ಇಂದು ಟಿ20 4ನೇ ಪಂದ್ಯ : ಸರಣಿ ಕ್ಲಿನ್ ಸ್ವೀಪ್ ಮಾಡುತ್ತಾ ಭಾರತ

0

ವೆಲ್ಲಿಂಗ್ಟನ್ : ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಯಲ್ಲಿ ಭಾರತ 4ನೇ ಪಂದ್ಯವನ್ನು ಇಂದು ಆಡಳಿದೆ. ಸತತ ಮೂರು ಪಂದ್ಯಗಳನ್ನು ಗೆದ್ದು ಬೀಗಿರೋ ಭಾರತ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡೋ ತವಕದಲ್ಲಿದೆ. ಸರಣಿಯನ್ನು ಕೈವಶ ಮಾಡಿಕೊಂಡಿರೋ ಭಾರತ ಕೆಲ ಆಟಗಾರರಿಗೆ ವಿಶ್ರಾಂತಿ ನೀಡೋ ಸಾಧ್ಯತೆಯಿದೆ.
ವೆಲ್ಲಿಂಗ್ಟನ್ ಸ್ಕೈಮೈದಾನ ಬ್ಯಾಟಿಂಗ್ ಗೆ ಸಹಕಾರಿಯಾಗಿರೋದ್ರಿಂದಾಗಿ ಪಂದ್ಯದಲ್ಲಿ ರನ್ ಹೊಳೆ ಹರಿಯೋ ಸಾಧ್ಯತೆಯಿದೆ. ಇನ್ನು ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳಲ್ಲಿ ಬದಲಾವಣೆ ಮಾಡಿಕೊಳ್ಳೋ ಸಾಧ್ಯತೆಯಿದೆ. ಭಾರತ ತಂಡದಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವ ಶಿವಂ ದುಬೆ ಇಂದಿನ ಪಂದ್ಯವನ್ನು ಆಡುವುದು ಅನುಮಾನ. ಉಳಿದಂತೆ ಚಹಲ್ ಬದಲು ಸೈನಿ ಕಣಕ್ಕಿಳಿಯೋ ಸಾಧ್ಯತೆಯಿದೆ. ಇನ್ನು ನ್ಯೂಜಿಲೆಂಡ್ ತಂಡದಲ್ಲಿ ಒಂದೆರಡು ಬದಲಾವಣೆಗಳನ್ನು ನಿರೀಕ್ಷಿಸಬಹುದಾಗಿದೆ.

ಸಂಭಾವ್ಯ ತಂಡ :
ಭಾರತ : ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ಶಿವಂದುಬೆ/ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಯಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್, ಜಸ್ಪ್ರಿತ್ ಬುಮ್ರಾ.
ನ್ಯೂಜಿಲೆಂಡ್ : ಮಾರ್ಟಿನ್ ಗುಪ್ಟಿಲ್, ಕಾಲಿನ್ ಮನ್ರೊ, ಕೇನ್ ವಿಲಿಯಮ್ಸನ್(ನಾಯಕ), ರಾಸ್ ಟೇಲರ್, ಕಾಲಿನ್ ಡಿ ಗ್ರ್ಯಾಂಡ್ಹೋಮ್ , ಟಿಮ್ ಸೀಫರ್ಟ್, ಡೆರ್ಲಿ ಮಿಚೆಲ್, ಮಿಚೆಲ್ ಸ್ಯಾಂಟ್ನರ್ , ಇಶ್ ಸೋಧಿ, ಹಮೀಶ್ ಬೆನೆಟ್, ಟಿಮ್ ಸೌಥ್.

ಸಮಯ: ಮಧ್ಯಾಹ್ನ 12:30
ಸ್ಥಳ: ಸ್ಕೈ ಕ್ರೀಡಾಂಗಣ, ವೆಲ್ಲಿಂಗ್ಟನ್

Leave A Reply

Your email address will not be published.