ಕನ್ನಡಿಗ ಕೆ.ಎಲ್.ರಾಹುಲ್ ಶತಕ ದಿಗ್ಗಜರ ದಾಖಲೆಗಳು ಉಡೀಸ್ !k

0

ಮೌಂಟ್‌ಮೌಂಗಾನುಯಿ : ಭರ್ಜರಿ ಫಾರ್ಮ್ ನಲ್ಲಿರುವ ಕನ್ನಡಿಗ ಕೆ.ಎಲ್.ರಾಹುಲ್ ತಮ್ಮ ಅದ್ಬುತ ಬ್ಯಾಟಿಂಗ್ ಮುಂದುವರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ದ ಬೇ ಓವಲ್‌ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕೆ.ಎಲ್ ರಾಹುಲ್ ವೃತ್ತಿ ಜೀವನದ ನಾಲ್ಕನೇ ಶತಕ ಸಿಡಿಸಿದ್ದಾರೆ. ಈ ಮೂಲಕ ರಾಹುಲ್ ದ್ರಾವಿಡ್, ವಿರಾಟ್ ಕೊಯ್ಲಿ ಸೇರಿದಂತೆ ಕ್ರಿಕೆಟ್ ದಿಗ್ಗಜರ ದಾಖಲೆಗಳನ್ನು ಮುರಿದಿದ್ದಾರೆ.

ನ್ಯೂಜಿಲೆಂಡ್ ಸರಣಿಯುದ್ದಕ್ಕೂ ರಾಹುಲ್ ಅದ್ಬುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅಂತಿಮ ಪಂದ್ಯದಲ್ಲಿಯೂ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದ ರಾಹುಲ್ 113 ಎಸೆತಗಳನ್ನು ಎದುರಿಸಿ ಸೊಗಸಾದ 2 ಸಿಕ್ಸರ್ ಹಾಗೂ 9 ಬೌಂಡರಿಗಳ ನೆರವಿನಿಂದ 122 ರನ್ ಸಿಡಿಸೋ ಮೂಲಕ ವೃತ್ತಿ ಜೀವದ ನಾಲ್ಕನೇ ಹಾಗೂ 5ನೇ ಕ್ರಮಾಂಕದಲ್ಲಿ ಮೊದಲ ಶತಕ ಬಾರಿಸಿದ್ದಾರೆ. ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ಏಷ್ಯಾದ ಹೊರಗಡೆ ವಿಕೆಟ್ ಕೀಪರ್, ಬ್ಯಾಟ್ಸಮನ್ ಆಗಿ ಮೊದಲ ಶತಕ ಸಿಡಿಸಿದ ಮೊದಲ ಆಟಗಾರನೆಂಬ ಖ್ಯಾತಿಗೆ ರಾಹುಲ್ ಪಾತ್ರರಾಗಿದ್ದಾರೆ.

ಈ ಮೂಲಕ ಭಾರತದ ಗೋಡೆ ಎಂದೇ ಖ್ಯಾತಿ ಪಡೆದಿದ್ದ ರಾಹುಲ್ ದ್ರಾವಿಡ್ ದಾಖಲೆಯನ್ನುಸರಿಗಟ್ಟಿದ್ದಾರೆ. ಈ ಮೊದಲು ರಾಹುಲ್ ದ್ರಾವಿಡ್ ಬಳಿಕ ಏಷ್ಯಾ ಹೊರಗಡೆ ಶತಕ ಬಾರಿಸಿದ ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಪಾತ್ರರಾಗಿದ್ದರು. 1999ರಲ್ಲಿ ಶ್ರೀಲಂಕಾ ವಿರುದ್ದ ಇಂಗ್ಲೆಂಡ್‌ನ ಟಾಂಟನ್ ಮೈದಾನದಲ್ಲಿ ರಾಹುಲ್ ದ್ರಾವಿಡ್ 145 ರನ್ ಸಿಡಿಸಿದ್ದರು.

ಇದಾದ ಬಳಿಕ ಎಂಎಸ್ ಧೋನಿ ಕಟಕ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಬಾರಿಸಿದ್ದರು. ನಂತರ ಧೋನಿ 134 ರನ್ ಗಳಿಸಿದರು. ಇದೀಗ ಇಬ್ಬರ ದಾಖಲೆಯನ್ನೂ ಸರಿಗಟ್ಟಿದ್ದಾರೆ. ಇನ್ನು ಅತಿ ವೇಗದಲ್ಲಿ ನಾಲ್ಕು ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪೈಕಿ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಕೆ.ಎಲ್ ರಾಹುಲ್ ಮುರಿದಿದ್ದಾರೆ.

ತಮ್ಮ 31ನೇ ಇನಿಂಗ್ಸ್‌ನಲ್ಲಿ ಕೆ.ಎಲ್ ರಾಹುಲ್ ನಾಲ್ಕನೇ ಶತಕ ಸಾಧನೆ ಮಾಡಿದ್ದಾರೆ. ನಾಲ್ಕು ಶತಕ ಸಿಡಿಸಲು ವಿರಾಟ್ ಕೊಹ್ಲಿ 36 ಇನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದರು. ಈ ಸಾಧನೆ ಮಾಡಿದವರ ಪಟ್ಟಿಯಲ್ಲಿ ಶಿಖರ್ ಧವನ್ (24 ಇನಿಂಗ್ಸ್‌) ಅಗ್ರಸ್ಥಾನದಲ್ಲಿದ್ದಾರೆ. ಶಿಖರ್ ಧವನ್ ನಂತರ ಕಡಿಮೆ ಇನಿಂಗ್ಸ್‌ನಲ್ಲಿ 4 ಶತಕಗಳನ್ನು ಗಳಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಧವನ್ 24 ನೇ ಇನ್ನಿಂಗ್ಸ್‌ನಲ್ಲಿ ನಾಲ್ಕನೇ ಶತಕ ಬಾರಿಸಿದರು. ಇದೀಗ ರಾಹುಲ್ 31 ನೇ ಇನ್ನಿಂಗ್ಸ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.

Leave A Reply

Your email address will not be published.