ಕೊಲ್ಲೂರಿನಲ್ಲಿಂದು ರಥೋತ್ಸವ : ಜಾತ್ರೆಗೆ ಭಕ್ತರು ಬರಲೇ ಬೇಡಿ

0

ಉಡುಪಿ : ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳಲ್ಲೊಂದಾಗಿರೋ ಕೊಲ್ಲೂರು ಮೂಕಾಂಬಿಕಾ ದೇವಿಯ ರಥೋತ್ಸವಕ್ಕೆ ಕೊರೊನಾ ವೈರಸ್ ಅಡ್ಡಿಯಾಗಿದೆ. ಕೊರೊನಾ ಹೈ ಅಲರ್ಟ್ ಹಿನ್ನೆಲೆಯಲ್ಲಿ ಸರಳವಾಗಿ ರಥೋತ್ಸವ ನಡಸಲು ದೇವಸ್ಥಾನ ತೀರ್ಮಾನಿಸಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ದಕ್ಷಿಣ ಭಾರತದ ಪ್ರಸಿದ್ದ ಕ್ಷೇತ್ರ. ಮೂಕಾಂಬಿಕೆಯ ವಾರ್ಷಿಕ ರಥೋತ್ಸವಕ್ಕೆ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಿದ್ರು. ರಾಜ್ಯ ಮಾತ್ರವಲ್ಲದೇ, ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಿದ್ರು. ಆದರೆ ಈ ಬಾರಿ ಸರಳವಾಗಿ ದೇವಿಯ ಉತ್ಸವ ನಡೆಸಲು ಜಿಲ್ಲಾಡಳಿತ ಸೂಚಿಸಿದೆ.

ದೇವಸ್ಥಾನದ ಆಡಳಿತ ಮಂಡಳಿ ಸರಳವಾಗಿ ರಥಾರೋಹಣ ಮಾಡಲು ಜಿಲ್ಲಾಧಿಕಾರಿ ಜಗದೀಶ್ ಅವರು ಒಪ್ಪಿಗೆ ನೀಡಿದ್ದಾರೆ. ರಥಾರೋಹಣದ ವೇಳೆಯಲ್ಲಿ ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂಧಿ ಮಾತ್ರವೇ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ. ಭಕ್ತರು ಮನೆಯಲ್ಲೇ ಇದ್ದು ಪ್ರಾರ್ಥನೆ ಮಾಡಿ ಸಮಸ್ಯೆಗಳು, ಕಂಟಕಗಳ ನಿವಾರಣೆಯಾದ ಮೇಲೆ ದೇವಸ್ಥಾನದಲ್ಲಿ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳಿ ಎಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ನ್ಯೂಸ್ ನೆಕ್ಸ್ಟ್ ಮೂಲಕ ಮನವಿ ಮಾಡಿದ್ದಾರೆ.

Leave A Reply

Your email address will not be published.