ಭಾನುವಾರ, ಏಪ್ರಿಲ್ 27, 2025
HomeSportsCricketಏಷ್ಯಾ ಕಪ್ 2023: ಭಾರತ Vs ಪಾಕಿಸ್ತಾನ ಪಂದ್ಯ, ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ರೋಹಿತ್...

ಏಷ್ಯಾ ಕಪ್ 2023: ಭಾರತ Vs ಪಾಕಿಸ್ತಾನ ಪಂದ್ಯ, ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ರೋಹಿತ್ ಶರ್ಮಾ

- Advertisement -

ಕೊಲಂಬೋ : ಏಷ್ಯಾಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ (India vs Pakistan ) ವಿರುದ್ದ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ(Colombo Premadasa Stadium)ನಡೆಯುತ್ತಿರುವ ಪಂದ್ಯ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಮೀಸಲು ದಿನವಾದ ಇಂದು ಪಂದ್ಯ ಮತ್ತೆ ಪುನರಾರಂಭಗೊಳ್ಳಲಿದೆ. ಆದರೆ ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ (Rohit Sharma) ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ (Sachin Tendulkar) ಅವರ ದಾಖಲೆಯನ್ನು ಉಡೀಸ್‌ ಮಾಡಿದ್ದಾರೆ.

Asia Cup 2023 India Vs Pakistan Match Rohit Sharma Break Sachin Tendulkar Record
Image Credit To Original Source

ಭಾರತ-ಪಾಕಿಸ್ತಾನ ನಡುವಿನ ಪಂದ್ಯ 24.1 ಓವರ್‌ಗಳಲ್ಲಿ ಮಳೆಯಿಂದಾಗಿ ಸ್ಥಗಿತಗೊಂಡಿದೆ. ವಿರಾಟ್ ಕೊಹ್ಲಿ 16ನೇ ಎಸೆತಗಳಲ್ಲಿ 8 ರನ್ ಮತ್ತು ಕನ್ನಡಿಗ ಕೆಎಲ್ ರಾಹುಲ್ 28 ಎಸೆತಗಳಲ್ಲಿ 17 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಏಷ್ಯಾಕಪ್‌ನ ಸೂಪರ್-4 ಹಂತದ 3ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ರೋಹಿತ್‌ ಶರ್ಮಾ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

Asia Cup 2023 India Vs Pakistan Match Rohit Sharma Break Sachin Tendulkar Record
Image Credit To Original Source

ಕೊಲಂಬೊದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಬ್ಯಾಟಿಂಗ್ ನಡೆಸಿತು. ಟೀಂ ಇಂಡಿಯಾದ ಆರಂಭಿಕ ಆಟಗಾರರಾದ ರೋಹಿತ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಶತಕದ ಜೊತೆಯಾಟ ಆಡಿದ್ದಾರೆ. ಭಾರತ 2 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿದೆ. ಏಷ್ಯಾಕಪ್‌ನ ಲೀಗ್‌ ಹಂತದ ಪಂದ್ಯದಲ್ಲಿ ನಿರಾಸೆ ಮೂಡಿಸಿದ್ದ ರೋಹಿತ್‌ ಶರ್ಮಾ ಸೂಪರ್‌ 4 ಹಂತದ ಪಂದ್ಯದಲ್ಲಿ ಮಿಂಚಿದ್ದಾರೆ.

ಇದನ್ನೂ ಓದಿ : ಏಷ್ಯಾಕಪ್‌ 2023 : ಪಾಕಿಸ್ತಾನ ವಿರುದ್ದ ಪಂದ್ಯದಲ್ಲಿ ಕನ್ನಡಿಗ ಕೆಎಲ್‌ ರಾಹುಲ್‌ಗೆ ಅವಕಾಶ ನೀಡಬೇಡಿ : ರಾಬಿನ್‌ ಉತ್ತಪ್ಪ

ರೋಹಿತ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಮೊದಲ ವಿಕೆಟ್‌ಗೆ 16.4 ಓವರ್‌ಗಳಲ್ಲಿ 121 ರನ್‌ಗಳ ಶತಕದ ಜೊತೆಯಾಟ ನಡೆಸಿದರು. ಈ ರೋಚಕ ಪಂದ್ಯದಲ್ಲಿ ರೋಹಿತ್ ಶರ್ಮಾ 49 ಎಸೆತಗಳಲ್ಲಿ 114.28 ಸ್ಟ್ರೈಕ್ ರೇಟ್‌ನಲ್ಲಿ 56 ರನ್ ಮತ್ತು ಗಿಲ್ 52 ಎಸೆತಗಳಲ್ಲಿ 111.53 ಸ್ಟ್ರೈಕ್ ರೇಟ್‌ನಲ್ಲಿ 58 ರನ್ ಕೊಡುಗೆ ನೀಡಿದರು.

Asia Cup 2023 India Vs Pakistan Match Rohit Sharma Break Sachin Tendulkar Record
Image Credit To Original Source

ಸಚಿನ್‌ ದಾಖಲೆ ಉಡೀಸ್‌ ಮಾಡಿದ ರೋಹಿತ್‌ ಶರ್ಮಾ

ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಏಷ್ಯಾಕಪ್ ಸೂಪರ್-4 ಹಂತದ 3ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭರ್ಜರಿ ಅರ್ಧ ಶತಕ ಬಾರಿಸುವ ಮೂಲಕ ತಂಡಕ್ಕೆ ನೆರವಾಗುವುದರ ಜೊತೆಗೆ ಹೊಸ ದಾಖಲೆಯನ್ನು ಬರೆದಿದ್ದರು.

ಇದನ್ನೂ ಓದಿ : ICC World Cup 2023: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ, ಭಾರತಕ್ಕೆ ಯಾರು ಎದುರಾಳಿಗಳು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಏಷ್ಯಾ ಕಪ್‌ನಲ್ಲಿ ಇದುವರೆಗೆ ಪಾಕಿಸ್ತಾನದ ವಿರುದ್ದ ಅತೀ ಹೆಚ್ಚು ಅರ್ಧಶತಕ ಬಾರಿಸಿದ ದಾಖಲೆಯನ್ನು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಅವರ ಹೆಸರಲ್ಲಿತ್ತು. ಆದರೆ ರೋಹಿತ್‌ ಶರ್ಮಾ ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ 49 ಎಸೆತಗಳಲ್ಲಿ 4 ಬೃಹತ್ ಸಿಕ್ಸರ್ ಹಾಗೂ 6 ಬೌಂಡರಿಗಳ ನೆರವಿನಿಂದ 56 ರನ್ ಗಳಿಸಿದರು. ಈ ಮೂಲಕ ಹಿಟ್‌ಮ್ಯಾನ್ ರೋಹಿತ್‌ ಶರ್ಮಾ 2023 ರ ಏಷ್ಯಾಕಪ್‌ನಲ್ಲಿ ಭಾರತೀಯರಾಗಿ ಅತ್ಯಧಿಕ 50+ ದಾಖಲೆಯನ್ನು ತನ್ನ ಹೆಸರಿಗೆ ಬರೆಯಿಸಿಕೊಂಡಿದ್ದಾರೆ.

Asia Cup 2023 India Vs Pakistan Match Rohit Sharma Break Sachin Tendulkar Record
Image Credit To Original Source

ಈ ಹಿಂದೆ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಏಷ್ಯಾಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ಸಚಿನ್ ಐದನೇ ಬಾರಿಗೆ 50+ ರನ್ ಗಳಿಸಿದ್ದರು. ಪಾಕಿಸ್ತಾನದ ವಿರುದ್ಧ 6ನೇ ಬಾರಿಗೆ 50+ ರನ್ ಗಳಿಸುವ ಮೂಲಕ ಏಷ್ಯಾಕಪ್‌ನಲ್ಲಿ ತಂಡವೊಂದರ ವಿರುದ್ಧ ಐವತ್ತಕ್ಕೂ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಈಗ ಹೊಂದಿದ್ದಾರೆ.

ಇದನ್ನೂ ಓದಿ : Heath Streak Passes Away : ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ಇನ್ನಿಲ್ಲ

ಅಲ್ಲದೇ ಏಷ್ಯಾಕಪ್‌ನಲ್ಲಿ ಹೆಚ್ಚು ಬಾರಿ 50+ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ರೋಹಿತ್ ಶರ್ಮಾ ಸರಿಗಟ್ಟಿದ್ದಾರೆ. ಏಷ್ಯಾಕಪ್ ನಲ್ಲಿ ಸಚಿನ್ ತೆಂಡೂಲ್ಕರ್ ಒಟ್ಟು 9 ಬಾರಿ ಈ ಸಾಧನೆ ಮಾಡಿದ್ದರು. ಪಾಕಿಸ್ತಾನದ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ರೋಹಿತ್ ಶರ್ಮಾ ಏಷ್ಯಾಕಪ್‌ನಲ್ಲಿ 50+ 9 ಬಾರಿ ಸ್ಕೋರ್ ಮಾಡಿದ ದಾಖಲೆಯನ್ನೂ ಮಾಡಿದ್ದಾರೆ. ಈ ಮೂಲಕ ಸಚಿನ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ. ಶ್ರೀಲಂಕಾದ ಮಾಜಿ ಆಟಗಾರ ಕುಮಾರ ಸಂಗಕ್ಕಾರ ಏಷ್ಯಾಕಪ್‌ನಲ್ಲಿ 12 50+ ರನ್‌ಗಳ ದಾಖಲೆ ಹೊಂದಿದ್ದಾರೆ.

Asia Cup 2023 India Vs Pakistan Match Rohit Sharma Break Sachin Tendulkar Record

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular