Kukke Subrahmanya : ಕುಕ್ಕೆಯಲ್ಲಿ ಸದ್ಯಕ್ಕಿಲ್ಲ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ

ಮಂಗಳೂರು : ರಾಜ್ಯದ ಪ್ರಮುಖ ಪುಣ್ಯಕ್ಷೇತ್ರ, ಅತ್ಯಂತ ಶ್ರೀಮಂತ ದೇಗುಲ ಅನ್ನೋ ಖ್ಯಾತಿಗೆ ಪಾತ್ರವಾಗಿದ್ದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರಿಗೆ ಪೂಜೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸರ್ಪಸಂಸ್ಕಾರ, ಆಶ್ಲೇಷ ಬಲಿ ಹಾಗೂ ನಾಗಪ್ರತಿಷ್ಠೆ ಸೇವೆ ಸಲ್ಲಿಸಲು ಅವಕಾಶ ದೊರೆತಿಲ್ಲ.

Kukke 2
Kukke subrahmanya : ಕುಕ್ಕೆಯಲ್ಲಿ ಸದ್ಯಕ್ಕಿಲ್ಲ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ 4

ಕೊರೊನಾ ವೈರಸ್‌ ಸೋಂಕು ಕಡಿಮೆಯಾದ ಬೆನ್ನಲ್ಲೇ ರಾಜ್ಯದಲ್ಲಿನ ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯನ ಸನ್ನಧಿಯಲ್ಲಿಯೂ ಭಕ್ತರಿಗೆ ಅವಕಾಶ ನೀಡಲಾಗಿದೆ. ಅಲ್ಲದೇ ಅಲ್ಲದೇ ಅನ್ನದಾನ ಸೇರಿದಂತೆ ಪ್ರಮುಖ ಸೇವೆಗಳಿಗೆ ಚಾಲನೆಯನ್ನು ನೀಡಲಾಗಿದೆ.

Kukke 1
Kukke subrahmanya : ಕುಕ್ಕೆಯಲ್ಲಿ ಸದ್ಯಕ್ಕಿಲ್ಲ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ 5

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಗ್ಗೆ 6.30ರಿಂದ ಮಧ್ಯಾಹ್ನ 1.30ರ ತನಕ, ಅಪರಾಹ್ನ 3.30ರಿಂದ ರಾತ್ರಿ 8.30ರ ತನಕ ಭಕ್ತರಿಗೆ ಶ್ರೀ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ತುಲಾಭಾರ, ಶೇಷ ಸೇವೆ, ಪ್ರಾರ್ಥನೆ, ಮಧ್ಯಾಹ್ನದ ಮಹಾಪೂಜೆ, ಪವಮಾನಯುಕ್ತ ಪಂಚಾಮೃತಾಭಿಷೇಕ, ಕಲಶಪೂಜಾಯುಕ್ತ ಪಂಚಾಮೃತಾಭಿಷೇಕ, ಚವಲ ಹರಕೆ, ಹಣ್ಣುಕಾಯಿ ಸಮರ್ಪಣೆ, ವಾಹನ ಪೂಜೆ, ಹರಿವಾಣ ನೈವೇದ್ಯ, ಚಿತ್ರಾನ್ನ ಸಮರ್ಪಣೆ, ಹಾಲು ಪಾಯಸ, ಸಹಸ್ರನಾಮಾರ್ಚನೆ, ಅಷ್ಟೋತ್ತರ ಅರ್ಚನೆ, ಮೃಷ್ಠಾನ್ನ ಸಂತರ್ಪಣೆ, ಸಂತರ್ಪಣೆ , ನಂದಾದೀಪ, ಮಂಗಳಾರತಿ, ಪಂಚಾಮೃತಾ ಅಭಿಷೇಕ, ರುದ್ರಾಭಿಷೇಕ, ಕ್ಷೀರಾಭಿಷೇಕ, ಕಾರ್ತಿಕ ಪೂಜೆ ಸೇವೆಗಳು ಆರಂಭಗೊಂಡಿವೆ.

Kukke 1
Kukke subrahmanya : ಕುಕ್ಕೆಯಲ್ಲಿ ಸದ್ಯಕ್ಕಿಲ್ಲ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ 6

ಅಲ್ಲದೇ ಕುಕ್ಕೆ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಲಡ್ಡು, ಪಂಚ ಕಜ್ಜಾಯ ಪ್ರಸಾದ, ತೀರ್ಥ ಬಾಟಲಿಯನ್ನೂ ವಿತರಣೆ ಮಾಡಲಾಗುತ್ತಿದೆ. ಅಲ್ಲದೇ ಅನ್ನದಾನ ಸೇವೆಗೆ ಚಾಲನೆಯನ್ನು ನೀಡಲಾಗಿದೆ. ಅದರೆ ಪ್ರಮುಖ ಹರಿಕೆ ಸೇವೆಗಳಾದ ಸರ್ಪ ಸಂಸ್ಕಾರ, ಅಶ್ಲೇಷ ಬಲಿ, ನಾಗ ಪ್ರತಿಷ್ಟೆ ಹಾಗೂ ಮಹಾಭಿಷೇಕ ಸೇವೆಗಳು ಜುಲೈ 29 ರಿಂದ ಪ್ರಾರಂಭಗೊಳ್ಳಲಿದೆ. ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಲಾಗುತ್ತಿದೆ. ಆದರೆ ಕರಾವಳಿಯ ಪುಣ್ಯ ಕ್ಷೇತ್ರಗಳಿಗೆ ಭಕ್ತರ ದಂಡೇ ಆಗಮಿಸುತ್ತಿದ್ದು, ಮೈ ಮರೆತರೆ ಕೊರೊನಾ ಹಾಟ್ ಸ್ಪಾಟ್‌ ಆಗೋದು ಖಚಿತ.

Comments are closed.