Construction of a new chariot: 400 ವರ್ಷಗಳ ಬಳಿಕ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ ಹೊಸ ರಥ ನಿರ್ಮಾಣ

ಉಡುಪಿ: (Construction of a new chariot) ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ರಾಜ್ಯ ಹಾಗೂ ಹೊರರಾಜ್ಯದಲ್ಲಿ ಪ್ರಖ್ಯಾತಿಯನ್ನು ಪಡೆದಿರುವ ಕ್ಷೇತ್ರ. ಪ್ರತಿ ವರ್ಷ ಲಕ್ಷಾಂತರ ಮಂದಿ ಭಕ್ತರು ಭೇಟಿ ನೀಡುತ್ತಾರೆ. ಸದ್ಯ ಈ ದೇವಳ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಸಿದ್ದಗೊಳ್ಳುತ್ತಿದೆ. ಈ ಶುಭ ಸಂದರ್ಭದಲ್ಲಿ ದೇವಸ್ಥಾನಕ್ಕೆ ಹೊಸ ಕೊಡುಗೆಯೊಂದು ಸಲ್ಲಲಿದ್ದು, ಸುಮಾರು 400 ವರ್ಷಗಳ ಬಳಿಕ ದೇವಸ್ಥಾನದಲ್ಲಿ ಹೊಸ ಬದಲಾವಣೆಯೊಂದಿಗೆ ಹೊಸ ರಥ ಬರಲಿದೆ.

ವಾರ್ಷಿಕ ಮಹೋತ್ಸವಕ್ಕೆ ದೇವಸ್ಥಾನ ಸಿದ್ದಗೊಳ್ಳುತ್ತಿದ್ದು, ಜಾತ್ರಾ ಮಹೋತ್ಸವದ ಬಳಿಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಕೂಡ ನೆರವೇರಲಿದೆ. ಅತ್ಯಂತ ಪುರಾತನವಾದ 400 ವರ್ಷಗಳ ಹಳೆಯದಾದ ರಥ ಸಂಪೂರ್ಣ ಹಾಳಾಗಿರುವ ಹಿನ್ನಲೆಯಲ್ಲಿ ನೂತನ ರಥದ ನಿರ್ಮಾಣ ಕಾರ್ಯ ನಡೆಯುತ್ತಿದೆ. ಸದ್ಯ ಒಂಬತ್ತು ತಿಂಗಳಿಂದ ರಥದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ರಥ ಸಂಪೂರ್ಣವಾಗಿ ಸಿದ್ದಗೊಂಡಿದೆ.

ನೂತನವಾಗಿ ನಿರ್ಮಾಣಗೊಂಡಿರುವ ರಥವನ್ನು ಆಧುನಿಕ ತಂತ್ರಜ್ಞಾನ ಬಳಸಿರುವ ರಥಶಿಲ್ಪಗಳು, ತ್ರಿಡಿ ಸ್ಕ್ಯಾನಿಂಗ್‌ ತಂತ್ರಜ್ಞಾನ ಬಳಸಿ ಹಳೆ ರಥದ ಪಡಿಯಚ್ಚು ತೆಗೆದು ರಥವನ್ನು ನಿರ್ಮಾಣ ಮಾಡಿದ್ದಾರೆ. ಮುರ್ಡೇಶ್ವರದ ಖ್ಯಾತ ಉದ್ಯಮಿ ದಿ. ಆರ್‌. ಎನ್.‌ ಶೆಟ್ಟಿ ಅವರ ಪುತ್ರ ಉದ್ಯಮಿ ಸುನೀಲ್‌ ಶೆಟ್ಟಿ ನೂತನ ರಥದ ವೆಚ್ಚವನ್ನು ಭರಿಸಿದ್ದು, ಕೋಟೇಶ್ವರದ ರಾಷ್ಟ್ರಪ್ರಶಸ್ತಿ ಪುರಸ್ಕೃತ ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಅವರ ಪುತ್ರ ಶಿಲ್ಪಿ ರಾಜಗೋಪಾಲ ಅಚಾರ್ಯ ಅವರ ನೇತ್ರತ್ವದಲ್ಲಿ ನೂತನ ರಥ ನಿರ್ಮಾಣಗೊಂಡಿದೆ.

Construction of a new chariot: Construction of a new chariot after 400 years in the presence of Kollur Mukambika

ಈ ವರೆಗೆ ದೇವಸ್ಥಾನದಲ್ಲಿ ಬಳಸುತ್ತಿದ್ದ ರಥವು ಕೆಳದಿ ಅರಸನ ಕಾಲದ್ದಾಗಿದ್ದು, 400 ವರ್ಷಗಳ ಇತಿಹಾಸವನ್ನು ಹೊಂದಿದೆ. ಕೆಳದಿ ಅರಸರ ಕಾಲದಲ್ಲಿ ಸಿದ್ದವಾದ ಶಿಲ್ಪಕಲೆಯಲ್ಲಿ ಯಾವುದೇ ಬದಲಾವಣೆಯಾಗದಂತೆ ನೂತನ ರಥದಲ್ಲೂ ಕೂಡ ರೂಪಿಸಿದ್ದು, ಸುಮಾರು ನಲವತ್ತೆರಡು ಮಂದಿ ಕುಶಲಕರ್ಮಿಗಳು ಸೇರಿ ಒಂಬತ್ತು ತಿಂಗಳುಗಳ ಕಾಲ ಶ್ರಮವಹಿಸಿ ನಿರ್ಮಿಸಿದ್ದಾರೆ.

ಇದನ್ನೂ ಓದಿ : ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರನಿಗೆ ಮಕರ ಸಂಕ್ರಮಣ ಉತ್ಸವ: ದೇವಳದತ್ತ ಹರಿದು ಬಂದ ಭಕ್ತಸಾಗರ

ಇದೀಗ ಕೊಲ್ಲೂರು ಮೂಕಾಂಬಿಕ ದೇಗುಲದ ನೂತನ ರಥದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮೂಕಾಂಬಿಕಾ ಜಾತ್ರೆಯ ದಿನ ಲೋಕಾರ್ಪಣೆಯಾಗಲಿದೆ. 400 ವರ್ಷಗಳ ಇತಿಹಾಸ ಹೊಂದಿರುವ ಹಳೆಯ ರಥವನ್ನು ದೇಗುಲದ ಆನೆಬಾಗಿಲಿನ ಬಳಿ ಸೂಕ್ತ ಸ್ಥಳದಲ್ಲಿ ಸಂರಕ್ಷಣೆ ಮಾಡಿ ಪಾರದರ್ಶಕ ಫ್ರೇಮ್‌ ಬಳಸಿ ಭಕ್ತರ ವೀಕ್ಷಣೆಗೆ ಇರಿಸುವ ಯೋಜನೆಯನ್ನು ಮಾಡಲಾಗಿದೆ. ಇದೇ ಫೆಬ್ರವರಿಯಲ್ಲಿ ನೂತನ ರಥವನ್ನು ಕೊಲ್ಲೂರಿಗೆ ಒಯ್ಯಲಾಗುತ್ತಿದ್ದು, ಮಾರ್ಚ್‌ ನಲ್ಲಿ ನಡೆಯುವ ಶ್ರೀ ದೇವರ ರಥೋತ್ಸವದಲ್ಲಿ ನೂತನ ರಥವನ್ನು ಲೋಕಾರ್ಪಣೆ ಮಾಡುವ ಯೋಜನೆಯನ್ನು ರೂಪಿಸಲಾಗಿದೆ.

Construction of a new chariot: Construction of a new chariot after 400 years in the presence of Kollur Mukambika

Comments are closed.