ಕುಕ್ಕೆ ಸುಬ್ರಹ್ಮಣ್ಯ : ಧಾರ್ಮಿಕ ಸೇವೆಗಳು ಬಂದ್ : ಭಕ್ತರಿಗೆ ನಿರ್ಬಂಧ

ಕುಕ್ಕೆ ಸುಬ್ರಹ್ಮಣ್ಯ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಧಾರ್ಮಿಕ ಕೇಂದ್ರಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪವಿತ್ರ ಪುಣ್ಯಕ್ಷೇತ್ರಗಳಲ್ಲೊಂದಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ಕೊರೊನಾ ಹೊಸ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಸರ್ಪ ಸಂಸ್ಕಾರ ಸೇರಿದಂತೆ ಎಲ್ಲಾ ಸೇವೆಗಳನ್ನು ರದ್ದುಪಡಿಸಲಾಗಿದ್ದು, ಈಗಾಗಗಲೇ ಬುಕ್ ಮಾಡಿರುವ ಭಕ್ತರ ಸೇವೆಗಳನ್ನೂ ಕೂಡ ಮುಂದೂಡಿಕೆ ಮಾಡಲಾಗಿದೆ. ಅಲ್ಲದೇ ಭಕ್ತರಿಗೆ ದೇವರ ದರ್ಶನ, ತೀರ್ಥ ಪ್ರಸಾದ ವಿತರಣೆ, ಅನ್ನದಾಸೋಹ, ವಿಶೇಷ ಉತ್ಸವ, ವಸತಿ ಗೃಹ ಹಾಗೂ ಅತಿಥಿಗಳನ್ನು ಭಕ್ತರಿಗೆ ಹಂಚಿಕೆ ಮಾಡುವುದನ್ನು ನಿಷೇಧಿಸಲಾಗಿದೆ.

ದೇವಸ್ಥಾನದಲ್ಲಿ ದೈನಂದಿನ ಪೂಜಾ ಕಾರ್ಯಗಳನ್ನು ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿ ಗಳು ಮಾತ್ರವೇ ನೆರವೇರಿಸಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಭಕ್ತರಿಗೆ ದೇವಳ ಪ್ರವೇಶ ನಿಷೇಧ ಹೇರಲಾಗಿದೆ.

Comments are closed.