ಅಹ್ಮದಾಬಾದ್ : ತೀವ್ರಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು (Border-Gavaskar test series) ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ 2-1ರ ಅಂತರದಲ್ಲಿ ಕೈವಶ ಮಾಡಿಕೊಂಡಿದೆ. ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೋಮವಾರ ಅಂತ್ಯಗೊಂಡ 4ನೇ ಟೆಸ್ಟ್ ಪಂದ್ಯ ಡ್ರಾದಲ್ಲಿ (Team India’s victory) ಅಂತ್ಯಗೊಂಡಿತು. ಇದರೊಂದಿಗೆ 4 ಪಂದ್ಯಗಳ ಟೆಸ್ಟ್ ಸರಣಿ 2-1ರಲ್ಲಿ ಭಾರತದ ಪಾಲಾಯಿತು.
ನಾಗ್ಪುರದಲ್ಲಿ ನಡೆದ ಪ್ರಥಮ ಟೆಸ್ಟ್ ಹಾಗೂ ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದಿದ್ರೆ, ಇಂದೋರ್’ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 9 ವಿಕೆಟ್’ಗಳಿಂದ ಗೆದ್ದುಕೊಂಡಿತ್ತು. ಅಹ್ಮದಾಬಾದ್ ಟೆಸ್ಟ್ ಪಂದ್ಯ ಡ್ರಾಗೊಂಡರೂ ಟೀಮ್ ಇಂಡಿಯಾ ಸರಣಿ ಗೆದ್ದು ಸಂಭ್ರಮಿಸಿದೆ. ಸರಣಿ ಗೆದ್ದ ನಂತರ ಟೀಮ್ ಇಂಡಿಯಾ ಆಟಗಾರರು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿ ಹಿಡಿದು ಸಂಭ್ರಮಿಸಿದರು. ಆ ಸಂಭ್ರಮಾಚರಣೆಯ exclusive ಫೋಟೋಗಳು newsnextಗೆ ಲಭ್ಯವಾಗಿವೆ.

ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಜಿರುವ ಭಾರತ, ಕಾಂಗರೂಗಳ ವಿರುದ್ಧದ ಏಕದಿನ ಸರಣಿಗೆ (India Vs Australia ODI series) ಸಜ್ಜಾಗುತ್ತಿದೆ. ಆತಿಥೇಯ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮಾರ್ಚ್ 17ರಂದು (ಶುಕ್ರವಾರ) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ವೈಯಕ್ತಿಕ ಕಾರಣಗಳಿಂದಾಗಿ ಮೊದಲ ಏಕದಿನ ಪಂದ್ಯದಿಂದ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದು, ಉಪನಾಯಕ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. 2ನೇ ಏಕದಿನ ಪಂದ್ಯಕ್ಕೆ ರೋಹಿತ್ ತಂಡಕ್ಕೆ ವಾಪಸ್ ಆಗಲಿದ್ದಾರೆ.

ಮತ್ತೊಂದೆಡೆ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗಿರುವ ಹಿನ್ನೆಲೆಯಲ್ಲಿ ಉಪನಾಯಕ ಸ್ಟೀವನ್ ಸ್ಮಿತ್ ಅವರಿಗೆ ಆಸೀಸ್ ತಂಡದ ನಾಯಕ ಪಟ್ಟ ಕಟ್ಟಲಾಗಿದೆ. ಪ್ಯಾಟ್ ಕಮಿನ್ಸ್ ಬಾರ್ಡರ್-ಗವಾಸ್ಕರ್ ಸರಣಿಯ ಕೊನೆಯ 2 ಪಂದ್ಯಗಳಿಗೆ ಅಲಭ್ಯರಾಗಿದ್ದರಿಂದ ಸ್ಟೀವನ್ ಸ್ಮಿತ್ ಅವರೇ ಕಾಂಗರೂ ಪಡೆಯನ್ನು ಮುನ್ನಡೆಸಿದ್ದರು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ- ಮೊದಲ ಪಂದ್ಯಕ್ಕೆ ಅಲಭ್ಯ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಜೈದೇವ್ ಉನಾದ್ಕಟ್, ಅಕ್ಷರ್ ಪಟೇಲ್, ಇಶಾನ್ ಕಿಶನ್, ಯುಜ್ವೇಂದ್ರ ಚಹಲ್.

ಆಸ್ಟ್ರೇಲಿಯಾ ತಂಡ: ಸ್ಟೀವನ್ ಸ್ಮಿತ್ (ನಾಯಕ), ಶಾನ್ ಅಬಾಟ್, ಆಶ್ಟನ್ ಏಗರ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ನೇಥನ್ ಎಲೀಸ್, ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್’ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋಯ್ನಿಸ್, ಡೇವಿರ್ ವಾರ್ನರ್, ಆಡಂ ಜಾಂಪ.
ಇದನ್ನೂ ಓದಿ : India Vs Australia ODI series : ವಾರ್ನರ್ ಭಾರತಕ್ಕೆ ವಾಪಸ್, ಕಾಂಗರೂ ಪಡೆಗೆ ಸ್ಟೀವ್ ಸ್ಮಿತ್ ಕ್ಯಾಪ್ಟನ್
ಭಾರತ Vs ಆಸ್ಟ್ರೇಲಿಯಾ ಏಕದಿನ ಸರಣಿಯ ವೇಳಾಪಟ್ಟಿ :
ಪ್ರಥಮ ಏಕದಿನ: ಮಾರ್ಚ್ 17 (ವಾಂಖೆಡೆ ಕ್ರೀಡಾಂಗಣ, ಮುಂಬೈ)
2ನೇ ಏಕದಿನ: ಮಾರ್ಚ್ 19 (ವೈಎಸ್’ಆರ್ ಕ್ರಿಕೆಟ್ ಮೈದಾನ, ವಿಶಾಖಪಟ್ಟಣ)
3ನೇ ಏಕದಿನ: ಮಾರ್ಚ್ 22 (ಎಂ.ಎ ಚಿದಂಬರಂ ಕ್ರೀಡಾಂಗಣ, ಚೆನ್ನೈ)
Border-Gavaskar test series : Click here for Exclusive photos of Team India’s victory!