ಮೈಸೂರು : ಮಹಾಲಯ ಅಮಾವಾಸ್ಯೆಯ ಹಿನ್ನಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವುದನ್ನು ತಪ್ಪಿಸುವ ಸಲುವಾಗಿ ಮೈಸೂರಿನ ಖ್ಯಾತ ಚಾಮುಂಡೇಶ್ವರಿ ದೇಗುಲದಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿದೆ.

ವರ್ಷಂಪ್ರತಿ ಮಹಾಲಯ ಅಮವಾಸ್ಯೆಯ ದಿನದಂದು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಮೈಸೂರು ಜಿಲ್ಲೆಯಲ್ಲೀಗ ಕೊರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ ವಿಪರೀತವಾಗಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೂರು ದಿನಗಳ ಕಾಲ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.

ಚಾಮುಂಡಿ ಬೆಟ್ಟದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಬೆಟ್ಟಗಳಿಗೆ ಹೋಗುವ ರಸ್ತೆಯನ್ನು ಸಹ ಬ್ಯಾರಿಕೇಡ್ ಹಾಕಿ ಮುಚ್ಚಲಾಗಿದೆ.