ರಾಜ್ಯದ ಘಟಾನುಘಟಿ ನಾಯಕರು ಸದ್ಯ ವಿಧಾನಪರಿಷತ್ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮೂರು ಪಕ್ಷದ ಪಾಲಿಗೆ ವಿಧಾನಪರಿಷತ್ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಈ ಎಲ್ಲ ರಾಜಕೀಯ ಚಟುವಟಿಕೆಗಳು ಪ್ರಗತಿಯಲ್ಲಿರುವ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ರಾಜ್ಯದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ(Cabinet expansion)ಯಾಗುವ ಬಗ್ಗೆ ಸುಳಿವು ಬಿಚ್ಚಿಟ್ಟಿದ್ದಾರೆ.
ದಾವಣಗೆರೆಯ ಆನಗೋಡಿಯಲ್ಲಿ ವಿಧಾಪರಿಷತ್ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದ ವೇಳೆ ಯಡಿಯೂರಪ್ಪ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ. ಸಂಪುಟ ವಿಸ್ತರಣೆ ಮಾಡೋದು ಬಿಡೋದು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಿಟ್ಟ ವಿಚಾರ. ಯಾವ ಸಚಿವರಿಗೆ ಯಾವ ಖಾತೆ ನೀಡಬೇಕು ಎಂಬುದನ್ನೂ ಅವರೇ ನಿರ್ಧರಿಸುತ್ತಾರೆ.ಶೀಘ್ರದಲ್ಲೇ ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಇದೇ ವೇಳೆ ಹೇಳಿದ್ರು.
ದೆಹಲಿಯಲ್ಲಿ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಭೇಟಿಯ ವಿಚಾರವಾಗಿ ಸ್ಪಷ್ಟನೆ ನೀಡಿದ ಯಡಿಯೂರಪ್ಪ, ದೇವೇಗೌಡರು ಪ್ರಧಾನಿ ಮೋದಿಯೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಭೇಟಿಗೂ ಚುನಾವಣೆಗೂ ಯಾವುದೇ ರೀತಿಯ ಅರ್ಥ ಕಲ್ಪಿಸುವುದು ಬೇಡ. ಜೆಡಿಎಸ್ ಸ್ಪರ್ಧೆ ಮಾಡದ ಕಡೆಗಳಲ್ಲಿ ನಮಗೆ ಬೆಂಬಲ ನೀಡಬಹುದು ಎಂಬ ನಂಬಿಕೆ ಇದೆ. ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಮತಗಳ ಅಂತರದಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ರು.
ಇದನ್ನು ಓದಿ :Omicron Meeting : ಓಮಿಕ್ರಾನ್ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ
Yeddyurappa hinted at cabinet expansion
