ಭಾರತ – ನ್ಯೂಜಿಲ್ಯಾಂಡ್ ಟಿ20 ಸರಣಿ : ಕೊಯ್ಲಿ ಪಡೆಗೆ ಇಂದು ಮೊದಲ ಅಗ್ನಿ ಪರೀಕ್ಷೆ

0

ಅಕ್ಲೆಂಡ್ : ಸತತ ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾ ದ್ವೀಪರಾಷ್ಟ್ರ ನ್ಯೂಜಿಲ್ಯಾಂಡ್ ಗೆ ಪ್ರಯಾಣ ಬೆಳೆಸಿದೆ. ಇಂದಿನಿಂದ ಐದು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಲಿದ್ದು, ಗಾಯದಿಂದ ಕಂಗೆಟ್ಟಿರೊ ಕೊಯ್ಲಿ ಪಡೆ ಇಂದು ಮೊದಲ ಅಗ್ನಿ ಪರೀಕ್ಷೆ ಎದುರಿಸಲಿದೆ.

ನ್ಯೂಜಿಲ್ಯಾಂಡ್ ನ ಈಡೆನ್ ಪಾರ್ಕ್ ಅಂಗಳದಲ್ಲಿ ಮೊದಲ ಹಣಾಹಣಿಯಲ್ಲಿ ಕೇನ್ ವಿಲಿಯಮ್ಸ್ ಪಡೆಯನ್ನು ಟೀಂ ಇಂಡಿಯಾ ಎದುರಿಸಲಿದೆ. ಟಿ20 ಸರಣಿ ಹಿನ್ನೆಲೆಯಲ್ಲಿ ನಿನ್ನೆ ಟೀಂ ಇಂಡಿಯಾ ಕಠಿಣ ಅಭ್ಯಾಸ ನಡೆಸಿದೆ. ಮುಂದಿನ ವಿಶ್ವಕಪ್ ಗೆ ಉತ್ತಮ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಭಾರತ ಬಿಡುವಿಲ್ಲ ವೇಳಾಪಟ್ಟಿಯಲ್ಲಿ ಪಂದ್ಯಗಳನ್ನಾಡುತ್ತಿದೆ.

ಭಾರತ ತಂಡ ಆರಂಭಿಕ ಆಟಗಾರ ಶಿಖರ್ ಧವನ್, ಹಾರ್ದಿಕ್ ಪಾಂಡ್ಯ, ದೀಪಕ್ ಚಾಹರ್ ಹಾಗೂ ಭುವನೇಶ್ವರ್ ಕುಮಾರ್ ಅವರು ಗಾಯದಿಂದ ಚೇತರಿಸಿಕೊಳ್ಳುತ್ತಿರುವುದು ಭಾರತಕ್ಕೆ ನಷ್ಟವನ್ನುಂಟು ಮಾಡಿದೆ. ಹೀಗಾಗಿ ಕೊಯ್ಲಿ ಪಡೆಗೆ ದ್ವೀಪರಾಷ್ಟ್ರದಲ್ಲಿ ಹೊಸ ಸವಾಲು ಎದುರಾಗಿದೆ. ಶಿಖರ್ ಧವನ್ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಹಾಗೂ ಕನ್ನಡಿಗ ಕೆ.ಎಲ್ ರಾಹುಲ್ ಜೋಡಿ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಅದ್ರಲ್ಲೂ ರಾಹುಲ್ ಉತ್ತಮ ಫಾರ್ಮ್ ನಲ್ಲಿರೋದು ಭಾರತ ತಂಡಕ್ಕೆ ಪ್ಲಸ್ ಪಾಯಿಂಟ್. ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್ ಎರಡರಲ್ಲೂ ಮಿಂಚುವ ಮೂಲಕ ನಾಯಕ ವಿರಾಟ್ ಕೊಹ್ಲಿ ಅವರ ಮನಗೆದ್ದಿರೋ ರಾಹುಲ್ ವಿಕೆಟ್ ಹಿಂದೆ ಕೂಡ ಕೆಲಸ ಮಾಡಲಿದ್ದಾರೆ.

ಈಡೆನ್ ಪಾರ್ಕ್ ಅಂಗಳ ಬೌಲರ್ ಗಳಿಗೆ ಹೆಚ್ಚು ನೆರವಾಗೋ ಸಾಧ್ಯತೆಯಿರುವುದರಿಂದ ಎರಡು ತಂಡಗಳು ಬೌಲರ್ ಗಳನ್ನೇ ಹೆಚ್ಚಾಗಿ ನೆಚ್ಚಿಕೊಳ್ಳೋ ಸಾಧ್ಯತೆಯಿದೆ. ಕಳೆದ ವರ್ಷ ಭಾರತ 1-2 ಅಂತರದಲ್ಲಿ ಕಿವೀಸ್ ವಿರುದ್ಧ ಸೋಲು ಅನುಭವಿಸಿತ್ತು. ಶ್ರೀಲಂಕಾ, ಇಂಗ್ಲೆಂಡ್ ವಿರುದ್ದದ ಸರಣಿಯಲ್ಲಿಯೂ ಉತ್ತಮ ಪ್ರದರ್ಶನ ತೋರಿರುವ ನ್ಯೂಜಿಲ್ಯಾಂಡ್ ಬಲಿಷ್ಠವಾಗಿದೆ. ಆದ್ರೆ ಟ್ರೆಂಟ್ ಬೌಲ್ಟ್, ಲಾಕಿ ಫರ್ಗೂಸನ್, ಮ್ಯಾಟ್ ಹೆನ್ರಿ ಹಾಗೂ ಜಿಮ್ಮಿ ನಿಶ್ಯಾಮ್ಸ್ ಅವರ ಅನುಪಸ್ಥಿ ನ್ಯೂಜಿಲ್ಯಾಂಡ್ ಗೆ ದೊಡ್ಡ ಹೊಡೆತವನ್ನು ನೀಡಿದೆ.

ಸಂಭಾವ್ಯ ತಂಡ :
ಭಾರತ : ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ರಿಷಭ್ ಪಂತ್/ಶಿವಂದುಬೆ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಜಸ್ಪ್ರಿತ್ ಬುಮ್ರಾ.
ನ್ಯೂಜಿಲ್ಯಾಂಡ್ : ಮಾರ್ಟಿನ್ ಗುಪ್ಟಿಲ್, ಟಿಮ್ ಸೀಫರ್ಟ್, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಕಾಲಿನ್ ಡಿ ಗ್ರಾಂಡ್ಹೋಮ್, ಡೆರ್ಲಿ ಮಿಚೆಲ್, ಮಿಚೆಲ್ ಸ್ಯಾಂಟ್ನರ್ , ಇಶ್ ಸೋಧಿ, ಹಮೀಶ್ ಬೆನೆಟ್, ಬ್ಲೈರ್ ಟಿಕ್ಕರ್, ಟಿಮ್ ಸೌಥ್.

Leave A Reply

Your email address will not be published.