Asia Cup 2023: ಸ್ಟಾರ್ ಸ್ಪೋರ್ಟ್ಸ್ ಪ್ರೋಮೋದಲ್ಲಿ ಕೊಹ್ಲಿಯೇ ಕಿಂಗ್, ಕ್ಯಾಪ್ಟನ್ ರೋಹಿತ್ ಶರ್ಮಾ ಎಲ್ಲಿ?

ಬೆಂಗಳೂರು: ಬಹು ನಿರೀಕ್ಷಿತ ಏಷ್ಯಾ ಕಪ್ ಏಕದಿನ ಕ್ರಿಕೆಟ್ ಟೂರ್ನಿಗೆ ಇನ್ನು 22 ದಿನಗಳಷ್ಟೇ ಬಾಕಿ. ಅದರಲ್ಲೂ ಏಷ್ಯಾ ಕಪ್ ಟೂರ್ನಿಯಲ್ಲಿ (Asia Cup 2023) ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಇಡೀ ಕ್ರಿಕೆಟ್ ಜಗತ್ತೇ ಚಾತಕ ಪಕ್ಷಿಯಂತೆ ಎದುರು ನೋಡುತ್ತಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಹೈವೋಲ್ಟೇಜ್ ಪಂದ್ಯ ಸೆಪ್ಟೆಂಬರ್ 2ರಂದು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿದೆ. ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ತಂಡಗಳು ಭಾಗವಹಿಸಲಿವೆ. ಏಷ್ಯಾ ಕಪ್ ಟೂರ್ನಿಯನ್ನು ಲೈವ್ ಟೆಲಿಕಾಸ್ಟ್ ಮಾಡಲಿರುವ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್, ಭಾರತ Vs ಪಾಕಿಸ್ತಾನ ಪಂದ್ಯದ ವಿಶೇಷ ಪ್ರೋಮೋವನ್ನು ರಿಲೀಸ್ ಮಾಡಿದೆ.

ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ರಿಲೀಸ್ ಮಾಡಿರುವ ಇಡೀ ಪ್ರೋಮೋದಲ್ಲಿ ರಾರಾಜಿಸಿರುವುದು ಟೀಮ್ ಇಂಡಿಯಾ ಮಾಜಿ ನಾಯಕ, “ಕಿಂಗ್” ಖ್ಯಾತಿಯ ವಿರಾಟ್ ಕೊಹ್ಲಿ. ಇಂಟ್ರೆಸ್ಟಿಂಗ್ ವಿಚಾರ ಏನಂದ್ರೆ, ಇಡೀ ಪ್ರೋಮೋದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಒಂದೇ ಒಂದು ಫ್ರೇಮ್ ಕೂಡ ಇಲ್ಲ. ವಿರಾಟ್ ಕೊಹ್ಲಿ ಕ್ರಿಕೆಟ್ ಜಗತ್ತಿನ ಅತ್ಯಂತ ದೊಡ್ಡ ಬ್ರಾಂಡ್. ಜಾಹೀರಾತು ಜಗತ್ತಿಗೂ, ಬ್ರಾಂಡ್ ಕಾಸ್ಟರ್’ಗಳಿಗೂ ಕಿಂಗ್ ಕೊಹ್ಲಿ ಚಿನ್ನದ ಮೊಟ್ಟೆ ಇಡುವ ಕೋಳಿ. ಕೊಹ್ಲಿಗಿರುವ ಜನಪ್ರಿಯತೆ, ಬ್ರಾಂಡ್ ರೋಹಿತ್ ಶರ್ಮಾಗಿಲ್ಲ. ಹೀಗಾಗಿ ಅವರನ್ನು ಏಷ್ಯಾ ಕಪ್ ಪ್ರೋಮೋದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಎಲ್ಲಿಯೂ ಬಳಸಿಕೊಂಡಿಲ್ಲ. ಇದನ್ನೂ ಓದಿ : Tanveer Sangha: ಆಸೀಸ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಭಾರತೀಯ ಮೂಲಕ ಟ್ಯಾಕ್ಸಿ ಡ್ರೈವರ್ ಪುತ್ರ

ಏಷ್ಯಾ ಕಪ್ 2023 ಟೂರ್ನಿಯ ಲೀಗ್ ಪಂದ್ಯಗಳ ವೇಳಾಪಟ್ಟಿ (Asia Cup 2023 schedule)
ಆಗಸ್ಟ್ 30: ಪಾಕಿಸ್ತಾನ Vs ನೇಪಾಳ (ಬೆಳಗ್ಗೆ 10ಕ್ಕೆ, ಮುಲ್ತಾನ್)
ಆಗಸ್ಟ್ 31: ಶ್ರೀಲಂಕಾ Vs ಬಾಂಗ್ಲಾದೇಶ (ಬೆಳಗ್ಗೆ 9.30ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 2: ಭಾರತ Vs ಪಾಕಿಸ್ತಾನ (ಬೆಳಗ್ಗೆ 9.30ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 3: ಅಫ್ಘಾನಿಸ್ತಾನ Vs ಬಾಂಗ್ಲಾದೇಶ (ಬೆಳಗ್ಗೆ 9.30ಕ್ಕೆ, ಲಾಹೋರ್)
ಸೆಪ್ಟೆಂಬರ್ 4: ಭಾರತ Vs ನೇಪಾಳ (ಬೆಳಗ್ಗೆ 9.30ಕ್ಕೆ, ಪಲ್ಲೆಕೆಲೆ)
ಸೆಪ್ಟೆಂಬರ್ 5: ಅಫ್ಘಾನಿಸ್ತಾನ Vs ಶ್ರೀಲಂಕಾ (ಬೆಳಗ್ಗೆ 9.30ಕ್ಕೆ, ಲಾಹೋರ್)

Asia Cup 2023: Where is Kohli King, Captain Rohit Sharma in Star Sports Promo?

Comments are closed.