ಸಾಯಿಬಾಬಾನಿಗೂ ತಟ್ಟಿದ ಕೊರೊನಾ : ಶಿರಡಿಯಲ್ಲಿ ಭಕ್ತರಿಗಿಲ್ಲ ಬಾಬಾ ದರ್ಶನ

0

ಪುಣೆ : ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಿಸುತ್ತಿದೆ. ದೇಶದಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಪೀಡಿತರು ಮಹಾರಾಷ್ಟ್ರದಲ್ಲಿದ್ದಾರೆ. ಹೀಗಾಗಿ ಮಹರಾಷ್ಟ್ರ ಸರಕಾರ ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ದೇವಾಲಯಗಳಲ್ಲಿ ಭಕ್ತರ ಪ್ರವೇಶ ನಿರಾಕರಿಸಲಾಗಿದೆ. ಹೀಗಾಗಿ ಶಿರಡಿಯ ಸಾಯಿಬಾಬಾ ದೇವಾಲಯದ ಬಾಗಿಲನ್ನೂ ಮುಚ್ಚಲಾಗಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲು ಶಿರಡಿ ಸಾಯಿಬಾಬಾ ದೇವಾಲಯದ ಆಡಳಿತ ಮಂಡಳಿ ಮುಂದಾಗಿದೆ. ಹೀಗಾಗಿ ದೇವಾಲಯದ ಬಾಗಿಲು ಮುಚ್ಚಲಾಗಿದ್ದು, ಸಾರ್ವಜನಿಕ ಸಂಪರ್ಕ ಹಾಗೂ ಬಯೋಮೆಟ್ರಿಕ್ಸ್ ಪದ್ದತಿಯನ್ನು ರದ್ದುಗೊಳಿಸಿದೆ.

ರಜೆ ಕಾಲಾ ಸಮೀಪಿಸುತ್ತಿರೋ ಹಿನ್ನೆಲೆಯಲ್ಲಿ ಶರಡಿಗೆ ಬರೋ ಭಕ್ತರ ಸಂಖ್ಯೆ ಏರಿಕೆಯಾಗೋ ಸಾಧ್ಯತೆಯಿದೆ. ಇದರಿಂದಾಗಿ ಕೊರೊನಾ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಈ ನಿರ್ಧಾರವನ್ನು ಕೈಗೊಂಡಿದೆ.

Shiridi Sai Baba Mandir

ಇನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಬವ್ ಠಾಕ್ರೆ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದ ದೇವಾಲಯಗಳನ್ನು ಬಂದ್ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಹಲವು ದೇವಾಲಯಗಳಿಗೆ ಬೀಗ ಹಾಕಲಾಗಿದೆ.

Leave A Reply

Your email address will not be published.