World Cup 2023 Virat Kohli World Record : ವಿಶ್ವಕಪ್ 2023 ಫೈನಲ್‌ನಲ್ಲಿ ಭಾರತ ಸೋಲು ಕಂಡಿದೆ. 3 ನೇ ಬಾರಿಗೆ ವಿಶ್ವಕಪ್ ಗೆಲ್ಲುವ ಶತಕೋಟಿ ಭಾರತೀಯರ ಕನಸು ಕೊನೆಗೂ ಈಡೇರಿಲ್ಲ. ಸೋಲಿನ ನೋವಲ್ಲೂ ವಿರಾಟ್ ಕೊಹ್ಲಿ (Virat Kohli) ಸರಣಿಶ್ರೇಷ್ಟ ಪ್ರಶಸ್ತಿ ಪಡೆದುಕೊಂಡಿರುವುದು ಭಾರತೀಯರಿಗೆ ಸಮಾಧಾನ ತರಿಸಿದೆ. ಅದ್ರಲ್ಲೂ ವಿಶ್ವಕಪ್‌ನಲ್ಲಿ(World Cup 2023) ವಿರಾಟ್ ಆಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ವಿರಾಟ್ ಕೊಹ್ಲಿ ಸದ್ಯ ಅತೀ ಹೆಚ್ಚು ಶತಕ ಸಿಡಿಸಿದ ವಿಶ್ವದ ಅಗ್ರಗಣ್ಯ ಆಟಗಾರ. ವಿಶ್ವಕಪ್‌ನಲ್ಲಿ 11 ಇನ್ನಿಂಗ್ಸ್‌ಗಳನ್ನು ಆಡಿರುವ ವಿರಾಟ್ ಕೊಹ್ಲಿ ಭಾರತ ತಂಡವನ್ನು ಫೈನಲ್‌ಗೆ ಏರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಕೊಹ್ಲಿ 11 ಇನ್ನಿಂಗ್ಸ್‌ಗಳಲ್ಲಿ ಒಟ್ಟು 765 ರನ್ ಗಳಿಸಿದ್ದಾರೆ. ಈ ಮೂಲಕ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಗರಿಷ್ಠ ರನ್ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಈ ಬಾರಿಯ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ 11 ಇನ್ನಿಂಗ್ಸ್ ಗಳನ್ನು ಆಡಿದ್ದು, 95.62 ರ ಸರಾಸರಿಯಲ್ಲಿ 90.3 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಅದ್ರಲ್ಲೂ 6 ಅರ್ಧಶತಕ ಹಾಗೂ 3 ಶತಕಗಳು ಒಳಗೊಂಡಿವೆ. ಅಷ್ಟೇ ಅಲ್ಲದೇ ಫೈನಲ್ ಪಂದ್ಯದಲ್ಲಿ ಭಾರತ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲೂ 63 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ತಂಡಕ್ಕೆ ನೆರವಾದ್ರು.
ವಿಶ್ವಕಪ್ 2023 ನ್ನು ಭಾರತ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಅಜೇಯ ವಾಗಿ ಫೈನಲ್‌ಗೆ ಎಂಟ್ರಿ ಕೊಟ್ಟಿದ್ದ ಭಾರತ ತಂಡ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಮುಗ್ಗರಿಸಿತ್ತು. ಆದರೂ ಕೂಡ ವಿರಾಟ್ ಕೊಹ್ಲಿ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಸರಣಿ ಶ್ರೇಷ್ಟ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

35 ವರ್ಷ ವಯಸ್ಸಿನ ವಿರಾಟ್ ಕೊಹ್ಲಿ ವಿಶ್ವಕಪ್‌ನಲ್ಲಿ ತಮ್ಮ 50ನೇ ಏಕದಿನ ಅಂತಾರಾಷ್ಟ್ರೀಯ (ODI) ಶತಕವನ್ನು ಪೂರೈಸುವ ಮೂಲಕ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಅಳಿಸಿ ಹಾಖಿದ್ದಾರೆ. ಸಚಿನ್ ತೆಂಡೂಲ್ಕರ್ 49 ಏಕದಿನ ಶತಕಗಳನ್ನು ಬಾರಿಸುವ ಮೂಲಕ ವಿಶ್ವದಾಖಲೆ ಬರೆದಿದ್ದರು.
765 runs, one wicket and countless records after! 👊
Virat Kohli emerges as the #CWC23 Player of the Tournament 🤩
Read more 👉 https://t.co/9kF4Wg0Q2h pic.twitter.com/5FxztMkGwK
— ICC (@ICC) November 19, 2023
ಇದನ್ನೂ ಓದಿ : 6ನೇ ಬಾರಿಗೆ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ: ಟ್ರಾವೆಸ್ ಹೆಡ್ ಆರ್ಭಟ, ಎಲ್ಲಾ ಗೆದ್ದು ಫೈನಲ್‌ನಲ್ಲಿ ಸೋತ ಭಾರತ
2023ರಲ್ಲಿ ವಿರಾಟ್ ಕೊಹ್ಲಿ ಅದ್ಬುತವಾಗಿ ಬ್ಯಾಟಿಂಗ್ ನಡೆಸಿದ್ದಾರೆ. ಐಸಿಸಿ ಪ್ರಮುಖ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ತಮ್ಮ ಬ್ಯಾಟಿಂಗ್ ಮೂಲಕ ನೆರವಾಗಿದ್ದಾರೆ. ಫೈನಲ್ ಪಂದ್ಯದಲ್ಲಿಯೂ ಅರ್ಧ ಶತಕದ ಕೊಡುಗೆಯನ್ನು ನೀಡಿದ್ದರು. ಆದರೆ ವಿಶ್ವಕಪ್ ಗೆಲ್ಲಿಸಿಕೊಂಡು ಬರುವುದಕ್ಕೆ ವಿರಾಟ್ ಕೊಹ್ಲಿ ಅವರಿಂದ ಸಾಧ್ಯವಾಗಲೇ ಇಲ್ಲ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ೬ನೇ ಬಾರಿಗೆ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದೆ. ಟಾಸ್ ಗೆದ್ದ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡು ಭಾರತವನ್ನು ಬ್ಯಾಟಿಂಗ್‌ಗೆ ಇಳಿಸಿದ್ದರು.
ಇದನ್ನೂ ಓದಿ : ರೋಹಿತ್ ಶರ್ಮಾಗೆ ಕೊನೆಯ ಐಸಿಸಿ ಸರಣಿ ಆಗುತ್ತಾ ವಿಶ್ವಕಪ್ ಫೈನಲ್ ? ನಿವೃತ್ತಿ ಪಡೆಯುತ್ತಾರಾ ರೋಹಿತ್ ಶರ್ಮಾ
ಆದರೆ ಭಾರತ ತಂಡ ಲೆಕ್ಕಾಚಾರ ತೆಲೆಕೆಳಗಾಗಿತ್ತು. ಅಹಮದಾಬಾದ್ ಪಿಚ್‌ನಲ್ಲಿ ಭಾರತ ತಂಡದ ಆಟಗಾರರು ರನ್ ಗಳಿಸುವುದಕ್ಕೆ ಪರದಾಟ ನಡೆಸಿದ್ದಾರೆ. ಆಸ್ಟ್ರೇಲಿಯಾ ತಂಡದ ದಾಳಿಗೆ ತತ್ತರಿಸಿದ ಭಾರತ ತಂಡವು 240ಕ್ಕೆ ಆಲೌಟ್ ಆಗಿತ್ತು. ಕೆಎಲ್ ರಾಹುಲ್ 66 (107), ವಿರಾಟ್ ಕೊಹ್ಲಿ 54 (63) ಅರ್ಧ ಶತಕ ಬಾರಿಸಿದ್ದಾರೆ. ಮಿಚೆಲ್ ಸ್ಟಾರ್ಕ್ 10 ಓವರ್‌ಗಳಲ್ಲಿ 55 ರನ್ ನೀಡಿ 3 ವಿಕೆಟ್ ಪಡೆದುಕೊಂಡಿದ್ದಾರೆ.
Virat Kohli and Rohit Sharma moved up to second and fourth among the all-time top World Cup run-scorers 🔥 #CWC23 pic.twitter.com/SYbnbRWedh
— ESPNcricinfo (@ESPNcricinfo) November 20, 2023
ಆಸ್ಟ್ರೇಲಿಯ ತಂಡಕ್ಕೆ ಭಾರತೀಯ ಬೌಲರ್‌ಗಳಾದ ಜಸ್ಪ್ರಿತ್ ಬೂಮ್ರಾ ಹಾಗೂ ಮೊಹಮ್ಮದ್ ಸೆಮಿ ಆರಂಭಿಕ ಆಘಾತ ನೀಡಿದ್ರು. ಪವರ್ ಪ್ಲೇನಲ್ಲೇ ಆಸ್ಟ್ರೇಲಿಯಾ ತಂಡ 47/3ಕ್ಕೆ ಕುಸಿತ ಕಂಡಿತ್ತು. ಆದರೆ ಟ್ರಾವಿಸ್ ಹೆಡ್ (137) ಮತ್ತು ಮಾರ್ನಸ್ ಲ್ಯಾಬುಸ್‌ಚಾಗ್ನೆ (58) ಅವರ 192 ರನ್‌ಗಳ ಜೊತೆಯಾಟದ ಕೊಡುಗೆ ನೀಡಿದ್ದಾರೆ. ಆಕರ್ಷಕ ಶತಕಗಳಿಸಿದ್ದ ಟ್ರಾವಿಸ್ ಹೆಡ್ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದುಕೊಂಡಿದ್ದಾರೆ.
11 matches 3 centuries 765 runs: World Cup 2023 lossing India Virat Kohli sets world record