Sourav Ganguly Admitted : ಬೆಂಗಳೂರಿನಲ್ಲಿ ಬಿಸಿಸಿಐ ಅಧ್ಯಕ್ಷರಿಗೆ ಚಿಕಿತ್ಸೆ: ಆಸ್ಪತ್ರೆಗೆ ದಾಖಲಾದ ಸೌರವ್ ಗಂಗೂಲಿ

ಐಟಿ ಸಿಟಿಯಾಗಿದ್ದ ಬೆಂಗಳೂರು ಈಗ ವೈದ್ಯಕೀಯ ಚಿಕಿತ್ಸೆಗೂ ಫೇಮಸ್ ಆಗ್ತಿದ್ದು ಹೃದಯ ಸಂಬಂಧಿ ಚಿಕಿತ್ಸೆಗೆ ಹೆಸರು ಗಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly Admitted) ನಾರಾಯಣ ಹೆಲ್ತ್ ಸಿಟಿಗೆ ದಾಖಲಾಗಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಬಳಿ ಇರುವ ನಾರಾಯಣ ಹೆಲ್ತ್ ಸಿಟಿಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದಾಖಲಾಗಿದ್ದು, ಆರೋಗ್ಯ ತಪಾಸಣೆಗೊಳಗಾಗಿದ್ದಾರೆ.

ಆರೋಗ್ಯ ತಪಾಸಣೆಗಾಗಿ ನಾರಾಯಣ ಹೆಲ್ತ್ ಸಿಟಿಗೆ ಬಂದ ಸೌರವ್ ಗಂಗೂಲಿಗೆ ನಾಲ್ಕನೇ ಮಹಡಿಯಲ್ಲಿ ವಿವಿಧ ಚೆಕ್ ಅಪ್ ನಡೆಸಲಾಗಿದೆ. ನಾರಾಯಣ ಹೆಲ್ತ್ ಸಿಟಿಯ ಪ್ಲಾಟಿನಂ ವಿಂಗ್, ಬೆಡ್ ನಂಬರ್ 423 ರಲ್ಲಿ ಆರೋಗ್ಯ ತಪಾಸಣೆ ಮಾಡಲಾಗಿದ್ದು ಕಾರ್ಡಿಯಾಕ್ ಸ್ಪೆಷಲಿಸ್ಟ್ ಡಾ ದೇವಿ ಶೆಟ್ಟಿ ನೇತೃತ್ವದಲ್ಲಿ ಆರೋಗ್ಯ ತಪಾಸಣೆಗೊಳಗಾಗಿದ್ದಾರೆ. ವರ್ಷದ ಹಿಂದೆ ಸೌರವ್ ಗಂಗೂಲಿ ಕೋಲ್ಕತ್ತಾದಲ್ಲಿ ಲಘು ಹೃದಯಾಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.

ಅಂದಿನಿಂದ ಸೌರವ್ ಗಂಗೂಲಿ ಹೃದಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದು, ನಿಯಮಿತವಾಗಿ ಆರೋಗ್ಯ ತಪಾಸಣೆಗೆ ಒಳಗಾಗುತ್ತಿದ್ದಾರೆ. ಹೀಗಾಗಿ ಸದ್ಯ ಬೆಂಗಳೂರಿನಲ್ಲಿರೋ ಸೌರವ್ ಗಂಗೂಲಿ ನಾರಾಯಣ ಹೆಲ್ತ್ ಸಿಟಿಯಲ್ಲಿ ಆರೋಗ್ಯ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ. ಡಾ.ದೇವಿ ಶೆಟ್ಟಿ ನೇತೃತ್ವದಲ್ಲಿ ವೈದ್ಯರ ತಂಡ ಸೌರವ್ ಗಂಗೂಲಿ ಆರೋಗ್ಯ ತಪಾಸಣೆ ನಡೆಸಿದ್ದು ಅಗತ್ಯ ಸಲಹೆ ಸೂಚನೆಗಳನ್ನು ಸೌರವ್ ಗಂಗೂಲಿಗೆ ನೀಡಿದೆ. ಆರೋಗ್ಯ ತಪಾಸಣೆ ಬಳಿಕ ಸೌರವ್ ಗಂಗೂಲಿ ಆಸ್ಪತ್ರೆಯಿಂದ ನಿರ್ಗಮಿಸಿದ್ದಾರೆ.

ಸೌರವ್ ಗಂಗೂಲಿ ಹಾಸ್ಪಿಟಲ್ ಗೆ ಭೇಟಿ ಮಾಡಿದ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಸಾಕಷ್ಟು ಜನರು ಸೌರವ್ ಗಂಗೂಲಿ ನೋಡಲು ಹಾಗೂ ಅವರೊಂದಿಗೆ ಪೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದರು. ಹಾಸ್ಪಿಟಲ್ ಸಿಬ್ಬಂದಿ ಕೂಡಾ ಸೌರವ್ ಗಂಗೂಲಿ ಜೊತೆ ಪೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲಾಗಿರೋ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಾ.ದೇವಿ ಶೆಟ್ಟಿ, ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಈ ಹಿಂದೆ ಹೃದಯಸಂಬಂಧಿ ತೊಂದರೆ ಕಾಣಿಸಿಕೊಂಡಿ ರೋದರಿಂದ ಅವರು ನಿಯಮಿತ ಚೆಕ್ ಅಪ್ ಗೆ ಒಳಗಾಗುತ್ತಿದ್ದಾರೆ. ಇಂದೂ ಕೂಡ ಚೆಕ್ ಅಪ್ ಗೆ ಬಂದಿದ್ದರು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಆರ್‌ಸಿಬಿ ತಂಡಕ್ಕೆ ಶ್ರೇಯಸ್ ಅಯ್ಯರ್ ನಾಯಕ : ಆರಂಭಿಕರಾಗಿ ಡೇವಿಡ್ ವಾರ್ನರ್ ಮತ್ತು ಶಿಖರ್ ಧವನ್, ಹೇಗಿದೆ ಗೊತ್ತಾ ಪ್ಲೇಯಿಂಗ್ XI

ಇದನ್ನೂ ಓದಿ :  ಚೆನ್ನೈ ಸೂಪರ್‌ ಕಿಂಗ್ಸ್‌ ಈ 3 ಆಟಗಾರರನ್ನು ಖರೀದಿಸೋದು ಖಚಿತ

(BCCI President Sourav Ganguly Admitted to a Hospital for Cardiac Check-up in Bangalore)

Comments are closed.