ಶಿವರಾತ್ರಿಯ ರಾತ್ರಿ ಜಾಗರಣೆಯಿಂದ ಮೋಕ್ಷ ಪ್ರಾಪ್ತಿ

0

ಬಿಲ್ವದ ಎಲೆ ಹೃದಯವನ್ನು ಹೋಲುತ್ತದೆ ಮತ್ತು ಲಿಂಗ ಪರಮಾತ್ಮನ ಪ್ರತೀಕ. ಆದ್ದರಿಂದ ಇವೆರಡರ ಜೊತೆಗೂಡಿಕೆ ಆತ್ಮ ಪರಮಾತ್ಮಗಳ ಮಿಲನ. ರಾತ್ರಿಯು ಅಜ್ಞಾನದ ಸಂಕೇತ ಮತ್ತು ಆ ವೇಳೆಯಲ್ಲಿ ನಿದ್ರೆ ಮಾಡದೇ ಎಚ್ಚರವಾಗಿರುವುದು ತಿಳುವಳಿಕೆಯ ಕಡೆಗೆ ಹೋಗುತ್ತಿರುವ ಸಂಕೇತ. ಹೀಗೆ ಶಿವರಾತ್ರಿಯ ರಾತ್ರಿ ಜಾಗರಣೆ ಮಾಡುವುದು ಮೋಕ್ಷದ ಕಡೆಗೆ ಹೊಗುವುದು ಎಂದು ತತ್ವಗಳು ತಿಳಿಸುತ್ತವೆ. ಉಪವಾಸ ಮಾಡುವುದು ಎಂದರೆ, ದೇವರಿಗೆ ಹತ್ತಿರವಾಗಿರುವುದು/ದೇವರ ಬಗ್ಗೆ ಚಿಂತಿಸುತ್ತಿರುವುದು ಎಂದು ಅರ್ಥ. ಹೀಗೆ ಆತನ ಧ್ಯಾನದಲ್ಲಿ ಇರುವಾಗ ಊಟ/ತಿಂಡಿಯ ಕಡೆ ಗಮನ ಹೋಗುವುದಿಲ್ಲ.
ಜಾಗರಣೆ ಎಂದರೆ, ಜಾಗೃತರಾಗಿರೋದು ಎಂದು. ರಾತ್ರಿಯಲ್ಲಿ ಜಾಗರಣೆ ಮಾಡುವುದರ ಅರ್ಥವೇನು? ರಾತ್ರಿ ಎನ್ನುವುದು ತಮೋ ಗುಣದ ಪ್ರತೀಕ. ಆಲಸ್ಯ, ನಿದ್ರೆ, ಅಹಂಕಾರ, ಅಜ್ಞಾನಗಳ ದ್ಯೋತಕ ನಿಶೆ. ಆ ಸಮಯದಲ್ಲಿ ಜಾಗೃತರಾಗಿರಬೆಕು ಎಂದರೆ, ಅವುಗಳಿಂದ ಜಾಗೃತರಾಗಿರಬೇಕು ಎಂಬರ್ಥ. ಹಾಗೆ ಜಾಗೃತರಾಗಿರುವುದಕ್ಕೆ ನಮಗೆ ಸಹಾಯವನ್ನು ಮಾಡುವವನು ದೇವರು. ಆ ದೇವರನ್ನು ಸ್ಮರಿಸುತ್ತ ಈ ತಮೋ ಗುಣಗಳಿಂದ ಜಾಗೃತರಾಗಿರಬೇಕು ಎನ್ನುವುದರ ಪ್ರತೀಕ ಶಿವರಾತ್ರಿಯ ಜಾಗರಣೆ. ಆ ದಿನ ಬೆಳಗ್ಗೆ ಬೇಗ ಎದ್ದು ಅಭ್ಯಂಜನ ಮಾಡಿ ಶಿವನಿಗೆ ಅಭಿಷೇಕ ಮಾಡುವುದು ರೂಢಿ. ಇಲ್ಲಿ ದಿನವನ್ನು ಮೂರು ಭಾಗಗಳನ್ನಾಗಿ ಮಾಡಿ ರುದ್ರಾಭಿಷೇಕಯುಕ್ತ ಪೂಜೆಯನ್ನು ಮಾಡುವುದು ವಾಡಿಕೆ. ರುದ್ರ ನಮಕ ಚಮಕಗಳನ್ನು ಉಚ್ಚರಿಸುವುದರಿಂದ ಉಸಿರಾಟಕ್ಕೂ ಹೆಚ್ಚಿನ ಶಕ್ತಿ ಬರುವುದು ಮತ್ತು ಬಾಯಿಯಿಂದ ಹೊರ ಹೊಮ್ಮುವ ತರಂಗಗಳಿಂದ ಸುತ್ತ ಮುತ್ತಲಿನ ಪರಿಸರ ಶಕ್ತಿಯುತವಾಗುವುದು.
ಮೊದಲಿಗೆ ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕವನ್ನೂ ಮಾಡುವರು. ಇದಕ್ಕೆಂದೇ ಮಹಾನ್ಯಾಸವೆಂಬ ಪ್ರಕಾರವಿದೆ. ನಂತರ ನೀರಿನ ಅಭಿಷೇಕವನ್ನು ನಿರಂತರವಾಗಿ ಮಾಡುವರು. ಅಭಿಷೇಕ್ಕಾಗಿಯೇ ಪ್ರತ್ಯೇಕವಾದ ಪಾತ್ರೆ ಇರುವುದು. ಅದರ ತಳಭಾಗದಲ್ಲಿ ರಂದ್ರವಿದ್ದು ಅದನ್ನು ಲಿಂಗದ ಮೇಲೆ ತೂಗು ಬಿಟ್ಟಿರುವರು. ಅದರೊಳಗೆ ನೀರು ತುಂಬಿಸಿದರೆ, ಸಣ್ಣದಾಗಿ ನೀರು ಲಿಂಗದ ಮೇಲೆ ಬೀಳುವುದು. ಕೃಷ್ಣ ಯಜುರ್ವೇದದ ಪ್ರಕಾರವಾದ ರುದ್ರ ನಮಕ ಮತ್ತು ಚಮಕಗಳನ್ನು ಅಭಿಷೇಕದ ಸಂದರ್ಭದಲ್ಲಿ ಪಠಿಸುತ್ತಾರೆ. ಹನ್ನೊಂದು ಬಾರಿ ನಮಕ ಚಮಕಗಳನ್ನು ಹನ್ನೊಂದು ಜನ ಋತ್ವಿಕರು ಪಠಣ ಮಾಡುವುದಕ್ಕೆ ಏಕಾದಶವಾರ ರುದ್ರಾಭಿಷೇಕ ಎಂದು ಕರೆಯುವರು. ಮೊದಲಿಗೆ ಚಮಕದ ಮೂರನೆಯ ಭಾಗವನ್ನು ಉಚ್ಚರಿಸಿ, ನಂತರ ಒಂದು ನಮಕದ ಭಾಗವನ್ನೂ ನಂತರ ಹನ್ನೊಂದು ಚಮಕ ಭಾಗಗಳನ್ನೂ ಪಠಿಸುವರು. ತದನಂತರ ಎರಡನೆಯ ನಮಕದ ಭಾಗವನ್ನೂ ಮತ್ತು ಹನ್ನೊಂದು ಚಮಕ ಭಾಗಗಳನ್ನೂ ಪಠಿಸುವರು. ಹೀಗೆ ನಮಕಗಳ ಹನ್ನೊಂದೂ ಭಾಗವನ್ನು ಪಠಿಸಿ ಅಭಿಷೇಕ ಮಾಡುವರು. ಇದಕ್ಕೆ ಒಂದು ರುದ್ರವೆಂದು ಕರೆಯುವರು. ಬೆಳಗ್ಗೆ, ಸಂಜೆ ಮತ್ತು ರಾತ್ರೆ ಹೀಗೆ ೨೪ ಘಂಟೆಗಳು ಭಗವನ್ನಾಮಸ್ಮರಣೆ ಮಾಡುತ್ತಾ ಜಾಗರಣೆ ಮಾಡುವುದು ಪರಿಪಾಠ. ಅಂದು ಊಟ ಮಾಡದೆ ಅಲ್ಪಾಹಾರ ಸೇವನೆ ಮಾಡುವರು.

ಜಾಗರಣೆ, ಹಬ್ಬದ ವಿಶೇಷ ಆಚರಣೆ :
ಕಾಶಿ ವಿಶ್ವನಾಥ, ಗೋಕರ್ಣದ ಮಹಾಬಲೇಶ್ವರ, ರಾಮೇಶ್ವರದ ರಾಮೇಶ್ವರ ಸೇರಿದಂತೆ ರಾಜ್ಯ, ದೇಶ, ವಿದೇಶಗಳ ಶಿವದೇವಾಲಯಗಳಲ್ಲಿ ಅಂದು ವಿಶೇಷ ಪೂಜೆ ನಡೆಯುತ್ತದೆ. ಬಿಲ್ವಾರ್ಚನೆ, ರುದ್ರಾಭಿಷೇಕ, ಶಿವನಾಮ ಧ್ಯಾನಗಳ ಮೂಲಕ ಶಿವನನ್ನು ಆರಾಸಲಾಗುತ್ತದೆ. ಇಡೀ ರಾತ್ರಿ ಶಿವದೇವಾಲಯಗಳಲ್ಲಿ ರುದ್ರಪಠಣದ ಜೊತೆ ಜಾಗರಣೆ ನಡೆಯುತ್ತದೆ.
ಶಿವರಾತ್ರಿಯಂದು ಬೆಳಗ್ಗೆ ಬೇಗನೆ ಏಳುವ ಭಕ್ತರು, ಸ್ವಾನ ಮಾಡಿ, ಶುಚಿರ್ಭೂತರಾಗಿ ಶಿವದೇವಾಲಯಕ್ಕೆ ತೆರಳುತ್ತಾರೆ. ಕೆಲವರು ಕೈಲಾಸಯಂತ್ರ ರಚಿಸಿ, ಮನೆಯಲ್ಲಿಯೇ ಶಿವನಿಗೆ ವಿಶೇಷ ಪೂಜೆ ನಡೆಸುತ್ತಾರೆ. ಗಂಗಾ, ಬ್ರಹ್ಮಪುತ್ರ, ಕೃಷ್ಣ, ಕಾವೇರಿ, ತ್ರಿವೇಣಿ ಸಂಗಮ ಸೇರಿದಂತೆ ಪುಣ್ಯನದಿಗಳಲ್ಲಿ ಭಕ್ತರು ಸ್ನಾನ ಮಾಡುತ್ತಾರೆ. ಕೆಲವರು ಹಾಲು, ಹಣ್ಣು ಸೇವಿಸಿ ಲಘು ಉಪಹಾರ ಸೇವಿಸಿದರೆ, ಕೆಲವು ಭಕ್ತರು ದಿನವಿಡಿ ಏನನ್ನೂ ತಿನ್ನದೆ, ನೀರನ್ನೂ ಕುಡಿಯದೆ ಉಪವಾಸ ಇರುತ್ತಾರೆ. ಭಸ್ಮ ಲೇಪಿಸಿಕೊಂಡು, ಬಿಲ್ವಾರ್ಚನೆ ಮೂಲಕ ರುದ್ರ ಪಠಣ ಹಬ್ಬದ ಆಚರಣೆಯ ವಿಶೇಷ.
ಅಭಿಷೇಕಪ್ರಿಯ ಎಂದೇ ಖ್ಯಾತನಾದ ಶಿವನಿಗೆ ದಿನವಿಡಿ ಹಾಲು, ಜೇನುತುಪ್ಪ ಹಾಗೂ ನೀರಿನ ಅಭಿಷೇಕ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುತ್ತದೆ. ಬಿಲ್ವಪತ್ರೆ, ತುಳಸಿ, ಶ್ರೀ ಗಂಧ, ಹಾಲು, ಜೇನುತುಪ್ಪಗಳಿಂದ ಅಭಿಷೇಕ ನಡೆಯುತ್ತದೆ. ಶಿವ ಪಂಚಾಕ್ಷರಿ ಮಂತ್ರ “ಓಂ ನಮ: ಶಿವಾಯ”, ಹರ ಹರ ಮಹಾದೇವ, ಶಂಭೋ ಶಂಕರ…ಶಿವದೇವಾಲಯಗಳಲ್ಲಿ ಮಾರ್ದನಿಸುತ್ತದೆ. ನಾಲ್ಕು ಆಯಾಮಗಳ ರುದ್ರಪಠಣ, ಶಿವರಾತ್ರಿ ಪೂಜೆಯ ವಿಶೇಷ. ಶಿವಪುರಾಣದ ಪ್ರಕಾರ ರುದ್ರ ಹಾಗೂ ಚಮೆಗಳ ಪಠಣ ಶಿವನಿಗೆ ಅಚ್ಚುಮೆಚ್ಚು. ದೇವಾಲಯಗಳಲ್ಲಿ ಸಂಜೆ 6 ಗಂಟೆಯಿಂದ ಮೊದಲ್ಗೊಂಡು ಮುಂಜಾನೆ 6 ಗಂಟೆಯವರೆಗೆ ರುದ್ರಪಠಣದ ಮೂಲಕ ಶಿವ ಸ್ತುತಿ, ಜಾಗರಣೆ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಮಂಗಳಾರತಿ ಮಾಡಲಾಗುತ್ತದೆ. ಬೆಳಗ್ಗೆ 6 ಗಂಟೆಗೆ ಮಹಾಮಂಗಳಾರತಿ ಆಚರಣೆ ಮೂಲಕ ಜಾಗರಣೆ ಮುಕ್ತಾಯಗೊಳ್ಳುತ್ತದೆ. ಮೊದಲನೆಯ ಆಯಾಮದಲ್ಲಿ ಹಾಲು, ಎರಡನೆಯ ಆಯಾಮದಲ್ಲಿ ಮೊಸರು, ಮೂರನೆಯ ಆಯಾಮದಲ್ಲಿ ತುಪ್ಪ ಹಾಗೂ ನಾಲ್ಕನೆಯ ಆಯಾಮದಲ್ಲಿ ಜೇನುತುಪ್ಪಗಳಿಂದ ಶಿವನಿಗೆ ಅಭಿಷೇಕ ಮಾಡುವ ಪದ್ಧತಿಯೂ ಕೆಲವೆಡೆ ಇದೆ.

                    ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯಂ
     ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ. 
    ಸಮಸ್ಯೆಗಳು ಹತ್ತು-ಹಲವಾರು, ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ. 
             ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು. 
                 ಶ್ರೀ ಶ್ರೀ ವಾದಿರಾಜ್ ಭಟ್, ಜ್ಯೋತಿಷ್ಯರು
                     ಮೋ : 9743666601

Leave A Reply

Your email address will not be published.