ ಸಿಎಂ ಹುದ್ದೆಗೆ ತೀವ್ರ ಪೈಪೋಟಿ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಎಐಸಿಸಿ (AICC) ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ವರದಿ ಸಲ್ಲಿಸಿದ್ದಾರೆ.
ಮೈತ್ರಿಕೂಟದ ಪ್ರಮುಖ ಪಕ್ಷವಾದ ಐಯುಎಂಎಲ್ (IUML) ಕೂಡ ಕಾಂಗ್ರೆಸ್ ಯಾರನ್ನು ಆಯ್ಕೆ ಮಾಡಿದರೂ ನದೇಶ ರವಾನಿಸಿದೆ. ಅಂತಿಮವಾಗಿ ಪಕ್ಷದಲ್ಲಿ ಯಾವುದೇ ಭಿನ್ನಮತಮ್ಮ ಅಭ್ಯಂತರವಿಲ್ಲ, ಆದರೆ ಆಯ್ಕೆ ಬೇಗ ಆಗಲಿ ಎಂಬ ಸಂದೇಶವನ್ನು ನೀಡಿದೆ. ಯಾವುದೇ ರೀತಿಯಲ್ಲಿಯೂ ಭಿನ್ನಮತ ಸ್ಫೋಟಗೊಳ್ಳದಂತೆ ನೋಡಿಕೊಳ್ಳಲು ಸೋನಿಯಾ ಗಾಂಧಿ ಅವರೇ ಅಂತಿಮ ಹೆಸರು ಘೋಷಿಸುವ ಸಾಧ್ಯತೆ ಇದೆ.
Also Read: ಇಂದು ತಮಿಳುನಾಡಿನ ಸಿಎಂ ಆಗಿ ‘ದಳಪತಿ’ ವಿಜಯ್ ಪ್ರಮಾಣ ವಚನ :ದ್ರಾವಿಡ ನಾಡಿನ ಇತಿಹಾಸದಲ್ಲೇ ಹೊಸ ಪರ್ವ
ಕೇರಳ ರಾಜಕಾರಣದಲ್ಲಿ ನಾಯರ್, ಈಳವ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸಮೀಕರಣ ಬಹಳ ಮುಖ್ಯ. ಮುಖ್ಯಮಂತ್ರಿ ಪಟ್ಟ ಒಬ್ಬರಿಗೆ ನೀಡಿದರೆ, ಉಪಮುಖ್ಯಮಂತ್ರಿ ಅಥವಾ ಪ್ರಮುಖ ಖಾತೆಗಳನ್ನು ಇತರ ಸಮುದಾಯದ ನಾಯಕರಿಗೆ ನೀಡುವ ಮೂಲಕ ಸಮತೋಲನ ಕಾಯ್ದುಕೊಳ್ಳಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ.
ದೆಹಲಿಯಲ್ಲಿ ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ನಡೆಯಲಿರುವ ಉನ್ನತ ಮಟ್ಟದ ಸಭೆಯ ನಂತರ ಕೇರಳದ ನೂತನ ಮುಖ್ಯಮಂತ್ರಿಯ ಹೆಸರು ಅಧಿಕೃತವಾಗಿ ಪ್ರಕಟವಾಗುವ ನಿರೀಕ್ಷೆಯಿದೆ. ಅಲ್ಲಿಯವರೆಗೆ ಕೇರಳ ರಾಜಕೀಯದ ‘ಸಸ್ಪೆನ್ಸ್’ ಮುಂದುವರಿಯಲಿದೆ.
who is next kerala cm three leaders fight for post



