ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಸೇವೆಗಳು ಆರಂಭ : ಆದರೆ ಈ ನಿಯಮಗಳನ್ನು ಪಾಲಿಸಲೇ ಬೇಕು !

0

ಮಂಗಳೂರು : ರಾಜ್ಯದ ಅತ್ಯಂತ ಶ್ರೀಮಂತ ದೇಗುಲವೆಂಬ ಖ್ಯಾತಿಗೆ ಪಾತ್ರವಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇನ್ಮುಂದೆ ಭಕ್ತರಿಗೆ ಹರಿಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ಇಂದಿನಿಂದ (ಸೋಮವಾರ) ಆರಂಭವಾಗಲಿದೆ.

ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು ಇಂದಿನಿಂದಲೇ ಆರಂಭವಾಗಲಿದೆ. ಕೊರೊನಾ ವೈರಸ್​ ಸೋಂಕು ಹರಡುವಿಕೆಯ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನು ವಿಧಿಸಲಾಗುತ್ತಿದೆ. ಕಡ್ಡಾಯವಾಗಿ ಭಕ್ತರು ಈ ನಿಯಮಗಳನ್ನು ಪಾಲನೆ ಮಾಡಿಕೊಂಡೇ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಬಹುದಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ.

ಭಕ್ತರು ಪಾಲಿಸಬೇಕಾದ ನಿಯಮಗಳು ಹೀಗಿವೆ

  • ದೇವಾಲಯ ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು 3.30 ರಿಂದ ರಾತ್ರಿ 8 ಗಂಟೆಯವರೆಗೆ ತೆರೆದಿರುತ್ತದೆ.
  • ಸೇವಾರ್ಥಿಗಳಿಗೆ ಮಾತ್ರ ಭೋಜನ ವ್ಯವಸ್ಥೆಯನ್ನು ಮಾಡಲಾಗುತ್ತದೆ.
  • ಪ್ರತಿದಿನ ಮೂವತ್ತು ಭಕ್ತರಿಗೆ ಮಾತ್ರ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ನಡೆಸಲು ಅವಕಾಶ ನೀಡಲಾಗುವುದು.
  • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆಯಲ್ಲಿ ಇಬ್ಬರಿಗೆ ಮಾತ್ರ ಒಂದು ಟಿಕೆಟ್​ನಲ್ಲಿ ಸೇವೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು.
  • ಮಹಾಪೂಜೆ ಮತ್ತು ಪಂಚಾಮೃತ ಸೇವೆಯ ಹತ್ತು ಟಿಕೆಟ್ ಮಾತ್ರ ವಿತರಿಸಲಾಗುವುದು.
  • ಸರ್ಪ ಸಂಸ್ಕಾರ ಸೇವೆ ಸಲ್ಲಿಸುವವರಿಗೆ ಎರಡು ದಿನ, ಬೇರೆ ಸೇವೆ ನೀಡುವವರಿಗೆ ಒಂದು ದಿನ ಮಾತ್ರ ದೇವಾಲಯದ ವಸತಿ ಗೃಹದಲ್ಲಿ ತಂಗಲು ಅವಕಾಶ ಕಲ್ಪಿಸಲಾಗುವುದು.
Leave A Reply

Your email address will not be published.