Virat Kohli Babar Azam : ಏಷ್ಯಾ ಕಪ್ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ನಾಯಕನನ್ನು ಭೇಟಿ ಮಾಡಿದ ವಿರಾಟ್ ಕೊಹ್ಲಿ

ದುಬೈ: (Virat Kohli Babar Azam) ಇಡೀ ಕ್ರಿಕೆಟ್ ಜಗತ್ತೇ ಜಾತಕ ಪಕ್ಷಿಯಂತೆ ಕಾಯುತ್ತಿರುವ ಭಾರತ Vs ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕಿನ್ನು ಮೂರು ದಿನಗಳಷ್ಟೇ ಬಾಕಿ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಏಷ್ಯಾ ಕಪ್ ಟೂರ್ನಿಯಲ್ಲಿ (Asia Cup 2022) ಭಾನುವಾರ ಮುಖಾಮುಖಿ ಯಾಗಲಿವೆ. ಈ ಮೆಗಾ ಫೈಟನ್ನು ಕ್ರಿಕೆಟ್ ಪ್ರಿಯರು ಕಾತರದಿಂದ ಎದುರು ನೋಡುತ್ತಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ತಂಡಗಳ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಮತ್ತು ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ (Babar Azam) ಪರಸ್ಪರ ಭೇಟಿಯಾಗಿದ್ದಾರೆ. ಕೊಹ್ಲಿ-ಬಾಬರ್ ಭೇಟಿಯ ವೀಡಿಯೊವನ್ನು ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ. ಇದೇ ವೇಳೆ ಟೀಮ್ ಇಂಡಿಯಾ ಆಟಗಾರರು ಅಫ್ಘಾನಿಸ್ತಾನ ಆಟಗಾರರನ್ನೂ ಭೇಟಿಯಾಗಿದ್ದಾರೆ.

ಬುಧವಾರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಭ್ಯಾಸ ನಡೆಸಿದವು. ಈ ವೇಳೆ ವಿರಾಟ್ ಕೊಹ್ಲಿ ಮತ್ತು ಬಾಬರ್ ಭೇಟಿ ನಡೆದಿದೆ. ಪಾಕ್ ನಾಯಕ ಬಾಬರ್ ಅಜಮ್ ಕೊಹ್ಲಿ ಜೊತೆ ಒಂದಷ್ಟು ಹೊತ್ತು ಮಾತುಕತೆ ನಡೆಸಿದ್ದಾರೆ. ಕೊಹ್ಲಿ-ಬಾಬರ್ ಭೇಟಿಯ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸದ್ಯ ಕ್ರಿಕೆಟ್ ಜಗತ್ತಿನ ಟಾಪ್ ಬ್ಯಾಟರ್’ಗಳಲ್ಲಿ ಒಬ್ಬರಾಗಿರುವ ಬಾಬರ್ ಅಜಮ್, ವಿರಾಟ್ ಕೊಹ್ಲಿ ಅವರ ದೊಡ್ಡ ಅಭಿಮಾನಿ. ಮತ್ತೊಂದ್ಕಡೆ ಬ್ಯಾಟಿಂಗ್ ಫಾರ್ಮ್ ಕಳೆದು ಕೊಂಡಿರುವ ವಿರಾಟ್ ಕೊಹ್ಲಿ ಏಷ್ಯಾ ಕಪ್ ಟೂರ್ನಿಯಲ್ಲಿ ಫಾರ್ಮ್ ಕಂಡುಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಏಷ್ಯಾ ಕಪ್ ಪಂದ್ಯ ಇದೇ ಭಾನುವಾರ (ಆಗಸ್ಟ್ 28) ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಮೇಲೆ ಎಲ್ಲರ ಗಮನ ನೆಟ್ಟಿದೆ. 2019ರ ನವೆಂಬರ್’ನಲ್ಲಿ ಬಾಂಗ್ಲಾದೇಶ ವಿರುದ್ಧ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ ನಂತರ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ ಶತಕ ಗಳಿಸಿಲ್ಲ. ಕಳೆದ ಒಂದು ಸಾವಿರ ದಿನಗಳಿಂದ ವಿರಾಟ್ ಕೊಹ್ಲಿ ಶತಕದ ಬರ ಎದುರಿಸುತ್ತಿದ್ದಾರೆ.

ಇದನ್ನೂ ಓದಿ : India A Squad: ಹುಬ್ಬಳ್ಳಿಯಲ್ಲಿ ಭಾರತ ‘ಎ‘ Vs ನ್ಯೂಜಿಲೆಂಡ್ ‘ಎ‘ ಟೆಸ್ಟ್ ಮ್ಯಾಚ್; ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಸ್ಥಾನ

ಇದನ್ನೂ ಓದಿ : VVS Laxman Head Coach: ಏಷ್ಯಾ ಕಪ್ 2022: ದ್ರಾವಿಡ್‌ಗೆ ಕೋವಿಡ್; ಭಾರತ ತಂಡಕ್ಕೆ ವಿವಿಎಸ್ ಲಕ್ಷ್ಮಣ್ ಕೋಚ್

Asia cup 2022 Ind vs Pak Virat Kohli meet Babar Azam

Comments are closed.