Chikmagalur District Police‌ : ಪೊಲೀಸರ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ

ಚಿಕ್ಕಮಗಳೂರು : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿ ಗೌರವಿಸಲಾಗುತ್ತದೆ. ಇದೀಗ (Chikmagalur District Police‌) 2022-23 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90ರಷ್ಟು ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಒಟ್ಟು 27 ಮಕ್ಕಳಿಗೆ ಪೊಲೀಸ್ ಇಲಾಖೆಯ ವಿದ್ಯಾನಿಧಿ ಯೋಜನೆಯಡಿಯಲ್ಲಿ ಪ್ರೋತ್ಸಾಹ ಧನ ವಿತರಿಸಿ, ಅವರನ್ನು ಸನ್ಮಾನಿಸಲಾಯಿತು. ಹಾಗೆಯೇ ಎಲ್ಲಾ ವಿದ್ಯಾರ್ಥಿಗಳ ಮುಂದಿನ ಜೀವನದಲ್ಲಿ ಯಶಸ್ಸು ಸಾಧಿಸಲು ಶುಭ ಹಾರೈಸಲಾಯಿತು.

ಈ ರೀತಿಯಲ್ಲಿ ಪೊಲೀಸ್‌ ಇಲಾಖೆಯಲ್ಲಿ, ಅದೇ ಇಲಾಖೆಯಲ್ಲಿ ಕೆಲಸ ಮಾಡುವ ಮಕ್ಕಳಿಗೆ ಗೌರವಿಸುವುದರಿಂದ ಮುಂದಿನ ಉಜ್ವಲ ಭವಿಷ್ಯಕ್ಕೆ ಪ್ರೋತ್ಸಾಹಸಿದಂತೆ ಆಗುತ್ತದೆ. ಹಾಗೆಯೇ ಇಲಾಖೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಗೌರವ ಸೂಚಿಸಿದಂತೆ ಹಾಗೂ ಅವರ ಮನೆಯವರು ಇಲಾಖೆ ವತಿಯಿಂದ ಗುರುತಿಸಿದಂತೆ ಆಗುತ್ತದೆ.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಪ್ರತಿಭಾವಂತ ಮಕ್ಕಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಹಾಗೂ ಸಿಬಿಎಸ್‌ಇರಲ್ಲಿ ಶೇ. 90 ಮತ್ತು ಹೆಚ್ಚು ಅಂಕ ಪಡೆದವರಿಗೆ, ಒಟ್ಟಾರೆ A+ ಪಡೆದವರಿಗೆ ಪ್ರೋತ್ಸಾಹ ನೀಡಲು ಅವರ ವಿದ್ಯಾಭ್ಯಾಸಕ್ಕಾಗಿ ಪೊಲೀಸ್ ಇಲಾಖೆಯ ವಿದ್ಯಾನಿಧಿ ಯೋಜನೆಯಡಿಯಲ್ಲಿ ಸಹಾಯ ಧನವನ್ನು ನೀಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹ ಧನ ನೀಡುವುದರೊಂದಿಗೆ ಸನ್ಮಾನಿಸಿ ಗೌರವಿಸಲಾಗಿದೆ.

ಇದನ್ನೂ ಓದಿ : International Tiger Day 2023 : ಅಂತರಾಷ್ಟ್ರೀಯ ಹುಲಿ ದಿನ 2023 : ಹುಲಿ ವೀಕ್ಷಣೆಗೆ ಟಾಪ್ ಭಾರತೀಯ ರಾಷ್ಟ್ರೀಯ ಉದ್ಯಾನವನ ಯಾವುವು ಗೊತ್ತಾ ?

Chikmagalur District Police: Distribution of incentive money to talented children of police

Comments are closed.