ಕೊರೊನಾ ಬಿಗ್ ಶಾಕ್ : ಏಷ್ಯಾಕಪ್ ರದ್ದು

ಕೊಲಂಬೋ : ಶ್ರೀಲಂಕಾದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ 2021ನೇ ಸಾಲಿನ ಏಷ್ಯಾಕಪ್ ರದ್ದುಗೊಳಿಸಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಖಚಿತ ಪಡಿಸಿದೆ.

ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಅಬ್ಬರದ ಹಿನ್ನೆಲೆಯಲ್ಲಿ ಈಗಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್, ಪಾಕಿಸ್ತಾನ ಪ್ರೀಮಿಯರ್ ಲೀಗ್ ಪಂದ್ಯಾವಳಿಗಳು ರದ್ದಾಗಿವೆ. ಅದ್ರಲ್ಲೂ ಶ್ರೀಲಂಕಾದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ ತಿಂಗಳಿನಲ್ಲಿ ಪಂದ್ಯಾವಳಿ ಆಯೋಜನೆ ಮಾಡುವುದು ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ 2021 ರ ಏಷ್ಯಾಕಪ್ ಆವೃತ್ತಿಯನ್ನು ರದ್ದುಪಡಿಸಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮುಖ್ಯ ಕಾರ್ಯನಿರ್ವಾಹಕ ಆಶ್ಲೇ ಡಿ ಸಿಲ್ವಾ ಖಚಿತಪಡಿಸಿದ್ದಾರೆ.

ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಮಲೇಷ್ಯಾ ತಂಡಗಳು ಏಷ್ಯಾ ಕಪ್ ನಲ್ಲಿ ಪಾಲ್ಗೊಳ್ಳಬೇಕಾಗಿದೆ. ಆದರೆ ಪ್ರಸಕ್ತ ಪರಿಸ್ಥಿತಿಯಲ್ಲಿ ಪಂದ್ಯಾವಳಿ ಆಯೋಜನೆ ಕಷ್ಟಸಾಧ್ಯ, ಜೊತೆಗೆ ಹಲವು ರಾಷ್ಟ್ರಗಳು ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ನಿಷೇಧ ಹೇರಿವೆ.

ಮುಂದಿನ ಎರಡು ವರ್ಷಗಳವರೆಗೆ ಹಲವಾರು ಅಂತರರಾಷ್ಟ್ರೀಯ ತಂಡಗಳು ಈಗಾಗಲೇ ಹಲವು ಪಂದ್ಯಾವಳಿಗಳ ವೇಳಾಪಟ್ಟಿ ಫಿಕ್ಸ್ ಆಗಿದೆ. ಹೀಗಾಗಿ 2023 ರ ಐಸಿಸಿ ವಿಶ್ವಕಪ್ ನಂತರ ಏಷ್ಯಾಕಪ್ 2021 ಅನ್ನು ಹಿಂದಕ್ಕೆ ಹಾಕಬೇಕಾಗುತ್ತದೆ ಎಂದು ಶ್ರೀಲಂಕಾ ಕ್ರಿಕೆಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತಿಪಾದಿಸಿದ್ದಾರೆ.

Comments are closed.