BCCI Election : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (BCCI) ಹೊಸ ಆಡಳಿತ ಮಂಡಳಿ ರಚನೆಯಾಗಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 29 ರಂದು ಬಿಸಿಸಿಐಗೆ ಚುನಾವಣೆ ನಡೆಯಲಿದ್ದು, ಹಾಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ (Roger Binny) ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Sha) ಅವರ ಸ್ಥಾನಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಅನ್ನೋದು ಕುತೂಹಲ ಮೂಡಿಸಿದೆ.

ಬಿಸಿಸಿಐ ಸಾಮಾನ್ಯ ಸಭೆಯು ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ನಡೆಯಲಿದೆ.ಬಿಸಿಸಿಐ ಚುನಾವಣೆಯು ಅಜೆಂಡಾದಲ್ಲಿ ಇಲ್ಲದೇ ಇದ್ದರೂ ಕೂಡ ಭಾರತೀಯ ಕ್ರಿಕೆಟ್ ಮಂಡಳಿಯು ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಲ್ಲದೇ ರಾಜ್ಯ ಕ್ರಿಕೆಟ್ ಸಂಸ್ಥೆಗಳು ತಮ್ಮ ನಾಮನಿರ್ದೇಶನಗಳನ್ನು ಸಲ್ಲಿಸುವಂತೆ ಕೇಳಿಕೊಂಡಿದೆ. ಬಿಸಿಸಿಐ ಅಧ್ಯಕ್ಷರಾಗಿರುವ ರೋಜರ್ ಬಿನ್ನಿ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಉಳಿಯುವ ಸಾಧ್ಯತೆಯಿದೆ. ಆದ್ರೆ ಜಯ್ ಶಾ ಅವರ ಬದಲು ಕಾರ್ಯದರ್ಶಿ ಹುದ್ದೆಗೆ ಹೊಸ ಆಯ್ಕೆ ನಡೆಯಲಿದೆ.
ಇದನ್ನೂ ಓದಿ : ಕೆಎಲ್ ರಾಹುಲ್ ನಿವೃತ್ತಿ : ಏನಿದು ಹೊಸ ಸಂಚು ?
ಬಿಸಿಸಿಐ ಕಾರ್ಯದರ್ಶಿ ಆಗಿರುವ ಜಯ್ ಶಾ ಅವರು ಡಿಸೆಂಬರ್ ಅಂತ್ಯದ ಒಳಗಾಗಿ ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೀಗಾಗಿ ಬಿಸಿಸಿಐ ಹೊಸ ಕಾರ್ಯದರ್ಶಿಯನ್ನು ಆಯ್ಕೆ ಮಾಡುವುದು ಅನಿವಾರ್ಯವಾಗಿದೆ. ಬಿಸಿಸಿಐ ಚುನಾವಣೆಯು ಸೆಪ್ಟೆಂಬರ್ 24ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಸೆಪ್ಟೆಂಬರ್ 25 ರಂದು ಮಾನ್ಯವಾದ ನಾಮಪತ್ರಗಳ ಅಂತಿಮ ಪ್ರಕಟಣೆ ನಡೆಯಲಿದೆ. ಅಲ್ಲದೇ ಉಮೇದುವಾರಿಕೆ ಸಲ್ಲಿಕೆ ಮಾಡಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 26ರಂದು ಮಧ್ಯಾಹ್ನ 1 ಗಂಟೆಯ ಒಳಗಾಗಿ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಎ.ಕೆ.ಜೋತಿ ಚುನಾವಣಾಧಿಕಾರಿಯಾಗಿದ್ದಾರೆ.

ಬಿಸಿಸಿಐ ಕಾರ್ಯದರ್ಶಿಯಾಗಿ, ಜಯ್ ಶಾ ಅವರು ಅತ್ಯುತ್ತಮ ಆಡಳಿತಗಾರ ಅನ್ನೋದನ್ನು ಸಾಬೀತು ಪಡಿಸಿದ್ದಾರೆ ಐಪಿಎಲ್ ಮತ್ತು ಮಹಿಳಾ ಪ್ರೀಮಿಯರ್ ಲೀಗ್‌ನ ಮಾಧ್ಯಮ ಹಕ್ಕು ಮತ್ತು ಪ್ರಾಂಚೈಸಿಗಳ ಮಾರಾಟದಿಂದ ಬಿಸಿಸಿಐನ ಆರ್ಥಿಕ ಶಕ್ತಿ ಅತ್ಯಧಿಕವಾಗಿದೆ. ಇದಕ್ಕೆ ಪ್ರಮುಖ ಕಾರಣೀಕರ್ತರಾಗಿದ್ದೇ ಜಯ್ ಶಾ. ಬಿಸಿಸಿಐ ಎಲ್ಲಾ ವ್ಯಾಪಾರಗಳಿಂದಲೂ ಬರೋಬ್ಬರಿ 60,000 ಕೋಟಿ ರೂ. ಆದಾಯ ಗಳಿಸಿತ್ತು.
ಇದನ್ನೂ ಓದಿ : IPL 2025 : ಎಂಎಸ್ ಧೋನಿ ನಿವೃತ್ತಿ: ಸಿಎಸ್‌ಕೆ ತಂಡಕ್ಕೆ ರಿಷಬ್ ಪಂತ್
ಜಯ್ ಶಾ ಐಸಿಸಿ ಅಧ್ಯಕ್ಷರಾಗುವ ಕಾರಣದಿಂದಾಗಿ ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಕೂಡ ಆಯ್ಕೆಯಲ್ಲಿ ಪ್ರಮುಖ ಸ್ಥಾನದಲ್ಲಿದ್ದಾರೆ. ಇನ್ನೊಂದೆಡೆಯಲ್ಲಿ ಬಿಸಿಸಿಐ ಖಜಾಂಜಿ ಆಶಿಶ್ ಶೇಲಾರ್ ಕೂಡ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದಾರೆ.
BCCI Secretary Jai Shah BCCI Election on September 29