ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ದಿಢೀರ್ ಬದಲಾವಣೆ ಕಂಡು ಬಂದಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರ ಭೇಟಿಗೆ ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ಬಿಎಸ್‌ವೈ ಇಂದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.
ಬಿಜೆಪಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಾಧನಾ ಸಮಾವೇಶ ನಡೆಯುತ್ತಿದೆ. ಸಾಧನಾ ಸಮಾವೇಶದ ಬೆನ್ನಲ್ಲೇ ಯಡಿಯೂರಪ್ಪ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗುತ್ತಿದೆ. ಕಾರ್ಯಕ್ರಮದಲ್ಲಿಯೇ ಯಡಿಯೂರಪ್ಪ ವಿದಾಯ ಭಾಷಣ ಮಾಡುವ ಸಾಧ್ಯತೆಯಿದೆ.
ಇದನ್ನೂ ಓದಿ : ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ : ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಇಲ್ಲ : ಜೆಪಿ ನಡ್ಡಾ
ಸಿಎಂ ಯಡಿಯೂರಪ್ಪ ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಅವರ ಭೇಟಿಗೆ ಕಾಲವಾಕಾಶವನ್ನು ಕೋರಿದ್ದಾರೆ. ಕಾರ್ಯಕ್ರಮ ಮುಗಿದ ಬೆನ್ನಲ್ಲೇ ರಾಜ್ಯಪಾಲರನ್ನು ಯಡಿಯೂರಪ್ಪ ಭೇಟಿಯಾಗುವ ಸಾಧ್ಯತೆಯಿದೆ. ಈಗಾಗಲೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಜಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.