ಟೀಂ ಇಂಡಿಯಾಗೆ ಮತ್ತೆ ವಿರಾಟ್ ಕೊಹ್ಲಿ ನಾಯಕ

Virat Kohli Team India captain New Year 2024 : ಸಾಮಾಜಿಕ ಜಾಲತಾಣದಲ್ಲಿ ನಾಯಕ ರೋಹಿತ್‌ ಶರ್ಮಾ (Rohit Sharma) ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಕೊಹ್ಲಿ ನಾಯಕತ್ವದ ವಿಚಾರವೂ ಮುನ್ನೆಲೆಗೆ ಬಂದಿದೆ.

Virat Kohli Team India captain New Year 2024 : ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಇದೀಗ ಮತ್ತೆ ನಾಯಕತ್ವದ ವಿಚಾರದಲ್ಲಿ ಬಾರೀ ಸುದ್ದಿಯಲ್ಲಿದ್ದಾರೆ. ಭಾರತ ದಕ್ಷಿಣ ಆಫ್ರಿಕಾ (IND vs SA) ವಿರುದ್ದ ಹೀನಾಯ ಪ್ರದರ್ಶನ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ನಾಯಕ ರೋಹಿತ್‌ ಶರ್ಮಾ (Rohit Sharma) ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಕೊಹ್ಲಿ ನಾಯಕತ್ವದ ವಿಚಾರವೂ ಮುನ್ನೆಲೆಗೆ ಬಂದಿದೆ.

ಸೆಂಚುರಿಯನ್ ಟೆಸ್ಟ್‌ನಲ್ಲಿ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 32 ರನ್‌ಗಳಿಂದ ಸೋತಿದೆ. ಇದೀಗ ಉಭಯ ತಂಡಗಳ ನಡುವಿನ ಸರಣಿಯ ಎರಡನೇ ಮತ್ತು ಅಂತಿಮ ಪಂದ್ಯ ಜನವರಿ 3 ರಿಂದ 7 ರವರೆಗೆ ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ನಲ್ಲಿ ನಡೆಯಲಿದೆ.

Virat Kohli is the captain again for Team India
Image Credit to Original Source

ಎರಡನೇ ಪಂದ್ಯವನ್ನು ರೋಹಿತ್‌ ಶರ್ಮಾ ನೇತೃತ್ವದ ಭಾರತ ತಂಡ ಗೆಲುವು ದಾಖಲಿಸಿದ್ರೆ ಐತಿಹಾಸಿಕ ದಾಖಲೆಯಾಗಲಿದೆ. ಆದರೆ ರೋಹಿತ್‌ ಶರ್ಮಾ ನೇತೃತ್ವದ ತಂಡ ಕಳಪೆ ಪ್ರದರ್ಶನ ಇದೀಗ ನಾಯಕತ್ವದ ಮೇಲೆಯೇ ಬೆರಳು ತೋರಿಸುವಂತೆ ಮಾಡಿದೆ. ಅಲ್ಲದೇ ರೋಹಿತ್‌ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸುವ ಕುರಿತು ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.

ಏಕದಿನ ವಿಶ್ವಕಪ್‌ ಸೋಲಿನ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ದ ಏಕದಿನ ಸರಣಿಯನ್ನು ಕೆಎಲ್‌ ರಾಹುಲ್‌ ಮುನ್ನೆಡೆಸಿದ್ದರು. ಅಲ್ಲದೇ ಟಿ20 ಸರಣಿಯನ್ನು ಸೂರ್ಯಕುಮಾರ್‌ ಯಾದವ್‌ ನೇತೃತ್ವದಲ್ಲಿ ಭಾರತ ತಂಡ ಜಯಿಸಿತ್ತು. ಇದೀಗ ಟೆಸ್ಟ್‌ ಸರಣಿಯನ್ನು ರೋಹಿತ್‌ ಶರ್ಮಾ ಮುನ್ನೆಡೆಸುತ್ತಿದ್ದಾರೆ.

ಇದನ್ನೂ ಓದಿ : ಸಿಎಸ್‌ಕೆ ತಂಡಕ್ಕೆ ನಾಯಕ ಯಾರು ? ಧೋನಿ ವಿಚಾರದಲ್ಲಿ CSK CEO ಕೊಟ್ರು ಗುಡ್‌ನ್ಯೂಸ್‌

ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟ್‌ ತಂಡದ ಟೆಸ್ಟ್‌ ಪಂದ್ಯದ ಪ್ರದರ್ಶನವು ನಿರಾಸೆಯನ್ನು ಮೂಡಿಸಿದೆ. ಮೊದಲ ಟೆಸ್ಟ್‌ನ ಎರಡನೇ ದಿನ ವಿರಾಟ್‌ ಕೊಹ್ಲಿ ಆಟಗಾರರನ್ನು ಹುರಿದುಂಬಿಸುತ್ತಿದ್ದರು. ಇದರ ಬೆನ್ನಲ್ಲೇ ಇದೀಗ ವಿರಾಟ್‌ ಕೊಹ್ಲಿ ಟೀಂ ಇಂಡಿಯಾದ ನಾಯಕರಾಗ್ತಾರೆ ಅನ್ನೊ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಶುರುವಾಗಿದೆ.

Virat Kohli is the captain again for Team India
Image Credit to Original Source

ಟೀಂ ಇಂಡಿಯಾವನ್ನು ಮೈದಾನದಲ್ಲಿ ಹುರಿದುಂಬಿಸುತ್ತಿರುವ ವಿರಾಟ್‌ ಕೊಹ್ಲಿ ಅವರನ್ನು ನೋಡಿದ ಅಭಿಮಾನಿಗಳು ಮತ್ತೆ ವಿರಾಟ್ ಭಾರತ ತಂಡವನ್ನು ಮುನ್ನಡೆಸುವ ಸೂಚನೆ ಸಿಕ್ಕಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಸಾಮಾನ್ಯವಾಗಿ ನಾಯಕ ರೋಹಿತ್ ಶರ್ಮಾ ತಂಡವನ್ನು ಹುರಿದುಂಬಿಸಲು ಮಾತನಾಡುತ್ತಾರೆ. ಆದರೆ ಕೊಹ್ಲಿ ಈ ಕಾರ್ಯವನ್ನು ಮಾಡಿದ್ದಾರೆ.

ಇದನ್ನೂ ಓದಿ :  ಐಪಿಎಲ್ 2024 : ಹಾರ್ದಿಕ್‌ ಪಾಂಡ್ಯ ಔಟ್‌ : ಮುಂಬೈ ಇಂಡಿಯನ್ಸ್‌ಗೆ ರೋಹಿತ್‌ ಶರ್ಮಾ ನಾಯಕ

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಅತ್ಯಂತ ಯಶಸ್ವಿ ನಾಯಕ. ಅವರ ಅವಧಿಯಲ್ಲಿ ಭಾರತ ದೇಶ ವಿದೇಶಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಇತಿಹಾಸ ನಿರ್ಮಿಸಿದೆ. ಪ್ರಸ್ತುತ ದಕ್ಷಿಣ ಆಫ್ರಿಕಾದಲ್ಲಿ ಭಾರತ ಟೆಸ್ಟ್ ಮಾದರಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ. ಈ ಕಾರಣಕ್ಕೆ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಮತ್ತೊಬ್ಬ ಆಟಗಾರನಿಗೆ ನಾಯಕತ್ವ ನೀಡಲು ಬಿಸಿಸಿಐ ಪ್ಲಾನ್ ಮಾಡಿದೆ ಎನ್ನಲಾಗಿದೆ. ಹೀಗಿರುವಾಗ ವಿರಾಟ್ ಕೊಹ್ಲಿ ಮತ್ತೆ ನಾಯಕತ್ವದ ನಿರೀಕ್ಷೆಯಲ್ಲಿದ್ದಾರೆಯೇ ಎಂಬುದು ಸದ್ಯದ ಚರ್ಚೆ.

2024 New Year Virat Kohli is the captain again for Team India

Comments are closed.