Marankatte kshethra: ಆದಿ ಮೇಳ ‘ ಎಂದೇ ಕರೆಯಲ್ಪಡುವ ‘ ಶ್ರೀ ಮಾರಣಕಟ್ಟೆ ಮೇಳದ ಬಗ್ಗೆ ನಿಮಗಿಷ್ಟು ಮಾಹಿತಿ

(Marankatte kshethra) ಮಾರಣಕಟ್ಟೆ ಮೇಳವು ಹಲವಾರು ವರ್ಷಗಳಿಂದ ಕಲಾ ಸೇವೆ ಮಾಡುತ್ತ ಪೌರಾಣಿಕ ನೆನಪನ್ನು ಸದಾ ಮಾಡುತ್ತಿದೆ . ಶ್ರೀ ಕ್ಷೇತ್ರವು ಪ್ರಸಕ್ತ ವರುಷದಲ್ಲಿ ಎರಡು ಯಕ್ಷಗಾನ ಮೇಳಗಳನ್ನು ಹೊಂದಿದ್ದು , ಭಕ್ತರು ಹರಕೆಯಾಟವನ್ನು ತಾವು ಇಚ್ಚಿಸಿದ ಸ್ಥಳದಲ್ಲಿ ಆಟ ಆಡಿಸಲು ಅನುಕೂಲವಾಗುವಂತೆ ಎರಡು ವಾಹನ (ಬಸ್)ಗಳನ್ನು ಕ್ಷೇತ್ರವು ಹೊಂದಿದೆ. ಯಕ್ಷಗಾನ ಕಲಾವಿದರು ‘ ಶ್ರೀ ಮಾರಣಕಟ್ಟೆ ಕ್ಷೇತ್ರ ಮಹಾತ್ಮೆ ‘ ಎಂಬ ಸ್ಥಳಪುರಾಣದ ಕಥೆಗಳನ್ನು ಮಾತ್ರವಲ್ಲದೆ ರಾಮಾಯಣ, ಮಾಹಾಭಾರತದಲ್ಲಿ ಬರುವ ವಿವಿಧ ಕಥಾಪ್ರಸಂಗ ಹಾಗೂ ‘ ಶ್ರೀ ದೇವಿ ಮಹಾತ್ಮೆ ‘ ಯ ಕಥೆಗಳನ್ನು ಆಡಿ ತೋರಿಸುತ್ತಾರೆ.

ಶ್ರೀ ಕ್ಷೇತ್ರದ (Marankatte kshethra) ವತಿಯಿಂದ ನಡೆಸಲ್ಪಡುವ ಇ ಒಂದು ಮೇಳದಲ್ಲಿ ಹಿಮ್ಮೇಳ,ಮುಮ್ಮೇಳ ಮತ್ತು ಹೊರೆಯಾಳುಗಳನ್ನೊಳಗೊಂಡು ಒಟ್ಟು 45 ಜನರು ಕಾರ್ಯನಿರ್ವಹಿಸುತ್ತಾರೆ. ಯಕ್ಷಗಾನ ನೃತ್ಯ , ಹಾಡುಗಾರಿಕೆ , ಮಾತುಗಾರಿಕೆ , ವೇಷಭೂಷಣಗಳನ್ನೊಳಗೊಂಡ ಒಂದು ಸ್ವತ೦ತ್ರವಾದ ಶಾಸ್ತ್ರೀಯ ಕಲೆ. ಕರ್ನಾಟಕದ ಕರಾವಳಿಯ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ಕರಾವಳಿ ಜಿಲ್ಲೆಗಳು (ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ) , ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯಕ್ಷಗಾನವು ಮನೆ ಮಾತಾಗಿದೆ.

ಯಕ್ಷಗಾನದಲ್ಲಿ ಈ ಕೆಳಗಿನ ಪ್ರಮುಖ ಅಂಶಗಳನ್ನು ಕಾಣಬಹುದು.
ಪ್ರಸಂಗ :

ಯಕ್ಷಗಾನದಲ್ಲಿ ಯಾವುದಾದರೊಂದು ಕಥಾನಕವನ್ನು ಆಯ್ದುಕೊಂಡು ಅದನ್ನು ಜನರಿಗೆ ಹಾಡು, ಅಭಿನಯ, ನೃತ್ಯಗಳೊಂದಿಗೆ ತೋರಿಸಲಾಗುತ್ತದೆ. ಹೀಗೆ ಆಯ್ದುಕೊಂಡ ಕಥಾನಕವನ್ನು ಪ್ರಸಂಗ ಎಂದು ಕರೆಯುತಾರೆ. ಉದಾಹರಣೆಗೆ ಮಹಾಭಾರತದಲ್ಲಿ ಭೀಮ ಮತ್ತು ದುರ್ಯೋಧನರ ನಡುವೆ ನಡೆಯುವ ಗಧಾಯುದ್ಧದ ಕಥೆಯನ್ನು ಆಯ್ದುಕೊಂಡರೆ ಆಗ ಅದನ್ನು “ಗಧಾಯುದ್ದ ಪ್ರಸಂಗ” ಎಂಬುದಾಗಿ ಕರೆಯುತ್ತಾರೆ. ಹೆಚ್ಚಾಗಿ ಪೌರಾಣಿಕ ಪ್ರಸಂಗಗಳನ್ನೇ ಆಯ್ದು ಕೊಳ್ಳುವುದು ಯಕ್ಷಗಾನದ ವಾಡಿಕೆಯಾದರೂ ಪ್ರಸಂಗವು ಪೌರಾಣಿಕವೇ ಆಗಬೇಕು ಎಂಬ ನಿಯಮವೇನೂ ಇಲ್ಲ. ಇದು ಐತಿಹಾಸಿಕವೂ, ಸಾಮಾಜಿಕಾವೂ ಆಗಿರಬಹುದು.

ಪಾತ್ರಧಾರಿಗಳು :
ಪ್ರಸಂಗದಲ್ಲಿ ಬರುವ ಕಥೆಯನ್ನು ಅಭಿನಯಿಸುವವರೇ ಪಾತ್ರಧಾರಿಗಳು. ಸ್ತ್ರೀ ಪಾತ್ರ, ಖಳ ನಟನ ಪಾತ್ರ, ಹಾಸ್ಯ ಕಲಾವಿದನ ಪಾತ್ರ, ನಾಯಕನ ಪತ್ರ – ಹೀಗೆ ಪ್ರಸಂಗಕ್ಕೆ ಅನುಗುಣವಾಗಿ ಪಾತ್ರಗಳನ್ನು ಆಯ್ಕೆ ಮಾಡಲಾಗುತ್ತದೆ. ನೃತ್ಯ, ಅಭಿನಯ ಹಾಗೂ ಮಾತುಗಾರಿಕೆಗಳೊಂದಿಗೆ ಕಥೆಯನ್ನು ಪ್ರೇಕ್ಷಕರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ಪಾತ್ರಧಾರಿಗಳ ಮೇಲಿರುತ್ತದೆ.

ವೇಷಭೂಷಣ :
ಯಕ್ಷಗಾನದ ಪ್ರಮುಖ ಪ್ರಭೇದವಾದ ಬಯಲಾಟಗಳಲ್ಲಿ ವೇಷಭೂಷಣಗಳು ಪ್ರಮುಖವಾದದ್ದು. ಪಾತ್ರಗಳಿಗೆ ತಕ್ಕಂತೆ ವೇಷಭೂಷಣಗಳಿರುತ್ತವೆ. ಉದಾಹರಣೆಗೆ ಪ್ರಮುಖ ಖಳನಟ ಮತ್ತು ರಾಜ (ನಾಯಕ)ನ ಪಾತ್ರಕ್ಕೆ ಬಳಸುವ ಕಿರೀಟವು ಸಾಮಾನ್ಯ ಪಾತ್ರಧಾರಿಗೆ ಬಳಸುವ ಕಿರೀಟಗಳಿಗಿಂತ ವಿಭಿನ್ನ ವಿನ್ಯಾಸದ್ದಾಗಿರುತ್ತದೆ. ಹಾಗೆಯೇ ಸ್ತ್ರೀ ಪಾತ್ರಗಳಿಗೆ ಬಳಸುವ ಕಿರೀತವು ತುಂಬಾ ಚಿಕ್ಕದಾಗಿರುತ್ತದೆ. ಅಲ್ಲದೇ ತೆಂಕು ತಿಟ್ಟು ಶೈಲಿಯ ಯಕ್ಷಗಾನದಲ್ಲಿ ಉಪಯೋಗಿಸುವ ವೇಷಭೂಷಣಗಳು ಬಡಗು ತಿಟ್ಟಿನಲ್ಲಿ ಉಪಯೋಗಿಸುವ ವೇಷಭೂಷಣಗಳಿಗಿಂತ ಭಿನ್ನವಾಗಿರುತ್ತವೆ.

Marankatte kshethra: All you need to know about Sri Marankatte Mela also known as 'Adi Mela'

ಭಾಗವತಿಕೆ :
ಯಕ್ಷಗಾನದ ಜೀವಾಳವೇ ಭಾಗವತಿಕೆ ಅಥವಾ ಹಾಡುಗಾರಿಕೆ. ಅವರು ಈ ರಂಗ ಪ್ರಕಾರದ ನಿರ್ದೇಶಕರಿದ್ದಂತೆ. ಇಲ್ಲಿ ಪಾತ್ರಧಾರಿಗಳು ಅಭಿನಯಿಸುವ ಕಥಾನಕವನ್ನು ಕಾವ್ಯ ರೂಪದಲ್ಲಿ ಹಾಡಲಾಗುತ್ತದೆ. ಹೀಗೆ ಹಾಡುವವರನ್ನು ಭಾಗವತರು ಎಂದು ಕರೆಯುತ್ತಾರೆ. ಭಾಗವತರು ಹಾಡುವ ಪದಗಳಿಗೆ ತಕ್ಕಂತೆ ಪಾತ್ರಧಾರಿಗಳು ನೃತ್ಯದ ಮೂಲಕ ಅಭಿನಯಿಸುತ್ತಾರೆ. ನೃತ್ಯದೊಂದಿಗೆ ಹಾಡಿನಲ್ಲಿ ಬರುವ ಕಥಾನಕದ ಸಂದರ್ಭಕ್ಕನುಗುಣವಾಗಿ ಭಾವಾಭಿನಯವೂ ಸಹ ಅತ್ಯಂತ ಅಗತ್ಯವಾದುದು.

ಮಾತುಗಾರಿಕೆ :
ಭಾಗವತರು ಹಾಡುವುದನ್ನು ಪೂರ್ಣಗೊಳಿಸಿದ ಕೂಡಲೇ ಆ ಹಾಡಿನ ಸಾರಾಂಶವನ್ನು ಪಾತ್ರಧಾರಿಗಳು ಚರ್ಚಿಸುತ್ತಾರೆ. ಹಾಡಿನಲ್ಲಿ ಕಥಾನಕದ ಯಾವ ಭಾಗವನ್ನು ಪ್ರಸ್ತುತ ಪಡಿಸಲಾಗುತ್ತದೋ ಅದೇ ಭಾಗದ ಅರ್ಥವನ್ನು ಜನ ಸಾಮಾನ್ಯರೆಲ್ಲರಿಗೂ ಸ್ಪಷ್ಟವಾಗುವಂತೆ ಆಡುಮಾತಿನಲ್ಲಿ ಪಾತ್ರಧಾರಿಗಳು ಸಂಭಾಷಿಸುತ್ತಾರೆ.

ಹಿಮ್ಮೇಳ :
ಹಿಮ್ಮೇಳವೆಂದರೆ ಚಂಡೆ, ಮದ್ದಲೆ, ಮೃದಂಗ, ತಾಳ, ಜಾಗಟೆ ಮುಂತಾದ ಸಂಗೀತ ಉಪಕರಣಗಳನ್ನು ಇಲ್ಲಿನ ನೃತ್ಯ, ಭಾಗವತಿಕೆ ಮತ್ತು ಮಾತುಗಾರಿಕೆಯ ವೇಳೆ ಸಂದರ್ಭೋಚಿತವಾಗಿ ಬಳಸುವಿಕೆ. ಒಂದು ಯಕ್ಷಗಾನವು ಪರಿಣಾಮಕಾರಿಯಾಗಿ ಮೂಡಿಬರಬೇಕಾದರೆ ಪಾತ್ರಧಾರಿಗಳ ಅಭಿನಯ, ನೃತ್ಯ, ಭಾಗವತಿಕೆ ಎಷ್ಟು ಮುಖ್ಯವೋ, ಹಿಮ್ಮೇಳವೂ ಸಹಾ ಅಷ್ಟೇ ಪ್ರಮುಖವಾದುದು. ಪಾತ್ರಧಾರಿಗಳ ಅಭಿನಯವು ಇನ್ನಷ್ಟು ಛಾಪು ಮೂಡಿಸಲು, ಭಾಗವತರ ಹಾಡು ಇನ್ನಷ್ಟು ಸುಂದರವಾಗಿ ಹೊರಹೊಮ್ಮಲು ಸರಿಯಾದ ಹಿಮ್ಮೇಳ ಬೇಕೇ ಬೇಕು.

ಉಗಮ :
ಯಕ್ಷಗಾನದ ಮೊದಲ ಉಲ್ಲೇಖ ಸಾರ್ಣದೇವನ “ಸ೦ಗೀತ ರತ್ನಾಕರ”ದಲ್ಲಿ (೧೨೧೦ ಕ್ರಿಶ) “ಜಕ್ಕ” ಎ೦ದು ಆಗಿದ್ದು ಮು೦ದೆ “ಯಕ್ಕಲಗಾನ” ಎ೦ದು ಕರೆಯಲ್ಪಟ್ಟಿತ್ತು ಎ೦ಬುದು ಒ೦ದು ಅಭಿಪ್ರಾಯ. ಗ೦ಧರ್ವ ಗ್ರಾಮ ಎ೦ಬ ಈಗ ನಶಿಸಿ ಹೋಗಿರುವ ಗಾನ ಪದ್ದತಿಯಿ೦ದ ಗಾನ ಮತ್ತು ಸ್ವತ೦ತ್ರ ಜಾನಪದ ಶೈಲಿಗಳಿ೦ದ ನೃತ್ಯ ರೂಪಗೊ೦ಡಿತೆ೦ದು ಶಿವರಾಮ ಕಾರ೦ತರ “ಯಕ್ಷಗಾನ ಬಯಲಾಟ” ಎ೦ಬ ಸ೦ಶೋಧನಾ ಪ್ರಭ೦ದಗಳ ಸಂಕಲನದಲ್ಲಿ ಹೇಳಿದೆ. ೧೫೦೦ ರಷ್ಟರಲ್ಲಿ ವ್ಯವಸ್ತಿತವಾಗಿ ಯಕ್ಷಗಾನ ರೂಢಿಯಲ್ಲಿತ್ತು ಎ೦ಬುದು ಬಹಳ ವಿದ್ವಾ೦ಸರು ಒಪ್ಪುವ ವಿಚಾರ.

ಯಕ್ಷಗಾನದ ಪ್ರಭೇದಗಳು :
ಯಕ್ಷಗಾನದಲ್ಲಿ ಅನೇಕ ರೀತಿಯ ಪ್ರಭೇದಗಳಿದ್ದು ಅವುಗಳಲ್ಲಿ ಯಕ್ಷಗಾನ ಬಯಲಾಟವು ಅತ್ಯಂತ ಜನಪ್ರಿಯವಾದುದು. ಬಯಲಾಟವೆಂದರೆ ವೇಷಭೂಷಣಗಳೊಂದಿಗೆ ರಂಗಭೂಮಿಯಲ್ಲಿ ಆಡುವ ಯಕ್ಷಗಾನ ಪ್ರಭೇದ. ಮೊದ ಮೊದಲು ಹಬ್ಬ ಹರಿ ದಿನಗಳಂದು ಊರಿನ ಬಯಲಿನಲ್ಲಿ ರಾತ್ರಿಯಿಡೀ ಈ ಬಯಲಾಟ ಹೆಚ್ಚಾಗಿ ನಡೆಯಿತ್ತಿದ್ದ ಕಾರಣ “ಬಯಲಾಟ” ಎಂಬ ಹೆಸರು ರೂಢಿಯಲ್ಲಿದೆ. ಜನರು ಇದನ್ನು ಸರಳವಾಗಿ “ಆಟ” ಎಂದೂ ಕರೆಯುತ್ತಾರೆ. ಆದರೆ ಈಗೀಗ ರಾತ್ರಿಯಿಡೀ ನಡೆಯುವ ಬಯಲಾಟದೊಂದಿಗೆ ೨-೩ ಘಂಟೆಗಳ ಕಾಲ ನಡೆಯುವ ಯಕ್ಷಗಾನವೂ ಬಳಕೆಯಲ್ಲಿದೆ. ಬಯಲಾಟದಲ್ಲಿ ವೇಷಭೂಷಣ, ರಂಗಸ್ಥಳ, ಭಾಗವತಿಕೆ (ಹಾಡುಗಾರಿಕೆ), ಅಭಿನಯ, ಮಾತುಗಾರಿಕೆ, ನೃತ್ಯ – ಹೀಗೆ ಸಾಂಪ್ರದಾಯಿಕ ಯಕ್ಷಗಾನದ ಎಲ್ಲ ಮಜಲುಗಳನ್ನೂ ಕಾಣಬಹುದು. ಯಕ್ಷಗಾನದಲ್ಲಿ ಮೂಡಲಪಾಯ ಮತ್ತು ಪಡುವಲಪಾಯ ಎಂಬ ಎರಡು ಮ್ರಮುಖ ಪ್ರಭೇದಗಳಿವೆ. ಪಶ್ಚಿಮ ಘಟ್ಟದ ಪೂರ್ವಕ್ಕೆ ಪ್ರಚಲಿತವಿರುವದು ಮೂಡಲಪಾಯ. ಉತ್ತರ ಕರ್ನಾಟಕದಲ್ಲಿ ಬಹು ಜನಪ್ರಿಯವಾಗಿರುವ ಶ್ರೀಕೃಷ್ಣ ಪಾರಿಜಾತ ಮೂಡಲಪಾಯದಲ್ಲಿ ಗಮನಾರ್ಹ. ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರಚಲಿತವಿರುವುದು ಪಡುವಲಪಾಯ. ಪಡುವಲಪಾಯದಲ್ಲಿ ೩ ವಿಭಾಗಗಳಿವೆ.ಅವು “‘ತೆಂಕುತಿಟ್ಟು’ಬಡಗುತಿಟ್ಟುಮತ್ತು ಉತ್ತರದ ತಿಟ್ಟು. ಉತ್ತರ ಕನ್ನಡ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತರದ ತಿಟ್ಟು ಶೈಲಿಯ ಬಯಲಾಟಗಳು ಕಂಡುಬಂದರೆ ಉಡುಪಿಯಲ್ಲಿ ಬಡಗುತಿಟ್ಟು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ತೆಂಕು ತಿಟ್ಟು ಶೈಲಿಯ ಯಕ್ಷಗಾನವನ್ನು ಕಾಣಬಹುದು. ವೇಷಭೂಷಣಗಳ ವಿನ್ಯಾಸ, ನೃತ್ಯದ ಶೈಲಿ, ಭಾಗವತಿಕೆ ಮತ್ತು ಹಿಮ್ಮೇಳಗಳಲ್ಲಿ ಕಂಡುಬರುವ ಕೆಲವು ವ್ಯತ್ಯಾಸಗಳ ಆಧಾರದ ಮೇಲೆ ಈ ವಿಂಗಡನೆಯನ್ನು ಮಾಡಲಾಗಿದೆಯೇ ಹೊರತು ಯಕ್ಷಗಾನದ ಮೂಲ ತತ್ವ, ಆಶಯಗಳು ೩ ಶೈಲಿಗಳಲ್ಲಿಯೂ ಒಂದೇ ಆಗಿರುತ್ತದೆ.

Marankatte kshethra: All you need to know about Sri Marankatte Mela also known as 'Adi Mela'

ತಾಳ ಮದ್ದಲೆ :
ಯಕ್ಷಗಾನದ ಇನ್ನೊಂದು ಪ್ರಮುಖ ವಿಭಾಗವೆಂದರೆ “ತಾಳ ಮದ್ದಲೆ”. ಬಯಲಾಟಗಳಿಗಿಂತ ಇವು ವಿಭಿನ್ನವಾದವುಗಳು. ಇಲ್ಲಿ ವೇಷಭೂಷಣ, ನೃತ್ಯ ಮತ್ತು ಭಾವಾಭಿನಯಗಳು ಕಂಡು ಬರುವುದಿಲ್ಲ. ಭಾಗವತಿಕೆ, ಹಿಮ್ಮೇಳ ಹಾಗೂ ಮಾತುಗಾರಿಕೆಗಳು ಮಾತ್ರ ಇಲ್ಲಿರುತ್ತವೆ. ಬಯಲಾಟದಂತೆ ಇಲ್ಲಿಯೂ ಒಂದು ಪ್ರಸಂಗವನ್ನು ಆಯ್ದುಕೊಳ್ಳಲಾಗುತ್ತದೆ. ಭಾಗವತರು ಹಾಡುಗಾರಿಕೆಯ ಮೂಲಕ ಕಥಾನಕವನ್ನು ಹೇಳುತ್ತಾ ಹೋಗುತ್ತಾರೆ. ಇಲ್ಲಿ ಪಾತ್ರಧಾರಿಗಳ ಬದಲು ಅರ್ಥಧಾರಿಗಳಿರುತ್ತಾರೆ. ಅರ್ಥಧಾರಿಗಳು ಹಾಡುಗಾರಿಕೆಯಲ್ಲಿ ಹೇಳಲ್ಪಟ್ಟ ಕಥೆಯ ಭಾಗವನ್ನು ಮಾತುಗಾರಿಕೆಯ ಮೂಲಕ ಚರ್ಚಿಸುತ್ತಾರೆ. ಬಯಲಾಟಕ್ಕೂ ತಾಳ ಮದ್ದಲೆಗೂ ಪ್ರಮುಖ ವ್ಯತ್ಯಾಸವಿರುವುದೇ ಈ ಮಾತುಗಾರಿಕೆಯಲ್ಲಿ. ಬಯಲಾಟಗಳಲ್ಲಿ ನೃತ್ಯ ಮತ್ತು ಅಭಿನಯಗಳೇ ಪ್ರಧಾನ. ಮಾತುಗಾರಿಕೆ ಇದ್ದರೂ ಅದು ಕೇವಲ ಹಾಡುಗಾರಿಕೆಯಲ್ಲಿ ಹೇಳಲ್ಪಟ್ಟ ಕಥಾನಕದ ಸಾರಾಂಶವಷ್ಟೇ ಆಗಿರುತ್ತದೆಯೇ ವಿನಃ ವಾದ ಮಂಡನೆಗೆ ಹೆಚ್ಚು ಅವಕಾಶವಿರುವುದಿಲ್ಲ. ಅದೂ ಅಲ್ಲದೇ ಬಯಲಾಟದಲ್ಲಿ ಬರುವ ಸಂಭಾಷಣೆಗಳನ್ನು ಸಾಮಾನ್ಯವಾಗಿ ಮೊದಲೇ ಸಿಧ್ಧಪಡಿಸಿರುತ್ತಾರೆ. ಹಾಗಾಗಿ ಈ ಮಾತುಗಾರಿಕೆಯು ಭಾಗವತಿಕೆಯಲ್ಲಿ ಹೇಳಲ್ಪಟ್ಟ ಕಥೆಯ ಚೌಕಟ್ಟನ್ನು ದಾಟಿ ಆಚೆ ಹೋಗುವುದಿಲ್ಲ. ಆದರೆ ತಾಳ ಮದ್ದಲೆಗಳು ಹಾಗಲ್ಲ. ತಾಳ ಮದ್ದಲೆಯಲ್ಲಿ ವಾದವೇ ಪ್ರಮುಖವಾದದ್ದು. ಇಲ್ಲಿ ಈ ಭಾಗವತರು ಹೇಳುವ ಒಂದು ಹಾಡಿಗೆ ಇಂತಿಷ್ಟೇ ಸಂಭಾಷಣೆಗಳನ್ನು ಹೇಳಬೇಕು ಎಂದು ಪೂರ್ವ ನಿರ್ಧಾರವಾಗಿರುವಿದಿಲ್ಲ. ಭಾಗವತರು ಹಾಡುಗಾರಿಕೆಯ ಮೂಲಕ ವಾದಕ್ಕೆ ಒಂದು ಪೀಠಿಕೆ ಹಾಕಿ ಕೊಡುತ್ತಾರೆ. ಆಮೇಲೆ ಆ ಕಥಾನಕದ ಭಾಗದ ಮೇಲೆ ಅರ್ಥಧಾರಿಗಳಿಂದ ವಾದ ಆರಂಭವಾಗುತ್ತದೆ. ಈ ವಾದ ಸಂಧರ್ಭಕ್ಕನುಗುಣವಾಗಿ ಪ್ರಸಂಗದಿಂದ ಪ್ರಸಂಗಕ್ಕೆ ಬದಲಾಗುತ್ತಲೂ ಹೋಗಬಹುದು. ವಾದವೇ ತಾಳ ಮದ್ದಲೆಗಳ ಜೀವಾಳವಾಗಿರುತ್ತದೆ.

ಇದನ್ನೂ ಓದಿ : Shri kshetra mandarthi: ನಾಗಲೋಕದ ರಾಣಿ ಮಂದರತಿ ದುರ್ಗಾಪರಮೇಶ್ವರಿಯಾದ ರೋಚಕ ಹಿನ್ನಲೆ

(Marankatte kshethra) The Marankatte Mela has been serving the arts for many years and has always created a legendary memory. Sri Kshetra has two Yakshagana Melas in the current year and the Kshetra has two vehicles (buses) to facilitate the devotees to play wherever they want.

Comments are closed.