India Vs Pakistan : ಭಾರತ Vs ಪಾಕಿಸ್ತಾನ 3 ಪಂದ್ಯ.. ಕ್ರಿಕೆಟ್ ಪ್ರಿಯರಿಗೆ ಡಬಲ್ ಧಮಾಕಾ ಪಕ್ಕಾ

ದುಬೈ: ಇಡೀ ಕ್ರಿಕೆಟ್ ಜಗತ್ತಿನ ಕಣ್ಣೀಗ ಏಷ್ಯಾಕಪ್ ಟಿ20 ಟೂರ್ನಿಯತ್ತ (Asia Cup 2022) ನೆಟ್ಟಿದೆ. ಕಾರಣ ಭಾರತ ಮತ್ತು ಪಾಕಿಸ್ತಾನ ತಂಡಗಳ (India Vs Pakistan) ನಡುವಿನ ಪಂದ್ಯದ ಬಗ್ಗೆ ಎದ್ದಿರುವ ಸಂಚಲನ. ಆಗಸ್ಟ್ 28ರಂದು ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಭಾರತ ಮತ್ತು ಪಾಕಿಸ್ತಾನ ತಂಡಗಳು ಏಷ್ಯಾ ಕಪ್ ಟೂರ್ನಿಯಲ್ಲಿ 3 ಬಾರಿ ಮುಖಾಮುಖಿಯಾಗುವ ಸಾಧ್ಯತೆಯಿದೆ. ಲೀಗ್ ಹಾಗೂ ಸೂಪರ್-4 ಹಂತಗಳು ಎರಡು ಬಾರಿ ಭಾರತ Vs ಪಾಕಿಸ್ತಾನ ಮುಖಾಮುಖಿ ಖಚಿತ. ಎರಡೂ ತಂಡಗಳು ಫೈನಲ್ ಪ್ರವೇಶಿಸಿದರೆ, ಸೆಪ್ಟೆಂಬರ್ 11ರಂದು ದುಬೈ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಟೂರ್ನಿಯಲ್ಲಿ 3ನೇ ಬಾರಿ ಮುಖಾಮುಖಿಯಾಗಲಿವೆ.

ಸಾಂಪ್ರಾದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಏಷ್ಯಾ ಕಪ್ ಟೂರ್ನಿಯಲ್ಲಿ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿವೆ. ಪ್ರತೀ ತಂಡಗಳು ಗ್ರೂಪ್ ಹಂತದಲ್ಲಿ ತಲಾ ಒಂದು ಬಾರಿ ಮುಖಾಮುಖಿಯಾಗಲಿವೆ. ಅಗ್ರ ಎರಡು ತಂಡಗಳು ಸೂಪರ್-4 ಹಂತಕ್ಕೆ ಪ್ರವೇಶ ಪಡೆಯಲಿದ್ದು, ಸೂಪರ್-4 ಹಂತದಲ್ಲಿ ಎಲ್ಲಾ ನಾಲ್ಕು ತಂಡಗಳು ಪ್ರತೀ ತಂಡದ ವಿರುದ್ಧ ಆಡಲಿವೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್-4 ಹಂತ ಪ್ರವೇಶಿಸುವುದು ಖಚಿತವಾಗಿರುವ ಕಾರಣ, ಸೂಪರ್-4ನಲ್ಲೂ ಪರಸ್ಪರ ಸೆಣಸಾಗಲಿವೆ. ಸೂಪರ್-4ನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಫೈನಲ್ ಪ್ರವೇಶಿಸಲಿವೆ.

ಯುಎಇ, ಕುವೈಟ್, ಸಿಂಗಾಪುರ್ ಮತ್ತು ಹಾಂಕಾಂಗ್ ತಂಡಗಳು ಅರ್ಹತಾ ಸುತ್ತಿನಲ್ಲಿ ಆಡಲಿದ್ದು, ಈ ಸುತ್ತಿನ ವಿಜೇತ ತಂಡ ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ಜೊತೆ ಪ್ರಧಾನ ಸುತ್ತಿನಲ್ಲಿ ಆಡಲಿದೆ. ಟೂರ್ನಿಯಲ್ಲಿ ಆಡಲಿರುವ ಆರು ತಂಡಗಳನ್ನು 2 ಗ್ರೂಪ್’ಗಳಾಗಿ ವಿಭಾಗಿಸಲಾಗಿದ್ದು, ಭಾರತ, ಪಾಕಿಸ್ತಾನ ಮತ್ತು ಅರ್ಹತಾ ಸುತ್ತಿನ ವಿಜೇತ ತಂಡ ಗ್ರೂಪ್ ‘ಎ’ನಲ್ಲಿ ಸ್ಥಾನ ಪಡೆದ್ರೆ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಗ್ರೂಪ್ ‘ಬಿ’ನಲ್ಲಿ ಕಾಣಿಸಿಕೊಂಡಿವೆ.

ಏಷ್ಯಾಕಪ್ ಟಿ20 (Asia Cup 2022) ಟೂರ್ನಿಯ ವೇಳಾಪಟ್ಟಿ

Group A
ಭಾರತ Vs ಪಾಕಿಸ್ತಾನ: 28 ಆಗಸ್ಟ್, ದುಬೈ
ಭಾರತ Vs ಕ್ವಾಲಿಫೈಯರ್ ಟೀಮ್: 31 ಆಗಸ್ಟ್, ದುಬೈ
ಪಾಕಿಸ್ತಾನ Vs ಕ್ವಾಲಿಫೈಯರ್ ಟೀಮ್: 02 ಸೆಪ್ಟೆಂಬರ್, ಶಾರ್ಜಾ

Group B
ಶ್ರೀಲಂಕಾ Vs ಅಫ್ಘಾನಿಸ್ತಾನ: 27 ಆಗಸ್ಟ್, ದುಬೈ
ಬಾಂಗ್ಲಾದೇಶ Vs ಅಫ್ಘಾನಿಸ್ತಾನ: 30 ಆಗಸ್ಟ್, ಶಾರ್ಜಾ
ಶ್ರೀಲಂಕಾ Vs ಬಾಂಗ್ಲಾದೇಶ: 01 ಸೆಪ್ಟೆಂಬರ್, ದುಬೈ

ಸೂಪರ್-4 ಹಂತ
B1 Vs B2: 03 ಸೆಪ್ಟೆಂಬರ್, ಶಾರ್ಜಾ
A1 Vs A2: 04 ಸೆಪ್ಟೆಂಬರ್, ದುಬೈ
A1 Vs B1: 06 ಸೆಪ್ಟೆಂಬರ್, ದುಬೈ
A2 Vs B2: 07 ಸೆಪ್ಟೆಂಬರ್, ದುಬೈ
A1 Vs B2: 08 ಸೆಪ್ಟೆಂಬರ್, ದುಬೈ
B1 Vs A2: 09 ಸೆಪ್ಟೆಂಬರ್, ದುಬೈ

ಫೈನಲ್: 11 ಸೆಪ್ಟೆಂಬರ್, ದುಬೈ

ಪಂದ್ಯಗಳ ಆರಂಭ: ರಾತ್ರಿ 7.30ಕ್ಕೆ (ಭಾರತೀಯ ಕಾಲಮಾನ)
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್’ವರ್ಕ್ (Star Sports network)
ಲೈವ್ ಸ್ಟ್ರೀಮಿಂಗ್: ಡಿಸ್ನಿ+ಹಾಟ್’ಸ್ಟಾರ್ (Disney + Hotstar)

Asia Cup 2022 India Vs Pakistan 3 Match

Comments are closed.