ಅನ್ ಲಾಕ್ ಎಫೆಕ್ಟ್ : ತಿರುಪತಿ ತಿಮ್ಮಪ್ಪನ ಖಜಾನೆಗೆ ಹರಿದುಬಂತು ಕೋಟಿ ಕೋಟಿ ಹಣ

0

ತಿರುಪತಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಬೀಗ ಜಡಿಯಲಾಗಿತ್ತು. ಅದ್ರಲ್ಲೂ ದೇಶದ ಅತ್ಯಂತ ಶ್ರೀಮಂತ ದೇವಾಲಯವೆಂಬ ಖ್ಯಾತಿಗೆ ಪಾತ್ರವಾಗಿದ್ದ ತಿರುಪತಿ ತಿರುಮಲನ ಸನ್ನಿಧಿ ಭಕ್ತರಿಲ್ಲದೇ ಬಿಕೋ ಎನ್ನುತ್ತಿತ್ತು. ಆದ್ರೀಗ ಲಾಕ್ ಡೌನ್ ತೆರವಾಗುತ್ತಿದ್ದಂತೆಯೇ ತಿಮ್ಮಪ್ಪನ ಹುಂಡಿಗೆ ಕೋಟ್ಯಾಂತರ ರೂಪಾಯಿ ಹರಿದುಬಂದಿದೆ.

ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆಯೇ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧ ಹೇರಲಾಗಿತ್ತು. ಆದರೆ ಅನ್ ಲಾಕ್ ಪ್ರಕ್ರೀಯೆ ಆರಂಭಗೊಳ್ಳುತ್ತಿದ್ದಂತೆಯೇ ತಿರುಮಲ ದೇವಸ್ಥಾನಕ್ಕೆ ಭಕ್ತರ ದಂಡೇ ಆಗಮಿಸುತ್ತಿದೆ.

ಅದ್ರಲ್ಲೂ ಒಂದೇ ದಿನ ತಿರುಮಲ ದೇವಸ್ಥಾನದ ಹುಂಡಿಗೆ ಬರೋಬ್ಬರಿ 1.02 ಕೋಟಿ ರೂಪಾಯಿ ಕಾಣಿಕೆ ಹಣ ಸಂದಾಯವಾಗಿದೆ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.

ಅನಾದಿ ಕಾಲದಿಂದಲೂ ಭಕ್ತರಿಂದಲೇ ತುಂಬಿ ತುಳುಕುತ್ತಿದ್ದ ತಿರುಪತಿಯ ತಿಮ್ಮಪ್ಪನ ಸನ್ನಿಧಿಗೆ ಇದೀಗ ಭಕ್ತರ ದಂಡೇ ಆಗಮಿಸುತ್ತಿದೆ. ತಿರುಪತಿ ದೇವಸ್ಥಾನಕ್ಕೆ ಒಂದೇ ದಿನ ಬರೋಬ್ಬರಿ 13,486 ಮಂದಿ ಭಕ್ತರು ಆಗಮಿಸಿದ್ದಾರೆ.

ಕೊರೊನಾ ಸೋಂಕಿನ ಆರ್ಭಟ ಹೆಚ್ಚುತ್ತಿದ್ದರೂ ಕೂಡ ಜನರು ಮಾತ್ರ ತಿಮ್ಮಪ್ಪನ ಮೊರೆ ಹೋಗುವುದನ್ನು ಬಿಡುವ ಲಕ್ಷಣ ಕಾಣಿಸುತ್ತಿಲ್ಲ. ಅಲ್ಲದೇ ಮುಂದಿನ ದಿನಗಳಲ್ಲಿ ತಿಮ್ಮಪ್ಪನ ಸನ್ನಿಧಿಗೆ ಬರುವ ಭಕ್ತರ ಸಂಖ್ಯೆ ಕೂಡ ಹೆಚ್ಚಳವಾಗುವ ಸಾಧ್ಯತೆಯಿದೆ.

Leave A Reply

Your email address will not be published.