ಬೆಂಗಳೂರು: ಏಷ್ಯಾ ಕಪ್ 2023 (Asia Cup 2023) ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಕರ್ನಾಟಕದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಕೆ.ಎಲ್ ರಾಹುಲ್ ಮತ್ತು ಮುಂಬೈಕರ್ ಶ್ರೇಯಸ್ ಅಯ್ಯರ್ ಭಾರತ ತಂಡಕ್ಕೆ ಮರಳಿದ್ದಾರೆ. ಹೈದರಾಬಾದ್’ನ ಎಡಗೈ ಬ್ಯಾಟ್ಸ್’ಮನ್ ತಿಲಕ್ ವರ್ಮಾ ಕೂಡ ಏಷ್ಯಾ ಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕರ್ನಾಟಕದ ಯುವ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಏಷ್ಯಾ ಕಪ್ ಟೂರ್ನಿ ಭಾರತ ತಂಡ ಹೀಗಿದೆ (Team India for Asia Cup 2023)
- ರೋಹಿತ್ ಶರ್ಮಾ (ನಾಯಕ)
- ಶುಭಮನ್ ಗಿಲ್
- ವಿರಾಟ್ ಕೊಹ್ಲಿ
- ಶ್ರೇಯಸ್ ಅಯ್ಯರ್
- ಕೆ.ಎಲ್ ರಾಹುಲ್
- ಹಾರ್ದಿಕ್ ಪಾಂಡ್ಯ
- ರವೀಂದ್ರ ಜಡೇಜ
- ಜಸ್ಪ್ರೀತ್ ಬುಮ್ರಾ
- ಕುಲ್ದೀಪ್ ಯಾದವ್
- ಮೊಹಮ್ಮದ್ ಸಿರಾಜ್
- ಮೊಹಮ್ಮದ್ ಶಮಿ
- ಇಶಾನ್ ಕಿಶನ್
- ಶಾರ್ದೂಲ್ ಠಾಕೂರ್
- ಅಕ್ಷರ್ ಪಟೇಲ್
- ಸೂರ್ಯಕುಮಾರ್ ಯಾದವ್
- ತಿಲಕ್ ವರ್ಮಾ
- ಪ್ರಸಿದ್ಧ್ ಕೃಷ್ಣ
ಏಷ್ಯಾ ಕಪ್ ಟೂರ್ನಿ ಆಗಸ್ಟ್ 31ರಂದು ಶ್ರೀಲಂಕಾದಲ್ಲಿ ಆರಂಭವಾಗಲಿದೆ. ಸೆಪ್ಟೆಂಬರ್ 2ರಂದು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿರುವ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಭಾರತ ತಂಡ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.
ಏಷ್ಯಾ ಕಪ್ 2023 ಟೂರ್ನಿಯ ಲೀಗ್ ಪಂದ್ಯಗಳ ವೇಳಾಪಟ್ಟಿ (Asia Cup 2023 schedule)
ಆಗಸ್ಟ್ 30: ಪಾಕಿಸ್ತಾನ Vs ನೇಪಾಳ (ಬೆಳಗ್ಗೆ 10ಕ್ಕೆ, ಮುಲ್ತಾನ್)
ಆಗಸ್ಟ್ 31: ಶ್ರೀಲಂಕಾ Vs ಬಾಂಗ್ಲಾದೇಶ (ಬೆಳಗ್ಗೆ 9.30ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 2: ಭಾರತ Vs ಪಾಕಿಸ್ತಾನ (ಬೆಳಗ್ಗೆ 9.30ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 3: ಅಫ್ಘಾನಿಸ್ತಾನ Vs ಬಾಂಗ್ಲಾದೇಶ (ಬೆಳಗ್ಗೆ 9.30ಕ್ಕೆ, ಲಾಹೋರ್)
ಸೆಪ್ಟೆಂಬರ್ 4: ಭಾರತ Vs ನೇಪಾಳ (ಬೆಳಗ್ಗೆ 9.30ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 5: ಅಫ್ಘಾನಿಸ್ತಾನ Vs ಶ್ರೀಲಂಕಾ (ಬೆಳಗ್ಗೆ 9.30ಕ್ಕೆ, ಲಾಹೋರ್)
ಏಷ್ಯಾ ಕಪ್ ಟೂರ್ನಿಗೆ ಪೂರ್ವಭಾವಿಯಾಗಿ ಭಾರತ ತಂಡ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಆಗಸ್ಟ್ 23ರಿಂದ ಅಭ್ಯಾಸ ಶಿಬಿರ ನಡೆಸಲಿದೆ. ಏಷ್ಯಾ ಕಪ್’ನಲ್ಲಿ ಆಡಲಿರುವ ಎಲ್ಲಾ ಆಟಗಾರರು, ತಂಡದ ಕೋಚ್, ಸಹಾಯಕ ಸಿಬ್ಬಂದಿ ಸೇರಿದಂತೆ ಇಡೀ ಟೀಮ್ ಇಂಡಿಯಾವೇ ಒಂದು ವಾರ ಬೆಂಗಳೂರಲ್ಲಿ ಟ್ರೈನಿಂಗ್ ಕ್ಯಾಂಪ್’ನಲ್ಲಿ ಭಾಗಿಯಾಗಲಿದೆ.
ಇದನ್ನೂ ಓದಿ : Deepak Devadiga Alevooru : ಕರ್ನಾಟಕಕ್ಕೆ ಮತ್ತೊಬ್ಬ ಮಿಸ್ಟರಿ ಸ್ಪಿನ್‌ರ್ : ಮಹಾರಾಜ ಟ್ರೋಫಿಯಲ್ಲಿ ಮಿಂಚಿದ ದೀಪಕ್ ದೇವಾಡಿಗ ಅಲೆವೂರು
ಇದನ್ನೂ ಓದಿ : Asia Cup 2023: ಕೆ.ಎಲ್ ರಾಹುಲ್ ಕಂಪ್ಲೀಟ್ ಫಿಟ್, ಶ್ರೇಯಸ್ ಅಯ್ಯರ್ ಇನ್ನೂ ಡೌಟ್; ಇಲ್ಲಿದೆ ಸಂಭಾವ್ಯ ಭಾರತ ತಂಡ