ಧರ್ಮಶಾಲಾ : ವಿಶ್ವಕಪ್‌ನ ಮೊದಲ ಐದು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದ ಆಸ್ಟ್ರೇಲಿಯಾದ ಸ್ಪೋಟಕ ಆಟಗಾರ ಟ್ರಾವೆಸ್ ಹೆಡ್ (Travis Head) ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ನ್ಯೂಜಿಲೆಂಡ್ ತಂಡದ ಮ್ಯಾಟ್ ಹೆನ್ರಿ ಅವರ ಎಸೆತದಲ್ಲಿ ಕೇವಲ 2 ಎಸೆತಗಳಲ್ಲಿ 21 ರನ್ ಸಿಡಿಸುವ ಮೂಲಕ ವಿಶ್ವದಾಖಲೆಯೊಂದನ್ನು ಬರೆದಿದ್ದಾರೆ.
ಧರ್ಮಶಾಲಾದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ (Australia vs Newzealand )ವಿರುದ್ದದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡದ ಪರ ಟ್ರಾವೆಸ್ ಹೆಡ್ ಹಾಗೂ ಡೇವಿಡ್ ವಾರ್ನರ್ ಕಣಕ್ಕೆ ಇಳಿದಿದ್ದರು. ಗಾಯದ ಸಮಸ್ಯೆಯ ಹಿನ್ನೆಲೆಯಲ್ಲಿ ಟ್ರಾವೆಸ್ ಹೆಡ್ ಮೊದಲ 5 ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದರು.

ಆದರೆ ಈ ಬಾರಿಯ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಕಣಕ್ಕೆ ಇಳಿದ ಟ್ರಾವೆಸ್ ಹೆಡ್ ಎಚ್ಚರಿಕೆಯ ಆಟ ಆಡಿದ್ದಾರೆ. ಅಲ್ಲದೇ ಕೇವಲ 67 ಎಸೆತಗಳಲ್ಲಿ 109 ರನ್ ಬಾರಿಸುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಇದರಲ್ಲಿ 7 ಸಿಕ್ಸರ್ ಹಾಗೂ 10 ಬೌಂಡರಿ ಒಳಗೊಂಡಿದೆ.
ಇದನ್ನೂ ಓದಿ : IPL Auction 2024 : ಡಿಸೆಂಬರ್ 19ಕ್ಕೆ ದುಬೈನಲ್ಲಿ ಐಪಿಎಲ್ 2024 ಹರಾಜು
ಮೊದಲ ಎರಡು ಓವರ್‌ಗಳಲ್ಲಿ ನಿಧಾನಗತಿಯ ಬ್ಯಾಟಿಂಗ್ ನಡೆಸಿದ್ದ ಟ್ರಾವೆಸ್ ಹೆಡ್ ಹಾಗೂ ಡೇವಿಡ್ ವಾರ್ನರ್ ಜೋಡಿ, ಮೂರನೇ ಓವರ್‌ನಿಂದ ಆರ್ಭಟಿಸೋದಕ್ಕೆ ಆರಂಭಿಸಿತ್ತು. ಟ್ರಾವಿಸ್ ಮ್ಯಾಟ್ ಹೆನ್ರಿ ಅವರ ಎಸೆತದಲ್ಲಿ ಆರ್ಭಟಿಸಿದ ಟ್ರಾವೆಡ್ ಹೆಸರ್ ಎರಡು ನೋಬಾಲ್‌ಗಳಲ್ಲಿ 2 ಸಿಕ್ಸರ್ ಸಿಡಿಸುವ ಮೂಲಕ ಕೇವಲ 2 ಎಸೆತಗಳಲ್ಲೇ 21 ರನ್ ಗಳಿಸಿದ್ದಾರೆ.
ಟ್ರಾವೆಸ್ ಹೆಡ್ ನ್ಯೂಜಿಲೆಂಡ್ ತಂಡದ ವಿರುದ್ದ ಆರ್ಭಟಿಸಿದ್ದಾರೆ. ಅಲ್ಲದೇ ಭರ್ಜರಿ ಶತಕ ಸಿಡಿಸುವ ಮೂಲಕ ವೇಗದ ಶತಕ ಸಿಡಿಸಿದ್ದಾರೆ. ಕಳೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಮ್ಯಾಕ್ಸ್‌ವೆಲ್ ಕೇವಲ 40 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವಕಪ್‌ನಲ್ಲಿ ಅತೀ ವೇಗದ ಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ : ಭಾರತ ಕ್ರಿಕೆಟ್ ತಂಡಕ್ಕೆ ಹೊಸ ಕೋಚ್ ? ವಿಶ್ವಕಪ್ ಫಲಿತಾಂಶದ ಮೇಲೆ ಬಿಸಿಸಿಐ ನಿರ್ಧರಿಸುತ್ತೆ ರಾಹುಲ್ ದ್ರಾವಿಡ್ ಭವಿಷ್ಯ
ಮ್ಯಾಕ್ಸ್‌ವೆಲ್ 40 ಎಸೆತಗಳಲ್ಲಿ ಶತಕ ಬಾರಿಸಿದ್ದರೆ, ಟ್ರಾವೆಸ್ ಹೆಡ್ 59 ಎಸೆತ, ಹೆನ್ರಿಚ್ ಕ್ಲಾಸೆನ್ (61 ಎಸೆತ), ರೋಹಿತ್ ಶರ್ಮಾ (63 ಎಸೆತ) ಸಿಡಿಸುವ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ಅತೀ ವೇಗದ ಆಟಗಾರರು ಅನ್ನೋ ಖ್ಯಾತಿಗೆ ಪಾತ್ರರಾಗಿದ್ದಾರೆ. ಅದ್ರಲ್ಲೂ ಈ ಬಾರಿಯ ವಿಶ್ವಕಪ್‌ನಲ್ಲಿ ಹಲವು ಆಟಗಾರರು ಭರ್ಜರಿ ಫಾರ್ಮ್‌ನಲ್ಲಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಅತೀ ವೇಗದ ಶತಕ ಸಿಡಿಸಿರುವ ದಾಖಲೆಯನ್ನು ದಕ್ಷಿಣ ಆಫ್ರಿಕಾದ ಆಟಗಾರ ಎಬಿ ಡಿವಿಲಿಯರ್ಸ್ ಅವರ ಹೆಸರಿನಲ್ಲಿದೆ. ಡಿವಿಲಿಯರ್ಸ್ ಕೇವಲ 31 ಎಸೆತಗಳಲ್ಲಿ 149 ರನ್ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿದ್ದರು. ನ್ಯೂಜಿಲೆಂಡ್ ತಂಡ ಕೋರೆ ಆಂಡರ್ಸನ್ 36 ಎಸೆತಗಳಲ್ಲಿ 131 ರನ್ ಬಾರಿಸಿದ್ರೆ, ಪಾಕಿಸ್ತಾನದ ಶಾಹೀದ್ ಆಫ್ರಿದಿ 37 ಎಸೆತಗಳಲ್ಲಿ 102 ರನ್ ಸಿಡಿಸುವ ಮೂಲಕ ದಾಖಲೆ ಬರೆದಿದ್ದರು.
ಇದನ್ನೂ ಓದಿ : 5 ಪಂದ್ಯದಲ್ಲಿ ಸತತ ಗೆಲುವು, ಅಂಕಪಟ್ಟಿಯಲ್ಲಿ ಅಗ್ರಸ್ಥಾನ : ಭಾರತಕ್ಕೆ ಸುಲಭವಲ್ಲ ವಿಶ್ವಕಪ್ ಸೆಮಿಫೈನಲ್ ಹಾದಿ
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್ (ಡಬ್ಲ್ಯೂ), ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್ (ಸಿ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ನ್ಯೂಜಿಲೆಂಡ್ (ಪ್ಲೇಯಿಂಗ್ XI): ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (w/c), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
2 balls 21 runs Traves Head set a world record in the World Cup 2023 Aus vs Nz