Asia Cup 2023: ಏಷ್ಯಾ ಕಪ್”ಗೆ ಬಲಿಷ್ಠ ತಂಡವನ್ನೇ ಕಣಕ್ಕಿಳಿಸಿದ ಪಾಕಿಸ್ತಾನ, ತಂಡದಲ್ಲಿ ಯಾರಿಗೆಲ್ಲಾ ಸ್ಥಾನ?

ಲಾಹೋರ್: ಆಗಸ್ಟ್ 31ರಂದು ಆರಂಭವಾಗಲಿರುವ ಏಷ್ಯಾ ಕಪ್ ಏಕದಿನ ಟೂರ್ನಿಗೆ (Asia Cup 2023) ಪಾಕಿಸ್ತಾನ ತಂಡ ಬಲಿಷ್ಠ ತಂಡವನ್ನೇ ಕಣಕ್ಕಿಳಿಸಿದೆ. ಪಾಕಿಸ್ತಾನ ತಂಡದಲ್ಲಿ 18 ಮಂದಿ ಆಟಗಾರರಿಗೆ ಸ್ಥಾನ ನೀಡಲಾಗಿದ್ದು, ಎಡಗೈ ದಾಂಡಿಗ ಶಾನ್ ಮಸೂದ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಎಮರ್ಜಿಂಗ್ ಏಷ್ಯಾ ಕಪ್ ಫೈನಲ್’ನಲ್ಲಿ ಭಾರತ ವಿರುದ್ಧ ಅಮೋಘ ಶತಕ ಬಾರಿಸಿದ್ದ ತಯ್ಯಬ್ ತಾಹಿರ್ ಪಾಕಿಸ್ತಾನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಎಮರ್ಜಿಂಗ್ ಏಷ್ಯಾ ಕಪ್ ಫೈನಲ್’ನಲ್ಲಿ ತಯ್ಯಬ್ ತಾಹಿರ್ ಕೇವಲ 71 ಎಸೆತಗಳಲ್ಲಿ 108 ರನ್ ಸಿಡಿಸಿ ಪಾಕಿಸ್ತಾನ ತಂಡ ಚಾಂಪಿಯನ್ ಪಟ್ಟಕ್ಕೇರಲು ಕಾರಣರಾಗಿದ್ದರು. ಏಷ್ಯಾ ಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ, ಭಾರತ ಮತ್ತು ನೇಪಾಳ ಜೊತೆ ಎ ಗ್ರೂಪ್’ನಲ್ಲಿ ಸ್ಥಾನ ಪಡೆದಿದೆ. ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಬಿ ಗ್ರೂಪ್’ನಲ್ಲಿವೆ.

ಏಷ್ಯಾ ಕಪ್ ಟೂರ್ನಿಗೆ ಪಾಕಿಸ್ತಾನ ತಂಡ ಹೀಗಿದೆ:
ಬಾಬರ್ ಅಜಮ್ (ನಾಯಕ), ಫಖಾರ್ ಜಮಾನ್, ಮೊಹಮ್ಮದ್ ರಿಜ್ವಾನ್, ಶದಾಬ್ ಖಾನ್, ಅಬ್ದುಲ್ಲಾ ಶಫೀಕ್, ಫಾಹೀಮ್ ಅಶ್ರಫ್, ಹ್ಯಾರಿಸ್ ರೌಫ್, ಇಫ್ತಿಕಾರ್ ಅಹ್ಮದ್, ಇಮಾಮ್ ಉಲ್ ಹಕ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ವಾಸಿಂ ಜ್ಯೂನಿಯರ್, ಸೌದ್ ಶಕೀಲ್, ನಸೀಮ್ ಶಾ, ಅಘಾ ಸಲ್ಮಾನ್, ಶಾಹೀನ್ ಅಫ್ರಿದಿ, ತಯ್ಯಬ್ ತಾಹಿರ್, ಉಸಾಮಾ ಮಿರ್, ಮೊಹಮ್ಮದ್ ನವಾಜ್. ಏಷ್ಯಾ ಕಪ್ ಏಕದಿನ ಟೂರ್ನಿ ಆಗಸ್ಟ್ 31ರಂದು ಆರಂಭವಾಗಲಿದ್ದು, ಪಂದ್ಯಗಳು ಶ್ರೀಲಂಕಾ ಹಾಗೂ ಪಾಕಿಸ್ತಾನದಲ್ಲಿ ನಡೆಯಲಿವೆ. ಭಾರತ ತಂಡ ತನ್ನ ಎಲ್ಲಾ ಲೀಗ್ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಇದನ್ನೂ ಓದಿ : Rohit Sharma Lamborghini Urus : ಲ್ಯಾಂಬೊರ್ಗಿನಿ ಉರ್ಸ್ ಕಾರ್‌ನಲ್ಲಿ ಧಾಮ್ ಧೂಮ್ ಎಂಟ್ರಿ ಕೊಟ್ಟ ರೋಹಿತ್ ಶರ್ಮಾ

ಏಷ್ಯಾ ಕಪ್ 2023 ಟೂರ್ನಿಯ ಲೀಗ್ ಪಂದ್ಯಗಳ ವೇಳಾಪಟ್ಟಿ (Asia Cup 2023 schedule)
ಆಗಸ್ಟ್ 30: ಪಾಕಿಸ್ತಾನ Vs ನೇಪಾಳ (ಬೆಳಗ್ಗೆ 10ಕ್ಕೆ, ಮುಲ್ತಾನ್)
ಆಗಸ್ಟ್ 31: ಶ್ರೀಲಂಕಾ Vs ಬಾಂಗ್ಲಾದೇಶ (ಬೆಳಗ್ಗೆ 9.30ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 2: ಭಾರತ Vs ಪಾಕಿಸ್ತಾನ (ಬೆಳಗ್ಗೆ 9.30ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 3: ಅಫ್ಘಾನಿಸ್ತಾನ Vs ಬಾಂಗ್ಲಾದೇಶ (ಬೆಳಗ್ಗೆ 9.30ಕ್ಕೆ, ಲಾಹೋರ್)
ಸೆಪ್ಟೆಂಬರ್ 4: ಭಾರತ Vs ನೇಪಾಳ (ಬೆಳಗ್ಗೆ 9.30ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 5: ಅಫ್ಘಾನಿಸ್ತಾನ Vs ಶ್ರೀಲಂಕಾ (ಬೆಳಗ್ಗೆ 9.30ಕ್ಕೆ, ಲಾಹೋರ್)

Asia Cup 2023: Pakistan has fielded a strong team for the Asia Cup, who has a place in the team?

Comments are closed.