ನ್ಯೂಜಿಲ್ಯಾಂಡ್ ಸರಣಿಗೆ ಟೀಮ್ ಇಂಡಿಯಾ ಆಯ್ಕೆ: ಸ್ಯಾಮ್ಸನ್ ಔಟ್ , ರೋಹಿತ್ ಶರ್ಮಾ ಇನ್

0

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ನಂತರ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಟಿ20 ಸರಣಿಗೆ ಬಿಸಿಸಿಐ 16 ಆಟಗಾರರ ಟೀಂ ಇಂಡಿಯಾವನ್ನು ಪ್ರಕಟಿಸಿದ್ದು ಶ್ರೀಲಂಕಾ ತಂಡದಿಂದ ದೂರ ಉಳಿದಿದ್ದ ರೋಹಿತ್ ಶರ್ಮಾ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಆದ್ರೆ ಭರವಸೆಯ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಬಿಸಿಸಿಐ ಕೈಬಿಟ್ಟಿದೆ.

ಜನವರಿ 24ರಿಂದ ನ್ಯೂಜಿಲ್ಯಾಂಡ್ ವಿರುದ್ಧದ ಟಿ20, ಏಕದಿನ ಮತ್ತು ಟೆಸ್ಟ್ ಸರಣಿಗಳು ಆರಂಭಗೊಳ್ಳಲಿದೆ. ಸದ್ಯ ಟಿ20 ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದು ತಂಡದಲ್ಲಿ ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ರಿಷಬ್ ಪಂತ್, ಕೆಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಶಿವಂ ದುಬೆ, ಕುಲದೀಪ್ ಯಾದವ್, ಯಜುವೇಂದ್ರ ಚಹಾಲ್, ವಾಷ್ಟಿಂಗನ್ ಸುಂದರ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ರವೀಂದ್ರ ಜಡೇದಾ ಮತ್ತು ಶಾರ್ದೂಲ್ ಠಾಕೂರ್.

Leave A Reply

Your email address will not be published.