Indian Cricket Team bowling coach : ಬೆಂಗಳೂರು: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಳ್ಳುವ ಮುನ್ನವೇ ಬಿಸಿಸಿಐ ಶಾಕ್ ಕೊಟ್ಟಿದೆ. ಟೀಮ್ ಇಂಡಿಯಾದ ಕೋಚಿಂಗ್ ಸ್ಟಾಫ್ ನೇಮಕದ ವಿಚಾರದಲ್ಲಿ ಗಂಭೀರ್’ಗೆ ಹಿನ್ನಡೆಯಾಗಿದೆ. ಬೌಲಿಂಗ್ ಕೋಚ್ ಆಗಿ ಕರ್ನಾಟಕ ತಂಡದ ಮಾಜಿ ನಾಯಕ, ದಾವಣಗೆರೆ ಎಕ್ಸ್’ಪ್ರೆಸ್ ಖ್ಯಾತಿಯ ಆರ್.ವಿನಯ್ ಕುಮಾರ್ ( R Vinay Kumar) ಬಗ್ಗೆ ಗಂಭೀರ್ ಒಲವು ವ್ಯಕ್ತಪಡಿಸಿದ್ದರು. ವಿನಯ್ ಹೆಸರನ್ನು ಬಿಸಿಸಿಐ ಶಿಫಾರಸು ಮಾಡಿದ್ದರು. ಆದರೆ ಗಂಭೀರ್ ಮನವಿಯನ್ನು ಬಿಸಿಸಿಐ ತಿರಸ್ಕರಿಸಿದೆ.

ವಿನಯ್ ಕುಮಾರ್ ಬಗ್ಗೆ ಒಲವು ವ್ಯಕ್ತಪಡಿಸದ ಬಿಸಿಸಿಐ, ಟೀಮ್ ಇಂಡಿಯಾದ ಮಾಜಿ ಎಡಗೈ ವೇಗದ ಬೌಲರ್ ಜಹೀರ್ ಖಾನ್ ಅಥವಾ ಲಕ್ಷ್ಮೀಪತಿ ಬಾಲಾಜಿ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಕ ಮಾಡುವ ಲೆಕ್ಕಾಚಾರದಲ್ಲಿದೆ. ಆದರೆ ತಮ್ಮ ಮನವಿಯನ್ನು ಬಿಸಿಸಿಐ ತಿರಸ್ಕರಿಸಿದ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗದ ಬೌಲರ್ ಮೊರ್ನೆ ಮಾರ್ಕೆಲ್ ಅವರ ಹೆಸರನ್ನು ಬೌಲಿಂಗ್ ಕೋಚ್ ಸ್ಥಾನಕ್ಕೆ ನೂತನ ಕೋಚ್ ಗೌತಮ್ ಗಂಭೀರ್ ಬಿಸಿಸಿಐ ಮುಂದಿಟ್ಟಿದ್ದಾರೆ.
ಇದನ್ನೂ ಓದಿ : James Anderson: ಟೆಸ್ಟ್ ಕ್ರಿಕೆಟ್’ನಲ್ಲಿ 40 ಸಾವಿರ ಎಸೆತಗಳನ್ನೆಸೆದ ಬೌಲಿಂಗ್ ಮಷಿನ್ ಜೇಮ್ಸ್ ಆ್ಯಂಡರ್ಸನ್
ಗಂಭೀರ್ ಐಪಿಎಲ್’ನಲ್ಲಿ ಲಕ್ನೋ ಸೂಪರ್ ಜಯಂಟ್ಸ್ ತಂಡದ ಮೆಂಟರ್ ಆಗಿದ್ದ ವೇಳೆ ಮೊರ್ನೆ ಮಾರ್ಕೆಲ್ ಜೊತೆ ಕೆಲಸ ಮಾಡಿದ್ದರು. ಟೀಮ್ ಇಂಡಿಯಾದ ಫೀಲ್ಡಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾದ ದಿಗ್ಗಜ ಜಾಂಟಿ ರೋಡ್ಸ್ ಅವರ ಹೆಸರನ್ನು ಗಂಭೀರ್ ಶಿಫಾರಸು ಮಾಡಿದ್ದರು. ಆದರೆ ವಿದೇಶಿ ಕೋಚ್’ಗಳ ಬಗ್ಗೆ ಅಷ್ಟಾಗಿ ಅಸಕ್ತಿ ವಹಿಸದ ಬಿಸಿಸಿಐ, ಗಂಭೀರ್ ಮನವಿಯನ್ನು ತಳ್ಳಿ ಹಾಕಿತ್ತು. ಇದೀಗ ಬೌಲಿಂಗ್ ಕೋಚ್ ವಿಚಾರದಲ್ಲೂ ಗಂಭೀರ್’ಗೆ ಹಿನ್ನಡೆಯಾಗಿದೆ.

ಮುಂಬರುವ ಶ್ರೀಲಂಕಾ ವಿರುದ್ಧದ ಟಿ20 ಸರಣಿಯೊಂದಿಗೆ ಟೀಮ್ ಇಂಡಿಯಾದಲ್ಲಿ ಗಂಭೀರ ಯಾನ ಆರಂಭವಾಗಲಿದೆ. ಅದಕ್ಕೂ ಮುನ್ನ ಗಂಭೀರ್ ತಮ್ಮ ಕೋಚಿಂಗ್ ಸ್ಟಾಫ್’ಗಳನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ಟೀಮ್ ಇಂಡಿಯಾಗೆ ನೂತನ ಕೋಚ್ ಆಗಿ ಮೂರು ವರ್ಷಗಳ ಅವಧಿಗೆ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ.
ಇದನ್ನೂ ಓದಿ : ಭಾರತ ತಂಡಕ್ಕೆ ‘ರಿಂಗ್ ಮಾಸ್ಟರ್’ ಗಂಭೀರ್ ಕೋಚ್.. ನೆನಪಾಗುತ್ತಿದ್ದಾನೆ ಗ್ರೆಗ್ ಚಾಪೆಲ್..!
2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯವರೆಗೆ ಗಂಭೀರ್ ಭಾರತ ತಂಡದ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಗಂಭೀರ್ ಅವರಿಗೆ ಬಿಸಿಸಿಐ ವಾರ್ಷಿಕ 12 ಕೋಟಿ ರೂಪಾಯಿಗಳ ಸಂಭಾವನೆ ನೀಡಲಿದೆ. ಇದು ಇಲ್ಲಿಯವರೆಗೆ ಟೀಮ್ ಇಂಡಿಯಾ ಕೋಚ್’ಗೆ ಬಿಸಿಸಿಐ ನೀಡಿರುವ ಅತೀ ಹೆಚ್ಚಿನ ಸಂಭಾವನೆಯಾಗಿದೆ.
ಇದನ್ನೂ ಓದಿ : Rohit Sharma : ತನ್ನ 5 ಕೋಟಿಯನ್ನು ಸಪೋರ್ಟ್ ಸ್ಟಾಫ್’ಗೆ ನೀಡಲು ಮುಂದಾಗಿದ್ದ ರೋಹಿತ್ ಶರ್ಮಾ
BCCI Reject for Gautam Gambhir Proposal Kannadiga Vinay Kumar out of Indian Cricket Team bowling coach race