ಸೋಮವಾರ, ಏಪ್ರಿಲ್ 28, 2025
HomeSpecial StoryInternational Women Day 2023: ವೋಲ್ವೋದೊಂದಿಗೆ ಎಲ್ಲಾ BMTC ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

International Women Day 2023: ವೋಲ್ವೋದೊಂದಿಗೆ ಎಲ್ಲಾ BMTC ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

- Advertisement -

ಬೆಂಗಳೂರು: (International Women Day 2023) ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ನಾಳೆ, ಬೆಂಗಳೂರಿನ ಎಲ್ಲಾ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ. ಈ ಮೂಲಕ ಬಿಎಂಟಿಸಿ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದೆ.

ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯುಳ್ಳ ಸಾರ್ವಜನಿಕ ಸಾರಿಗೆ ಸೌಲಭ್ಯ ಒದಗಿಸುವುದು ಬಿಎಂಟಿಸಿ ಉದ್ದೇಶವಾಗಿದೆ. ಮಹಿಳಾ ದಿನದಂದು ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರು ಒಂದು ದಿನ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವ ಮೂಲಕ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕುರಿತು ಅರಿವು ಮೂಡಿಸಿದಂತಾಗಲಿದೆ. ಜೊತೆಗೆ ವಿಶ್ವ ಮಹಿಳಾ ದಿನದಂದು ಮಹಿಳೆಯರಿಗೆ ವಿಶೇಷ ಕೊಡುಗೆ ನೀಡಿದಂತಾಗಲಿದೆ ಎಂದು ನಿಗಮ ಚಿಂತನೆ ನಡೆಸಿದ್ದು ಪ್ರಸ್ತಾವನೆ ಮೂಲಕ ಸರ್ಕಾರಕ್ಕೆ ಈ ಕುರಿತು ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದೆ.

ಬೆಂಗಳೂರಿನಲ್ಲಿ 40,86,580 ಮಹಿಳೆಯರಿದ್ದು, ಅದರಲ್ಲಿ ಪ್ರತಿದಿನ 10,21,645 ಮಂದಿ ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುತ್ತಾರೆ ಎಂದು ಅಂದಾಜಿಸಲಾಗಿದೆ. ಮಹಿಳಾ ದಿನವಾದ ಮಾರ್ಚ್‌ 8ರಂದು ಉಚಿತ ಬಸ್‌ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರೆ ಅಂದಾಜು 20.44 ಲಕ್ಷ ಮಹಿಳೆಯರು ಪ್ರಯಾಣಿಸುವ ಸಾಧ್ಯತೆ ಇದೆ. ಇದರಿಂದ ಬಿಎಂಟಿಸಿಗೆ ಸುಮಾರು 8.17 ಕೋಟಿ ಖರ್ಚಾಗುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ

ಪ್ರತಿದಿನ 5567 ಬಸ್‌ಗಳು 54 ಸಾವಿರ ಸುತ್ತುಗಳೊಂದಿಗೆ 10.84 ಲಕ್ಷ ಕಿಲೋಮೀಟರ್‌ಗಳನ್ನು ಕ್ರಮಿಸುತ್ತವೆ ಮತ್ತು ಬೇಡಿಕೆಗಳಿಗೆ ಅನುಗುಣವಾಗಿ ಸರಾಸರಿ 29 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯವನ್ನು ಒದಗಿಸುತ್ತವೆ ಎಂದು ಅದು ಹೇಳಿದೆ. ಮಾರ್ಚ್ 8, 2023 ರಂದು, ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲ್ಲಾ ಸೇವೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಪ್ರಸ್ತುತ ಬಿಎಂಟಿಸಿ 48 ಘಟಕಗಳು, 50 ಬಸ್ ನಿಲ್ದಾಣಗಳು ಮತ್ತು 6600 ವಾಹನಗಳ ಬಲವನ್ನು ಹೊಂದಿದೆ.

ಇದನ್ನೂ ಓದಿ : International Women’s Day 2023: ಮಹಿಳಾ ದಿನದ ಹಿಂದಿನ ಕಥೆಯೇನು ಎನ್ನುವುದರ ಬಗ್ಗೆ ಇಲ್ಲಿದೆ ಮಾಹಿತಿ

ವಿಶ್ವ ಮಹಿಳಾ ದಿನದಂದು ಎಲ್ಲಾ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಿದರೆ, ಸಂಸ್ಥೆಗೆ ಅಂದಾಜು ರೂ.8.17 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿಯವರೆಗೆ ವೋಲ್ವೋ ಸೇರಿದಂತೆ ಎಲ್ಲಾ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಬಿಎಂಟಿಸಿ ತಿಳಿಸಿದೆ.

International Women’s Day 2023: Free travel for women on all BMTC buses with Volvo

RELATED ARTICLES

Most Popular