Asia Cup 2022 India Vs Sri Lanka: ಏಷ್ಯಾ ಕಪ್ ಸೂಪರ್-4: ಶ್ರೀಲಂಕಾ ವಿರುದ್ಧ ಗೆಲ್ಲಬೇಕಾದರೆ ಟೀಮ್ ಇಂಡಿಯಾದಲ್ಲಿ ಇದೊಂದು ಬದಲಾವಣೆ ಅನಿವಾರ್ಯ

ದುಬೈ: ಏಷ್ಯಾ ಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ ತಂಡಕ್ಕೆ (Asia Cup 2022 India Vs Sri Lanka) ಮಂಗಳವಾರ ಮಾಡು ಇಲ್ಲ ಮಡಿ ಪಂದ್ಯ. ತನ್ನ ಪಾಲಿಗೆ ಅತ್ಯಂತ ಮಹತ್ವದ್ದಾಗಿರುವ ಸೂಪರ್-4 ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಸೂಪರ್-4 ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋಲು ಕಂಡಿರುವ ಕಾರಣ ಭಾರತಕ್ಕೆ ಈ ಪಂದ್ಯ ಅತ್ಯಂತ ನಿರ್ಣಾಯಕ. ಫೈನಲ್ ಪ್ರವೇಶಿಸಬೇಕಾದರೆ ಟೀಮ್ ಇಂಡಿಯಾ ಶ್ರೀಲಂಕಾ ಹಾಗೂ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಗೆಲ್ಲಲೇಬೇಕು. ಶ್ರೀಲಂಕಾ ಈಗಾಗಲೇ ಅಫ್ಘಾನಿಸ್ತಾನ ವಿರುದ್ಧದ ಸೂಪರ್-4 ಪಂದ್ಯವನ್ನು ಗೆದ್ದಿದೆ.

ಶ್ರೀಲಂಕಾ ವಿರುದ್ಧ (India Vs Sri Lanka) ಭಾರತ ಗೆಲ್ಲಬೇಕಾದರೆ ತಂಡದಲ್ಲಿ ಕನಿಷ್ಠ ಒಂದು ಬದಲಾವಣೆಯಂತೂ ಅನಿವಾರ್ಯ. ಪಾಕಿಸ್ತಾನ ವಿರುದ್ಧ ಅತ್ಯಂತ ಬೇಜವಾಬ್ದಾರಿಯುತ ರೀತಿಯಲ್ಲಿ ಔಟಾಗಿದ್ದ ವಿಕೆಟ್ ಕೀಪರ್ ಕೀಪರ್ ಬ್ಯಾಟ್ಸ್’ಮನ್ ರಿಷಭ್ ಪಂತ್ ಬದಲು ಅನುಭವಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರನ್ನು ಆಡಿಸಿದರೆ ಉತ್ತಮ. ಫಿನಿಷರ್ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿರುವ ಡಿಕೆ, ಭಾರತದ ಗೆಲುವಿಗೆ ಕಾರಣರಾಗಬಲ್ಲರು. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಅವರನ್ನು ಆಡಿಸದ ಕಾರಣ ಭಾರತ ಫಿನಿಷರ್ ಕೊರತೆಯನ್ನು ಎದುರಿಸಿತ್ತು.

ಪಾಕಿಸ್ತಾನ ವಿರುದ್ಧ ಮಧ್ಯಮ ಕ್ರಮಾಂಕದಲ್ಲಿ ಎಡಗೈ ಬ್ಯಾಟ್ಸ್’ಮನ್ ಒಬ್ಬ ಬೇಕು ಎಂಬ ಕಾರಣಕ್ಕೆ ರಿಷಭ್ ಪಂತ್ ಅವರನ್ನು ಆಡಿಸಲಾಗಿತ್ತು. ಶ್ರೀಲಂಕಾ ವಿರುದ್ಧ ಪಂತ್ ಅವರನ್ನು ಹೊರಗಿಟ್ಟರೆ ಎಡಗೈ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್ ಅವರನ್ನು ಆಡಿಸಬಹುದು. ಆಗ ಆಫ್’ಸ್ಪಿನ್ ಆಲ್ರೌಂಡರ್ ದೀಪಕ್ ಹೂಡ ಆಡುವ ಬಳಗದಲ್ಲಿ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ. ಅಕ್ಷರ್ ಪಟೇಲ್ ಆಡುವುದರಿಂದ ಭಾರತದ 5ನೇ ಬೌಲರ್ ಕೊರತೆಯೂ ನೀಗಲಿದೆ.

ಶ್ರೀಲಂಕಾ ವಿರುದ್ಧದ (India Vs Sri Lanka) ಪಂದ್ಯಕ್ಕೆ ಭಾರತ ಸಂಭಾವ್ಯ ಪ್ಲೇಯಿಂಗ್ XI

ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್.

ಪಂದ್ಯ ಆರಂಭ: ರಾತ್ರಿ 7.30ಕ್ಕೆ
ಸ್ಥಳ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ, ದುಬೈ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್
ಲೈವ್ ಸ್ಟ್ರೀಮಿಂಗ್: ಡಿಸ್ನಿ+ಹಾಟ್’ಸ್ಟಾರ್

ಇದನ್ನೂ ಓದಿ : Kohli breaks Rohit’s Record: ರೋಹಿತ್ ಶರ್ಮಾ ವಿಶ್ವದಾಖಲೆಯನ್ನು ಪುಡಿಗಟ್ಟಿದ ಕಿಂಗ್ ಕೊಹ್ಲಿ

ಇದನ್ನೂ ಓದಿ : Rishabh Pant: ಜವಾಬ್ದಾರಿ ಮರೆತ ರಿಷಭ್ ಪಂತ್’ಗೆ ಹಿಗ್ಗಾಮುಗ್ಗ ಬೈದ ಕ್ಯಾಪ್ಟನ್ ರೋಹಿತ್ ಶರ್ಮಾ

Asia Cup 2022 India Vs Sri Lanka This change is inevitable in Team India if they want to win against Sri Lanka

Comments are closed.